ರೋಹಿಣಿ ಸಿಂಧೂರಿ ವರ್ಗಾವಣೆ: ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಚುನಾವಣೆ ಆಯೋಗ ಪತ್ರ
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿ 7 ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಮುಖ್ಯ...

Published On :
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿ 7 ಐಎಎಸ್ ಅಧಿಕಾರಿಗಳ ವರ್ಗಾವಣೆ ಬೆನ್ನಲ್ಲೇ ಚುನಾವಣಾ ಆಯೋಗ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ ರತ್ನಪ್ರಭಾ ಅವರಿಗೆ ಪತ್ರ ಬರೆದಿದೆ.
ಮತದಾರರ ಪಟ್ಟಿ ಪರಿಷ್ಕರಣೆಯಲ್ಲಿ ಪಾಲ್ಗೊಂಡಿರುವ ಐಎಎಸ್ ಅಧಿಕಾರಿಗಳ ವರ್ಗಾವಣೆಗೂ ಮುನ್ನ ರಾಜ್ಯ ಸರ್ಕಾರ ರಾಜ್ಯ ಚುನಾವಣೆ ಆಯೋಗದ ಗಮನಕ್ಕೆ ತಂದು ವರ್ಗಾವಣೆ ಮಾಡಬೇಕು ಎಂದು ಮುಖ್ಯ ಕಾರ್ಯದರ್ಶಿಗೆ ಸೂಚಿಸಿದೆ.
ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳ ಮೇಲುಸ್ತುವಾರಿಯಲ್ಲೇ ನಡೆಯುವುದರಿಂದ ಮತದಾರರ ಪಟ್ಟಿ ಸೇರ್ಪಡೆಯ ಅಂತಿಮ ದಿನದವರೆಗೆ ಜಿಲ್ಲಾಧಿಕಾರಿಗಳನ್ನ ವರ್ಗಾವಣೆ ಮಾಡದಂತೆ ಚುನಾವಣಾ ಆಯೋಗ ಈ ಮೊದಲೇ ರಾಜ್ಯ ಸರ್ಕಾರಕ್ಕೆ ಸೂಚಿಸಿತ್ತು. ಆದರೂ, ರೋಹಿಣಿ ಸಿಂಧೂರಿ ಸೇರಿ 7 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಲಾಗಿದೆ.
ಈ ಮಧ್ಯೆ, ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಬೇಕಾದ ಬಲವಾದ ಕಾರಣವಿದ್ದರೆ ಮೊದಲೇ ಚುನಾವಣಾ ಆಯೋಗಕ್ಕೆ ಮಾಹಿತಿ ನೀಡಬೇಕು ಎಂದು ಸೂಚಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಸನ ಜಿಲ್ಲಾ ಉಸ್ತುವಾರಿ ಸಚಿವ ಎ ಮಂಜು ಅವರ ಒತ್ತಡಕ್ಕೆ ಮಣಿದು ಪ್ರಮಾಣಿಕ ಅಧಿಕಾರಿ ರೋಹಿಣಿ ಸಿಂಧೂರಿಯನ್ನ ವರ್ಗಾವಣೆ ಮಾಡಲಾಗಿದೆ ಎಂದು ಪ್ರತಿಪಕ್ಷಗಳು ಆರೋಪಿಸಿವೆ.
ಇನ್ನು ಈ ಬಗ್ಗೆ ಪ್ರತಿಕ್ರಿಯಿಸಿರುವ ಸಿಎಂ, ಯಾರದ್ದೋ ಒತ್ತಡಕ್ಕೆ ಮಣಿದು ವರ್ಗಾವಣೆ ಮಾಡಿಲ್ಲ. ಅದೊಂದು ಆಡಳಿತಾತ್ಮಕ ನಿರ್ಧಾರವಾಗಿದೆ. ನಾವು ಮಹಿಳಾ ಅಧಿಕಾರಿಗಳಿಗೆ ಅನ್ಯಾಯ ಮಾಡಿಲ್ಲ. ನಮ್ಮ ವಿರುದ್ಧ ಇರುವವರು ಪ್ರತಿಭಟನೆ ನಡೆಸುತ್ತಿದ್ದಾರೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


