ಉಡುಗೊರೆಯಾಗಿ ಬಂದ ಬೆಳ್ಳಿ ಆಭರಣಗಳನ್ನು ಮಲೈ ಮಹದೇಶ್ವರ ಬೆಟ್ಟಕ್ಕೆ ನೀಡಲು ಸಿದ್ದರಾಮಯ್ಯ ನಿರ್ಧಾರ
ರಾಜ್ಯದಲ್ಲಿ ನಾಲ್ಕೂವರೆ ವರ್ಷಗಳಿಂದ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಸೇವಾ ಅವಧಿಯಲ್ಲಿ ಅಭಿಮಾನಿಗಳು ನೀಡಿದ್ದ ಬೆಳ್ಳಿ ಆಭರಣಗಳ ಉಡುಗೊರೆಗಳನ್ನು ಚಾಮರಾಜನಗರ ಜಿಲ್ಲೆಯಲ್ಲಿರುವ ಮಲೈ ಮಹದೇಶ್ವರ ದೇಗುಲಕ್ಕೆ ನೀಡಲು ನಿರ್ಧರಿಸಿದ್ದಾರೆ...

Published On :
ಬೆಂಗಳೂರು: ರಾಜ್ಯದಲ್ಲಿ ನಾಲ್ಕೂವರೆ ವರ್ಷಗಳಿಂದ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ತಮ್ಮ ಸೇವಾ ಅವಧಿಯಲ್ಲಿ ಅಭಿಮಾನಿಗಳು ನೀಡಿದ್ದ ಬೆಳ್ಳಿ ಆಭರಣಗಳ ಉಡುಗೊರೆಗಳನ್ನು ಚಾಮರಾಜನಗರ ಜಿಲ್ಲೆಯಲ್ಲಿರುವ ಮಲೈ ಮಹದೇಶ್ವರ ದೇಗುಲಕ್ಕೆ ನೀಡಲು ನಿರ್ಧರಿಸಿದ್ದಾರೆ.
ರಾಜ್ಯದಲ್ಲಿ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬಳಿಕ ಸಿದ್ದರಾಮಯ್ಯ ಅವರಿಗೆ ಬೆಳ್ಳಿಯ ಗದೆ, ಕಿರೀಟ ಸೇರಿದಂತಚೆ ಹಲವು ಬೆಳ್ಳಿಯ ಆಭರಣಗಳು ಉಡುಗೊರೆಯಾಗಿ ಬಂದಿವೆ. ಈ ಆಭರಣಗಳನ್ನು ಮಹದೇಶ್ವರನಿಗೆ ನೀಡಲು ಮುಂದಾಗಿರುವ ಸಿದ್ದರಾಮಯ್ಯ ಅವರು, ಅದರಿಂದ ಬೆಳ್ಳಿಯ ರಥ ಮಾಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆಂದು ತಿಳಿದುಬಂದಿದೆ.
ಸಿದ್ದರಾಮಯ್ಯ ಅವರ ಈ ನಿರ್ಧಾರ ಪ್ರತಿಪಕ್ಷ ಬಿಜೆಪಿ ನಾಯಕರಿಗೆ ತಿರುಗೇಟು ನೀಡಿದಂತಾಗಿದೆ. ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ದಿನಗಳು ಬಾಕಿಯಿದ್ದು, ಸಿದ್ದರಾಮಯ್ಯ ಅವರ ಈ ನಿರ್ಧಾರ ಪಕ್ಷಕ್ಕೆ ಮತ್ತಷ್ಟು ಬಲ ನೀಡಿದಂತಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


