ರಾಜ್ಯ

ಬೆಳ್ಳಂದೂರು ಕೆರೆ ನಿರ್ವಹಣೆಗೆ ಪ್ರತ್ಯೇಕ ಹಣ ಕೇಳಿದ ಬೆಂಗಳೂರು ಅಭಿವೃದ್ಧಿ ಸಚಿವ

ಬೆಂಗಳೂರಿನ ಬೆಳ್ಳಂದೂರು ಕೆರೆ ಪದೇಪದೆ ಬೆಂಕಿ ಮತ್ತು ವಿಷಪೂರಿತ ನೊರೆಯಿಂದ ಸುದ್ದಿಯಾಗುತ್ತಿದ್ದು, ಇದರ ಸುರಕ್ಷಿತ ನಿರ್ವಹಣೆಗಾಗಿ...

ಬೆಳ್ಳಂದೂರು ಕೆರೆ ನಿರ್ವಹಣೆಗೆ ಪ್ರತ್ಯೇಕ ಹಣ ಕೇಳಿದ ಬೆಂಗಳೂರು ಅಭಿವೃದ್ಧಿ ಸಚಿವ
ಕೆಜೆ ಜಾರ್ಜ್
Published On :
ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರು ಕೆರೆ ಪದೇಪದೆ ಬೆಂಕಿ ಮತ್ತು ವಿಷಪೂರಿತ ನೊರೆಯಿಂದ ಸುದ್ದಿಯಾಗುತ್ತಿದ್ದು, ಇದರ ಸುರಕ್ಷಿತ ನಿರ್ವಹಣೆಗಾಗಿ 2018-19ನೇ ಸಾಲಿನ ಬಜೆಟ್ ನಲ್ಲಿ ಪ್ರತ್ಯೇಕವಾಗಿ ಹಣ ಒದಗಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿರುವುದಾಗಿ ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ಶನಿವಾರ ಹೇಳಿದ್ದಾರೆ.
ಇಂದು ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಜಾರ್ಜ್ ಅವರು, ಕೆರೆ ಪುನಶ್ಚೇತನಕ್ಕಾಗಿ ರಾಜ್ಯ ಸರ್ಕಾರ ಎಲ್ಲಾ ರೀತಿಯ ಕ್ರಮಗಳನ್ನು ಕೈಗೊಂಡಿದೆ. ಆದರೆ ಇದಕ್ಕೆ ಹಣ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರಾಕರಿಸುತ್ತಿದೆ ಎಂದು ಆರೋಪಿಸಿದರು.
ಕೆರೆಗಳ ಪುನಶ್ಚೇತನಕ್ಕಾಗಿ ಕೇಂದ್ರ ಸರ್ಕಾರ ಸಾಕಷ್ಟು ಹಣ ಬಿಡುಗಡೆ ಮಾಡಿದರೂ ರಾಜ್ಯ ಸರ್ಕಾರ ಬೆಳ್ಳಂದೂರು ಕೆರೆ ಸ್ವಚ್ಛಗೊಳಿಸುವ ಬಗ್ಗೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂಬ ಬಿಜೆಪಿಯ ಆರೋಪಕ್ಕೆ ಪ್ರತಿಕ್ರಿಯಿಸಿದ ಸಚಿವರು, ಹಣ ನೀಡುವಂತೆ ರಾಜ್ಯ ಸರ್ಕಾರ ಮಾಡಿದೆ ಮನವಿಗೆ ಕೇಂದ್ರ ಸ್ಪಂದಿಸಿಲ್ಲ ಎಂದು ಪ್ರತ್ಯಾರೋಪ ಮಾಡಿದರು.
ರಾಷ್ಟ್ರೀಯ ಹಸಿರು ನ್ಯಾಯಾಧಿಕರಣದ ನಿರ್ದೇಶನದಂತೆ ರಾಜ್ಯ ಸರ್ಕಾರ ಬೆಳ್ಳಂದೂರು ಕೆರೆಯನ್ನು ಸ್ವಚ್ಛಗೊಳಿಸಿದೆ. ಆದರೂ ಮತ್ತೆ ಏಕೆ ಬೆಂಕಿ ಕಾಣಿಸಿಕೊಂಡಿತು ಎಂಬುದರ ಬಗ್ಗೆ ಪೊಲೀಸರು ತನಿಖೆ ನಡೆಸುತ್ತಿದ್ದಾರೆ ಎಂದು ಜಾರ್ಜ್ ತಿಳಿಸಿದರು.
ವಿಷಯುಕ್ತ ನೊರೆ ಉಗುಳುತ್ತಿರುವ ಬೆಳ್ಳಂದೂರು ಕೆರೆ ಪುನಶ್ಚೇತನಕ್ಕೆ ಸರ್ಕಾರ ಕೋಟಿ ಕೋಟಿ ವೆಚ್ಚ ಮಾಡಿದರೂ ಯಾವುದೇ ಪ್ರಯೋಜನೆ ಆಗಿಲ್ಲ. ನಿನ್ನೆ ಮತ್ತೆ ಯೆಮ್ಲೂರು ಬದಿಯ ಬೆಳ್ಳಂದೂರು ಕೆರೆಯಲ್ಲಿ ಬೆಂಕಿ ಕಾಣಿಸಿಕೊಂಡು ದಟ್ಟ ಹೊಗೆ ಆವರಿಸಿದ್ದರಿಂದ ಜನರಲ್ಲಿ ಆತಂಕ ಸೃಷ್ಟಿ ಮಾಡಿತ್ತು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.