ಗೋವಾ ಸಚಿವರ ಹೇಳಿಕೆ ಬಾಲಿಶ, ಬೇಜವಾಬ್ದಾರಿತನದ್ದು: ಸಿಎಂ ಸಿದ್ದರಾಮಯ್ಯ
ಮಹದಾಯಿ ವಿವಾದ ಸಂಬಂಧ ಕನ್ನಡಿಗರನ್ನು ಹರಾಮಿಗಳು ಎಂದು ಹೇಳಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ...

Published On :
ಬೆಂಗಳೂರು: ಮಹದಾಯಿ ವಿವಾದ ಸಂಬಂಧ ಕನ್ನಡಿಗರನ್ನು ಹರಾಮಿಗಳು ಎಂದು ಹೇಳಿದ್ದ ಗೋವಾ ಜಲಸಂಪನ್ಮೂಲ ಸಚಿವ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತೀವ್ರವಾಗಿ ಕಿಡಿಕಾರಿದ್ದಾರೆ.
ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, ಗೋವಾ ಸಚಿವ ವಿನೋದ ಪಾಲ್ಯೇಕರ್ ಅವರು ಕರ್ನಾಟಕದ ವಿರುದ್ಧ ಗಂಭೀರವಾದ ಆರೋಪವನ್ನು ಮಾಡಿದ್ದಾರೆ, ಮಹಾದಾಯಿ ವಿವಾದ ಸಂಬಂಧ ಕರ್ನಾಟಕ ಜನರಿಗೆ ಹಣವನ್ನು ನೀಡುತ್ತಿದೆ ಎಂದು ಹೇಳಿದ್ದಾರೆ. ಈ ರೀತಿಯ ಹೇಳಿಕೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಗೋವಾ ಸಚಿವರು ಬಾಲಿಶ ಹಾಗೂ ಬೇಜವಾಬ್ದಾರಿಯುತವಾಗಿ ಹೇಳಿಕೆಯನ್ನು ನೀಡಿದ್ದಾರೆಂದು ಹೇಳಿದ್ದಾರೆ.
ಬಳಿಸ ಮಾತನಾಡಿರುವ ಕಾಂಗ್ರೆಸ್ ಸಂಸದ ಬಿಕೆ. ಹರಿಪ್ರಸಾದ್ ಅವರು, ಕೇಂದ್ರದಲ್ಲಿ ಆಡಳಿತ ನಡೆಸುತ್ತಿರುವ ಕೇಂದ್ರ ಮೋದಿ ಸರ್ಕಾರ ಮಹದಾಯಿ ವಿವಾದ ಸಂಬಂಧ ಕೀಳು ಮಟ್ಟದ ರಾಜಕೀಯವನ್ನು ಮಾಡುತ್ತಿದೆ. ಮಹದಾಯಿ ವಿವಾದದಲ್ಲಿ ಮೋದಿಯವರು ತಾರತಮ್ಯ ಮಾಡುತ್ತಿದ್ದಾರೆ. ನರ್ಮದಾ ನದಿ ನೀರು ಕುರಿತಂತೆ ಮಧ್ಯಪ್ರದೇಶದಲ್ಲಿ ಮಾಡಿದ ರಾಜಕೀಯವನ್ನು ಮಹದಾಯಿ ವಿಚಾರದಲ್ಲಿ ಪ್ರಧಾನಿ ಮೋದಿ ಮಾಡುತ್ತಿದ್ದಾರೆ. ಮೋದಿ ಸರ್ಕಾರ ಆಸಕ್ತಿ ತೋರಿಸಿದ್ದೇ ಆದರೆ, ವಿವಾದ ಖಂಡಿತವಾಗಿಯೂ ಇತ್ಯರ್ಥಗೊಳ್ಳುತ್ತದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


