ಬೆಂಗಳೂರು: ಪ್ರಿಯತಮ ಕೈಕೊಟ್ಟಿದ್ದಕ್ಕೆ ಮನನೊಂದ ಯುವತಿ ಆತ್ಮಹತ್ಯೆ
ಪ್ರಿಯತಮ ಕೈ ಕೊಟ್ಟಿದ್ದರಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗರಭಾವಿಯಲ್ಲಿ ನಡೆದಿದೆ.

ಬೆಂಗಳೂರು: ಪ್ರಿಯತಮ ಕೈ ಕೊಟ್ಟಿದ್ದರಿಂದ ಮನನೊಂದ ಯುವತಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಾಗರಭಾವಿಯಲ್ಲಿ ನಡೆದಿದೆ.
ಚಾಮರಾಜನಗರದ ನಿಷ್ಕಲ್ಲಾ ಆತ್ಮಹತ್ಯೆ ಮಾಡಿಕೊಂಡು ದುರ್ದೈವಿ. ಶ್ರೀದೇವಿ ಆಸ್ಪತ್ರೆಯಲ್ಲಿ ನರ್ಸ್ ಆಗಿ ಕೆಲಸ ಮಾಡುತ್ತಿದ್ದ ನಿಷ್ಕಲ್ಲಾ ಆಸ್ಪತ್ರೆಯಿಂದ ನೀಡಿದ್ದ ಕೊಠಡಿಯಲ್ಲಿಯೇ ವಾಸಿಸುತ್ತಿದ್ದಳು. ಇಂದು ಬೆಳ್ಳಿಗೆ 8 ಗಂಟೆ ಸುಮಾರಿನಲ್ಲಿ ಅದೇ ಕೊಠಡಿಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.
ನಿಷ್ಕಲ್ಲಾ, ಸಹೋದ್ಯೋಗಿ ಗಂಗಾಧರ್ ಎಂಬವರನ್ನು ಪ್ರೀತಿಸುತ್ತಿದ್ದಳು. ಆದರೆ. ಕೆಲ ವಾರಗಳ ಹಿಂದೆ ಆತ ಪ್ರೀತಿಯನ್ನು ನಿರಾಕರಿಸಿದ್ದಾನೆ. ಅವರ ಪ್ರೀತಿಗೆ ಅವರ ಮನೆಯಲ್ಲಿ ವಿರೋಧ ಇತ್ತೆಂದು ಪೊಲೀಸರು ತಿಳಿಸಿದ್ದಾರೆ.
ಗಂಗಾಧರ್ ಮೋಸ ಮಾಡಿದ್ದರಿಂದ ಆಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಆರೋಪಿಸಿ ನಿಷ್ಕಲ್ಲಾ ಪೋಷಕರು ಚಂದ್ರಲೇಔಟ್ ಪೊಲೀಸರಿಗೆ ದೂರು ನೀಡಿದ್ದಾರೆ. ಪ್ರಕರಣ ದಾಖಲಿಸಿಕೊಂಡಿದ್ದು, ತನಿಖೆ ನಡೆಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


