ನಟ ಪ್ರಕಾಶ್ ರೈ ಪಾಲ್ಗೊಂಡಿದ್ದ ವೇದಿಕೆಯನ್ನು ಗೋಮೂತ್ರದಿಂದ ಶುದ್ಧಗೊಳಿಸಿದ ಬಿಜೆಪಿ ಕಾರ್ಯಕರ್ತರು
ಶಿರಸಿಯಲ್ಲಿ ನಟ ಪ್ರಕಾಶ್ ರೈ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆ ಹಾಗೂ ಮಠದ ಆವರಣವನ್ನು ಬಿಜೆಪಿ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದಾರೆ...

Published On :
ಶಿರಸಿ: ಶಿರಸಿಯಲ್ಲಿ ನಟ ಪ್ರಕಾಶ್ ರೈ ಅವರು ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆ ಹಾಗೂ ಮಠದ ಆವರಣವನ್ನು ಬಿಜೆಪಿ ಕಾರ್ಯಕರ್ತರು ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದಾರೆ.
ಶಿರಸಿ ನಗರದ ಶ್ರೀ ರಾಘವೇಂದ್ರ ಮಠದಲ್ಲಿ ಪ್ರೀತಿ ಪದಗಳ ಪಯಣ ಸಮಿತಿಯು ಶನಿವಾರ ನಮ್ಮ ಸಂವಿಧಾನ-ನಮ್ಮ ಹೆಮ್ಮೆ ಹೆಸರಿನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು. ಈ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದ್ದ ಪ್ರಕಾಶ್ ರೈ ಅವರು ಸಂವಿಧಾನ ಬದಲಾಯಿಸುವ ಹೇಳಿಕೆ ನೀಡಿದ್ದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ ಅವರನ್ನು ಟೀಕಿಸಿದ್ದರು,
ಬಳಿಕ ಪ್ರಕಾಶ್ ರೈ ಪಾಲ್ಗೊಂಡಿದ್ದ ಕಾರ್ಯಕ್ರಮದ ವೇದಿಕೆಯನ್ನು ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ಸೋಮವಾರ ಗೋಮೂತ್ರ ಸಿಂಪಡಿಸಿ ಶುದ್ಧಗೊಳಿಸಿದ್ದರು.
ಗೋಮಾಂಸ ತಿನ್ನುವವರು ಹಾಗೂ ಹಿಂದೂ ದೇವತೆಗಳಿಗೆ ಅಗೌರವ ತೋರುವ ವ್ಯಕ್ತಿಯ ಭೇಟಿಯಿಂದ ಶಿರಸಿ ನಗರವೇ ಮಲಿನವಾಗಿದೆ. ಇಂತಹ ಸೋಗಲಾಡಿ ಬುದ್ಧಿಜೀವಿ ಪ್ರಕಾಶ್ ರೈ ಅವರನ್ನು ಹಿಂದೂ ಸಮಾಜ ಕ್ಷಮಿಸದು. ಕಾರ್ಯಕ್ರಮದಿಂದ ಅಪವಿತ್ರಗೊಂಡಿದ್ದ ಧಾರ್ಮಿಕ ಕ್ಷೇತ್ರವನ್ನು ಗೋಮೂತ್ರ ಹಾಕಿ ಶುದ್ಧಗೊಳಿಸಲಾಯಿತು ಎಂದು ಯುವ ಮೋರ್ಚಾದ ನಗರ ಘಟಕದ ಅಧ್ಯಕ್ಷ ವಿಶಾಲ್ ಮರಾಠೆಯವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnatakaಕರ್ನಾಟಕಶಿರಸಿPrakash rajಪ್ರಕಾಶ್ ರೈಶುದ್ದೀಕರಣCow urineಗೋಮೂತ್ರBJP workersಬಿಜೆಪಿ ಕಾರ್ಯಕರ್ತರುSirsiCleansing
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


