ರಾಜ್ಯ

ಸುವರ್ಣಸೌಧ ಕಾಮಗಾರಿ ಹೆಚ್ಚುವರಿ ವೆಚ್ಚಕ್ಕೆ ಕ್ಲೀನ್ ಚಿಟ್ ನೀಡಿದ ಸರ್ಕಾರ

ಬೆಳಗಾವಿಯಲ್ಲಿ ನಿರ್ಮಿಸಲಾದ ಸುವರ್ಣ ವಿಧಾನಸೌಧ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿಯಾಗಿ ಖರ್ಚಾದ ಹಣವನ್ನು ಭರಿಸುವುದಕ್ಕೆ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ...

ಸುವರ್ಣಸೌಧ ಕಾಮಗಾರಿ ಹೆಚ್ಚುವರಿ ವೆಚ್ಚಕ್ಕೆ ಕ್ಲೀನ್ ಚಿಟ್ ನೀಡಿದ ಸರ್ಕಾರ
ವಿಧಾನಸೌಧ (ಸಂಗ್ರಹ ಚಿತ್ರ)
Published On :
ಬೆಂಗಳೂರು: ಬೆಳಗಾವಿಯಲ್ಲಿ ನಿರ್ಮಿಸಲಾದ ಸುವರ್ಣ ವಿಧಾನಸೌಧ ನಿರ್ಮಾಣ ಕಾಮಗಾರಿಗೆ ಹೆಚ್ಚುವರಿಯಾಗಿ ಖರ್ಚಾದ ಹಣವನ್ನು ಭರಿಸುವುದಕ್ಕೆ ಸರ್ಕಾರ ಬುಧವಾರ ಒಪ್ಪಿಗೆ ನೀಡಿದೆ. 
2009ರಲ್ಲಿ ರೂ.230 ಕೋಟಿ ವೆಚ್ಚದಲ್ಲಿ ಬೆಳಗಾವಿಯಲ್ಲಿ ಸುವರ್ಣಸೌಧವನ್ನು ನಿರ್ಮಾಣ ಮಾಡಲಾಗಿತ್ತು. 2014ರಲ್ಲಿ ಕಾಮಗಾರಿ ಪೂರ್ಣಗೊಂಡು, ಒಟ್ಟು ಮೊತ್ತದ ಹೆಚ್ಚಾಗಿರುವ ಬಗ್ಗೆ ಆರೋಪಗಳು ಕೇಳಿಬಂದಿತ್ತು. ಕಾಮಗಾರಿಯ ಒಟ್ಟಾ ಮೊತ್ತ ರೂ.438 ಕೋಟಿಯಾಗಿತ್ತು. ಈ ಹಿನ್ನಲೆಯಲ್ಲಿ 2014ರಲ್ಲಿ ರಾಜ್ಯ ಸರ್ಕಾರ ಹೆಚ್ಚುವರಿ ಕಾರ್ಯದರ್ಶಿ ನೇತೃತ್ವದಲ್ಲಿ ತನಿಖೆಗೆ ಆದೇಶಿಸಿತ್ತು. 
ಸಂಪುಟದ ಒಪ್ಪಿಗೆ ಪಡೆಯದೆಯೇ ಕಾಲಕಾಲಕ್ಕೆ ಆಡಳಿತಾತ್ಮಕ ಅನುಮತಿ ಪಡೆದು ಯೋಜನಾ ವೆಚ್ಚವನ್ನು ಹೆಚ್ಚಿಸಲಾಗಿದೆ. ಇದರ, ಜೊತೆಗೆ ಇನ್ನೂ ಕೆಲವು ಲೋಪ-ದೋಷಗಳಿವೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು. ಆದರೆ, ಅಂತಿಮವಾಗಿ ಖರ್ಚಾಗಿದ್ದ ಹಣ ಬಿಡುಗಡೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ ಎಂದೂ ಕಾನೂನು ಸಚಿವ ಟಿ.ಬಿ ಜಯಚಂದ್ರ ಅವರು ಸುದ್ದಿಗೋಷ್ಟಿಯಲ್ಲಿ ತಿಳಿಸಿದ್ದಾರೆ. 
