ರಾಜ್ಯ

ವಿಧಾನಸಭಾ ಚುನಾವಣೆ: ಅಪರಾಧ ಪ್ರಕರಣಗಳ ಮಾಹಿತಿ ಕಲೆ ಹಾಕಲು ಮುಂದಾದ ಚುನಾವಣಾ ಆಯೋಗ

ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಕೇವಲ ರಾಜಕೀಯ ಪಕ್ಷಗಳಷ್ಟೇ ಅಲ್ಲದೆ ಚುನಾವಣಾ ಆಯೋಗ ಕೂಡ ತನ್ನ ಕಾರ್ಯಗಳನ್ನು ಆರಂಭಿಸಿದೆ...

ವಿಧಾನಸಭಾ ಚುನಾವಣೆ: ಅಪರಾಧ ಪ್ರಕರಣಗಳ ಮಾಹಿತಿ ಕಲೆ ಹಾಕಲು ಮುಂದಾದ ಚುನಾವಣಾ ಆಯೋಗ
ಚುನಾವಣಾ ಆಯೋಗ (ಸಂಗ್ರಹ ಚಿತ್ರ)
Published On :
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿಯಿದ್ದು, ಚುನಾವಣೆ ಹಿನ್ನೆಲೆಯಲ್ಲಿ ಕೇವಲ ರಾಜಕೀಯ ಪಕ್ಷಗಳಷ್ಟೇ ಅಲ್ಲದೆ ಚುನಾವಣಾ ಆಯೋಗ ಕೂಡ ತನ್ನ ಕಾರ್ಯಗಳನ್ನು ಆರಂಭಿಸಿದೆ. 
ವಿಧಾಸನಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ಈ ಹಿಂದೆ ನಡೆದ ಚುನಾವಣೆ ವೇಳೆ ದಾಖಲಾದ ಅಪರಾಧ ಪ್ರಕರಣಗಳ ಕುರಿತ ಮಾಹಿತಿಗಳನ್ನು ಸಂಗ್ರಹಿಸಲು ಚುನಾವಣಾ ಆಯೋಗ ಮುಂದಾಗಿದೆ. 
ಇದರಂತೆ ಈ ಹಿಂದೆ ನಡೆದ ಚುನಾವಣೆ ವೇಳೆ ನಡೆದ ನೀತಿ ಸಂಹಿತೆ ಉಲ್ಲಂಘನೆ ಸೇರಿದಂತೆ ಎಲ್ಲಾ ಪ್ರಕರಣ ಮಾಹಿತಿ ನೀಡುವಂತೆ ಪೊಲೀಸ್ ಇಲಾಖೆಗೆ ಸೂಚನೆ ನೀಡಿದೆ ಎಂದು ತಿಳಿದುಬಂದಿದೆ. 
ಈ ಹಿಂದೆ ನಡೆದ ಚುನಾವಣೆ ವೇಳೆ ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಲ್ಲಿ ದಾಖಲಾಗಿರುವ ಎಲ್ಲಾ ಪ್ರಕರಣಗಳ ಮಾಹಿತಿ ನೀಡುವಂತೆ ಆಯೋಗ ರಾಜ್ಯ ಪೊಲೀಸ್ ಮುಖ್ಯಸ್ಥರಿಗೆ ಪತ್ರ ಬರೆದಿದೆ ಎಂದು ವರದಿಗಳು ತಿಳಿಸಿವೆ. 
20136ನೇ ವಿಧಾನಸಭಾ ಚುನಾವಣೆ ಹಾಗೂ 2014ರ ಲೋಕಸಭಾ ಚುನಾವಣೆ ವೇಳೆ ನಡೆದ ನೀತಿ ಸಂಹಿತೆ ಉಲ್ಲಂಘನೆ, ಅಪರಾಧ ಕೃತ್ಯಗಳು ಸೇರಿದಂತೆ ಎಲ್ಲಾ ಪ್ರಕರಣಗಳ ಮಾಹಿತಿ ನೀಡುವಂತೆ ಪತ್ರದಲ್ಲಿ ಆಯೋಗ ತಿಳಿಸಿದೆ. ಅಲ್ಲದೆ. ಪ್ರಕರಣಗಳ ಪ್ರಸ್ತುತ ಬೆಳವಣಿಗೆಗಳ ಮಾಹಿತಿ ತಿಳಿಸುವಂತೆಯೂ ತಿಳಿಸಿದೆ ಎನ್ನಲಾಗುತ್ತಿದೆ. 
ಆಯೋಗ ಪತ್ರ ಬರೆದಿರುವ ಹಿನ್ನಲೆಯಲ್ಲಿ ಕೂಡಲೇ ಕಾರ್ಯಪ್ರವೃತ್ತರಾಗಿರುವ ಪೊಲೀಸ್ ಇಲಾಖೆಯ ಮುಖ್ಯಸ್ಥರು ಎಲ್ಲಾ ಜಿಲ್ಲೆಗಳ ಪೊಲೀಸ್ ಮುಖ್ಯಸ್ಥರಿಗೆ ಮಾಹಿತಿಯನ್ನು ರವಾನಿಸಿ, ಪ್ರಕರಣಗಳ ಮಾಹಿತಿಗಳನ್ನು ನೀಡುವಂತೆ ತಿಳಿಸಿದ್ದಾರೆನ್ನಲಾಗುತ್ತಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.