ಸಿರಿಧಾನ್ಯ ಮೇಳದಿಂದ ಮೂರು ದಿನಗಳಲ್ಲಿ 107 ಕೋಟಿ ವ್ಯವಹಾರ: ಕೃಷ್ಣ ಬೈರೇಗೌಡ
ಇಲ್ಲಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಿಂದ ಕಳೆದ ಮೂರು ದಿನಗಳಲ್ಲಿ 107 ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.

ಬೆಂಗಳೂರು:ಇಲ್ಲಿನ ಅರಮನೆ ಮೈದಾನದಲ್ಲಿ ಆಯೋಜಿಸಿದ್ದ ಅಂತಾರಾಷ್ಟ್ರೀಯ ಸಿರಿಧಾನ್ಯ ಮತ್ತು ಸಾವಯವ ಮೇಳದಿಂದ ಕಳೆದ ಮೂರು ದಿನಗಳಲ್ಲಿ 107 ಕೋಟಿ ರೂಪಾಯಿ ವ್ಯವಹಾರ ನಡೆದಿದೆ ಎಂದು ಕೃಷಿ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
ವಿವಿಧ ಕಂಪನಿಗಳೊಂದಿಗೆ ಮಾಡಿಕೊಂಡ ಒಪ್ಪಂದದಿಂದಾಗಿ ಮುಂದಿನ ಮೂರು ವರ್ಷದಲ್ಲಿ 340 ಕೋಟಿ ರೂ. ವ್ಯಾಪಾರ ಸಂಬಂಧ ವೃದ್ಧಿಯಾಗುವ ನಿರೀಕ್ಷೆಯಿದೆ.
ಮೇಳಕ್ಕೆ ಸುಮಾರು 2 ಲಕ್ಷ ಜನರು ಆಗಮಿಸಿದ್ದಾರೆ, ಜನರ ಆಹಾರ ಪದ್ಧತಿಯಲ್ಲಿ ಬದಲಾವಣೆಯಾಗಲಿದೆ ಎಂಬ ವಿಶ್ವಾಸವಿದ್ದು, ಸಿರಿಧಾನ್ಯ ಮತ್ತು ಸಾವಯವ ಕೃಷಿ ಪದಾರ್ಥಗಳ ಬಳಕೆಯನ್ನು ಪ್ರೋತ್ಸಾಹಿಸಲಾಗುವುದು ಎಂದು ಅವರು ನಿನ್ನೆ ಹೇಳಿದ್ದಾರೆ.
ಸಿರಿಧಾನ್ಯ ಉತ್ಪಾದನೆ ಮತ್ತು ರಪ್ತಿನಲ್ಲಿ ಭಾರತ ಮುಂಚೂಣಿಯಲ್ಲಿದ್ದು, ಮುಂದಿನ ಪೀಳಿಗೆಗೆ ಕಿರು ಆಹಾರದ ಬಳಕೆಯನ್ನು ಪ್ರೋತ್ಸಾಹಿಸುವಲ್ಲಿ ಕರ್ನಾಟಕ ಮುಂದಿದೆ ಎಂದು ಕೃಷ್ಣ ಬೈರೇಗೌಡ ತಿಳಿಸಿದ್ದಾರೆ.
16 ಕೃಷಿ ಉದ್ಯಮಗಳು ಸೇರಿದಂತೆ 44 ಸ್ಟಾರ್ಟ್ ಅಪ್ ಸ್ಥಾಪಿಸಲು ರಾಜ್ಯಸರ್ಕಾರದಿಂದ ಅನುಮೋದನೆ ಪಡೆಯಲಾಗಿದೆ. ಆದರೆ, ಅಷ್ಟು ಪ್ರಮಾಣದ ಹಣ ಸಾಕಾಗದ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದೆ . ಕೃಷಿ ಅಭಿವೃದ್ಧಿಗಾಗಿ ರಾಜ್ಯಸರ್ಕಾರ ಹೊಸ ಸಂಶೋಧನೆ ಮತ್ತು ಪ್ರಯೋಗಾಲಯಗಳನ್ನು ಸ್ಥಾಪಿಸಿದೆ ಎಂದು ಮಾಹಿತಿ ತಂತ್ರಜ್ಞಾನ ಸಚಿವ ಪ್ರಿಯಾಂಕ್ ಖರ್ಗೆ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