ಸಂಪುಟ ಸಭೆಯಲ್ಲಿ ತೆಗೆದುಕೊಂಡ ನಿರ್ಧಾರಗಳು ಈ ಕೆಳಗಿನಂತಿವೆ...
  • ಮೈಸೂರು ನಗರ ಪೊಲೀಸ್ ಆಯುಕ್ತರ ಕಚೇರಿ ನಿರ್ಮಾಣಕ್ಕೆ ರೂ. 4.10 ಅನುದಾನ
  • ದಾಂಡೇಲಿ ಒಳಚರಂಡಿ ಯೋಜನೆಗೆ ರೂ. 146 ಕೋಟಿ ಆಡಳಿತಾತ್ಮಕ ಅನುಮೋದನೆ. 
  • ರೂ.76 ಕೋಟಿ ವೆಚ್ಚದಲ್ಲಿ ಹಳಿಯಾಳ ಒಳಚರಂಡಿ ಯೋಜನೆಗೆ ಆಡಳಿತಾತ್ಮಕ ಅನುಮೋದನೆ. 
  • ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲಿ ಬ್ಯಾಸ್ಕೆಟ್ ಬಾಲ್ ಅಂಗಳ, ಅಂತಾರಾಷ್ಟ್ರೀಯ ಗುಣಮಟ್ಟದ ಸ್ಕೋರ್ ಬೋರ್ಡ್, ಇತರೆ ಉಪಕರಣಗಳ ಖರೀದಿಗೆ ರೂ.2.36 ಕೋಟಿ ಅನುದಾನ. 
  • ಮುಂದಿನ 3 ವರ್ಷದಲ್ಲಿ ರಾಜ್ಯದ ಹೈಕೋರ್ಟ್ ಮತ್ತು ವಿಭಾಗೀಯ ಪೀಠಗಳನ್ನು ಪೇಪರ್'ಲೆಸ್'ಗೊಳಿಸಲು ಸರ್ಕಾರ ನಿರ್ಧರಿಸಿದ್ದು, ಸಮಗ್ರ ನ್ಯಾಯಾಲಯ ಪ್ರಕರಣ ನಿರ್ವಹಣಾ ವ್ಯವಸ್ಥೆಗೆ ರೂ.43.5 ಕೋಟಿ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ. ಮುಂದಿನ ಮೂರು ವರ್ಷದಲ್ಲಿ ಇದು ಜಾರಿಗೆ ಬರಲಿದೆ. 
  • ಧಾರವಾಡದ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆ ಮತ್ತು ಕಲಬುರಗಿಯ ಖಾಜಾ ಬಂದೆ ನವಾಜ್ ಶಿಕ್ಷಣ ಸಂಸ್ಥೆಗೆ ಸ್ವಾಯತ್ತ ವಿಶ್ವವಿದ್ಯಾಲಯದ ಮಾನ್ಯತೆ ನೀಡಲು ಸಂಪುಟ ಒಪ್ಪಿಗೆ ನೀಡಿದ್ದು, ಈ ಸಂಬಂಧ ಅಧಿವೇಶನದಲ್ಲಿ ವಿಧೇಯಕವನ್ನು ಮಂಡಿಸಲಾಗುವುದು. 
  • ರಾಜೀವ್ ಗಾಂಧಿ ಆರೋಗ್ಯ ವಿಶ್ವವಿದ್ಯಾಲಯದಲ್ಲಿ ಎಂಡ್ ಟು ಎಂಡ್ ಆಟೋಮೇಷನ್ ಅಳವಡಿಸಲು ಬೇಕಾದ ಸಿಸ್ಟಮ್ ಇಂಟಿಗ್ರೇಷನ್ ನ್ನು ರೂ.51.34 ಕೋಟಿ ಮೊತ್ತದಲ್ಲಿ ಖರೀದಿಸಲು ಅನುಮೋದನೆ ನೀಡಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.