ರಾಜ್ಯ

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಗೌರವ ನೀಡಿ; ಪ್ರಧಾನಿ ಮೋದಿಗೆ ಎಸ್.ಎಂ.ಕೃಷ್ಣ ಪತ್ರ

ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಡಾ.ಶಿವಕುಮಾರ್ ಸ್ವಾಮೀಜಿಗಳಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ 'ಭಾರತ ರತ್ನ' ಗೌರವವನ್ನು ನೀಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ...

ಸಿದ್ಧಗಂಗಾ ಶ್ರೀಗಳಿಗೆ ಭಾರತ ರತ್ನ ಗೌರವ ನೀಡಿ; ಪ್ರಧಾನಿ ಮೋದಿಗೆ ಎಸ್.ಎಂ.ಕೃಷ್ಣ ಪತ್ರ
ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಡಾ.ಶಿವಕುಮಾರ್ ಸ್ವಾಮೀಜಿ
Published On :
ಬೆಂಗಳೂರು: ತ್ರಿವಿಧ ದಾಸೋಹಿ, ಸಿದ್ಧಗಂಗಾ ಮಠದ ಡಾ.ಶಿವಕುಮಾರ್ ಸ್ವಾಮೀಜಿಗಳಿಗೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ 'ಭಾರತ ರತ್ನ' ಗೌರವವನ್ನು ನೀಡಿ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ಮುಖಂಡ ಎಸ್.ಎಂ.ಕೃಷ್ಣ ಅವರು ಶನಿವಾರ ಪತ್ರ ಬರೆದಿದ್ದಾರೆ. 
ರಾಜ್ಯದ ಲಕ್ಷಾಂತರ ಭಕ್ತರು ಸ್ವಾಮೀಜಿ ಅವರನ್ನು ನಡೆದಾಡುವ ದೇವರು ಎಂದೇ ಆರಾಧಿಸುತ್ತಿದ್ದಾರೆ. ಅವರು ಭಾರತ ರತ್ನಕ್ಕೆ ಭಾಜನರಾಗುವುದನ್ನು ಜನರು ಕಾತುರದಿಂದ ಎದುರು ನೋಡುತ್ತಿದ್ದಾರೆ. ಕಾಯ ಯೋಗಿ ಆಗಿರುವ ಅವರನ್ನು ಕೇಂದ್ರ ಸರ್ಕಾರ ಪುರಸ್ಕಾರ ನೀಡಿ ಗೌರವಿಸಬೇಕೆಂದು ಪತ್ರದಲ್ಲಿ ಮನವಿ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ. 
111 ವರ್ಷ ವಯೋಮಾನದ ಶಿವಕುಮಾರ ಸ್ವಾಮೀಜಿಗಳು ಕಳೆದ 8 ದಶಕಗಳಿಗೂ ಅಧಿಕ ಕಾಲದಿಂದ ಸಮಾಜ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಸಾಮಾಜಿಕ ಸಮಾನತೆಗಾಗಿ ಶ್ರಮಿಸುತ್ತಿರುವ ಸ್ವಾಮೀಜಿ ಮಾನವತಾವಾದಿಯಾಗಿದ್ದಾರೆ. ಕನ್ನಡ, ಇಂಗ್ಲಿಷ್ ಮತ್ತು ಸಂಸ್ಕೃತ ಸಾಹಿತ್ಯದ ಜ್ಞಾನವನ್ನು ಹೊಂದಿದ್ದಾರೆ. ಸಮಾದದಲ್ಲಿನ ಕೆಟ್ಟ ಆಚರಣೆ, ಮೂಢನಂಬಿಕೆ ಮತ್ತು ತಾರತಮ್ಯವನ್ನು ಹೊಡೆದೋಡಿಸಲು ಶ್ರಮಿಸುತ್ತಿದ್ದು, ಜನರಲ್ಲಿ ಜಾಗೃತಿ ಮೂಡಿಸುವ ಕೆಲಸವನ್ನು ಮಾಡುತ್ತಿದ್ದಾರೆ. 
ಯಾವುದೇ ವರ್ಗ ಮತ್ತು ಮತಭೇದ ಇಲ್ಲದೆ ಪ್ರತಿಯೊಬ್ಬ ನಾಗರೀಕರು ದರ್ಶನ ಪಡೆಯುವ ವಾತಾವರಣವನ್ನು ಸೃಷ್ಟಿಸಿದ್ದಾರೆ. ಸ್ವಾಮೀಜಿ ಮನುಕುಲಕ್ಕೆ ಸಲ್ಲಿಸಿದ ಸೇವೆಗೆ ಪ್ರತಿಯಾಗಿ ಮತ್ತು ಲಕ್ಷಾಂತರ ಭಕ್ತರ ನಿರೀಕ್ಷೆಯಂತೆ ದೇಶದ ಅತ್ಯುನ್ನತ ನಾಗರಿಕ ಪುರಸ್ಕಾರವಾದ ಭಾರತ ರತ್ನವನ್ನು ಅವರಿಗೆ ಪ್ರದಾನ ಮಾಡಬೇಕು. ಭಾರತ ರತ್ನ ಪುರಸ್ಕಾರಕ್ಕೆ ಶಿವಕುಮಾರ ಸ್ವಾಮೀಜಿಗಳು ಅರ್ಹರಾಗಿದ್ದಾರೆಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆಂದು ವರದಿಗಳು ತಿಳಿಸಿವೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.