ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ: ಅವಿವೇಕದ ಕ್ರಮ ಕೈಗೊಳ್ಳದಂತೆ ವಿಧಾನಸಭೆಗೆ ಹೈಕೋರ್ಟ್ ಸೂಚನೆ
ಕರ್ನಾಟಕ ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಿದ್ದ ಕರ್ನಾಟಕ ವಿಧಾನಸಭೆಗೆ ಹಿನ್ನಡೆ ಉಂಟಾಗಿದ್ದು, ಅವಿವೇಕದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಕರ್ನಾಟಕ ವಿಧಾನಸಭೆಗೆ ಸೂಚನೆ

Published On :
ಬೆಂಗಳೂರು: ಕರ್ನಾಟಕ ಲೋಕಾಯುಕ್ತ ರಿಜಿಸ್ಟಾರ್ ವಿರುದ್ಧ ನಿಲುವಳಿ ಸೂಚನೆ ಮಂಡಿಸಿದ್ದ ಕರ್ನಾಟಕ ವಿಧಾನಸಭೆಗೆ ಹಿನ್ನಡೆ ಉಂಟಾಗಿದ್ದು, ಅವಿವೇಕದ ಕ್ರಮ ಕೈಗೊಳ್ಳದಂತೆ ಹೈಕೋರ್ಟ್ ಕರ್ನಾಟಕ ವಿಧಾನಸಭೆಗೆ ಸೂಚನೆ ನೀಡಿದೆ.
ಲೋಕಾಯುಕ್ತ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಂತರ ನಿಲುವಳಿ ಸೂಚನೆ ವಿರುದ್ಧ ಹೈಕೋರ್ಟ್ ನ ನ್ಯಾ.ಎಎಸ್ ಭೋಪಣ್ಣ ಅವರು ಮಧ್ಯಂತರ ಆದೇಶ ಹೊರಡಿಸಿದ್ದು, ವಿಧಾನಸಭಾಧ್ಯಕ್ಷರು, ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೇರಿದಂತೆ ಪ್ರಕರಣದಲ್ಲಿ ಹೆಸರಿಸಲಾಗಿದ್ದವರಿಗೆ ನೊಟೀಸ್ ಜಾರಿ ಮಾಡಲಾಗಿದೆ.
ಡಿ.26, 2017 ರಂದು ಕರ್ನಾಟಕ ವಿಧಾನಸಭೆಯಿಂದ ಜಾರಿಯಾಗಿದ್ದ ನಿಲುವಳಿ ಸೂಚನೆಗೆ ಸಂಬಂಧಿಸಿದ್ದ ನೋಟಿಸ್ ನ್ನು ಲೋಕಾಯುಕ್ತ ಹಾಗೂ ರಿಜಿಸ್ಟಾರ್ ಹೈಕೋರ್ಟ್ ನಲ್ಲಿ ಪ್ರಶ್ನಿಸಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Karnataka High Courtಕರ್ನಾಟಕ ಹೈಕೋರ್ಟ್Karnataka legislative assemblyಕರ್ನಾಟಕ ವಿಧಾನಸಭೆLokayukta Registrarಲೋಕಾಯುಕ್ತ ರಿಜಿಸ್ಟಾರ್
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


