ರೋಹಿಣಿ ಸಿಂಧೂರಿ ವರ್ಗಾವಣೆ ಸಮರ್ಥಿಸಿಕೊಂಡ ಸಿಎಂ ಸಿದ್ದರಾಮಯ್ಯ
ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದು, ಸರ್ಕಾರ ಕಾರ್ಯವೈಖರಿಯಲ್ಲಿ ಚುನಾವಣಾ ಆಯೋಗ ಮೂಗು ತೂರಿಸಬಾರದು ಎಂದು ಖಾರವಾಗಿ ನುಡಿದಿದ್ದಾರೆ...

Published On :
ಮೈಸೂರು: ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಮರ್ಥಿಸಿಕೊಂಡಿದ್ದು, ಸರ್ಕಾರ ಕಾರ್ಯವೈಖರಿಯಲ್ಲಿ ಚುನಾವಣಾ ಆಯೋಗ ಮೂಗು ತೂರಿಸಬಾರದು ಎಂದು ಖಾರವಾಗಿ ನುಡಿದಿದ್ದಾರೆ.
ಈ ಕುರಿತಂತೆ ಮಾತನಾಡಿರುವ ಚುನಾವಣಾ ಆಯೋಗ ವರ್ಗಾವಣೆ ಪ್ರಕ್ರಿಯೆಗೆ ತಡೆ ನೀಡಿರುವುದರ ಬಗ್ಗೆ ನನಗೆ ಮಾಹಿತಿ ಇರಲಿಲ್ಲ.ರಾಜ್ಯದಲ್ಲಿ ಚುನಾವಣೆ ಇನ್ನೂ ಘೋಷಣೆಯಾಗಿಲ್ಲ. ಮತದಾರರು ಪಟ್ಟಿಯನ್ನು ಪರಿಷ್ಕರಣೆ ಮಾಡುವುದು ನಗರ ಸ್ಥಳೀಯ ಸಂಸ್ಥೆಯ ಅಧಿಕಾರಿಗಳು. ಆದ್ದರಿಂದ ಜಿಲ್ಲಾಧಿಕಾರಿ ವರ್ಗಾವಣೆಯಲ್ಲಿ ಯಾವುದೇ ನಿಯಮಗಳು ಉಲ್ಲಂಘನೆಯಾಗಿಲ್ಲ. ಆಡಳಿತ ದೃಷ್ಟಿಯಿಂದ ರಾಜ್ಯ ಸರ್ಕಾರ ತೆಗೆದುಕೊಂಡ ಕ್ರಮ ಸಮರ್ಥನೀಯ. ಚುನಾವಣಾ ಆಯೋಗ ರಾಜ್ಯದ ಕಾರ್ಯವೈಖರಿಯಲ್ಲಿ ಮೂಗು ತೂರಿಸಬಾರದು ಎಂದು ಹೇಳಿದ್ದಾರೆ.
ಇದೇ ವೇಳೆ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಅವರ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಅವರು, ದೇವೇಗೌಡ ಅವರಿಗೆ ರೋಹಿಣಿ ಅವರು ಒಬ್ಬರೇ ಪ್ರಾಮಾಣಿಕ ಅಧಿಕಾರಿಯೇ? ಎಂದು ಪ್ರಶ್ನಿಸಿದ್ದಾರೆ.
ನಿಗದಿತ ಯೋಜನೆಯಂತೆಯೇ ಬಜೆಟ್ ಮಂಡನೆ ಮಾಡಲಾಗುತ್ತದೆ. ಇದಕ್ಕೂ ಚುನಾವಣೆಗೂ ಸಂಬಂಧವಿಲ್ಲ. ಆಗ ನೀತಿ ಸಂಹಿತೆ ಕೂಡ ಜಾರಿಯಲ್ಲಿರುವುದಿಲ್ಲ. ಇದ್ದರೂ ಮಂಡಿಸಬಹುದು. ಈ ಬಗ್ಗೆ ಮಾತನಾಡುವುದಕ್ಕೂ ಮುನ್ನ ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ಅವರ ಸಂವಿಧಾನವನ್ನು ಓದಿಕೊಳ್ಳಬೇಕು. ಜಗದೀಶ್ ಶೆಟ್ಟರ್ ಅವರು ಮುಖ್ಯಮಂತ್ರಿಯಾಗಿದ್ದಾಗ ಇಂಥಹದ್ದೇ ಸಂದರ್ಭದಲ್ಲಿ ಬಜೆಟ್ ಮಂಡನೆ ಮಾಡಿದ್ದರು. ಆಗ ಏಕೆ ಬಾಯಿಮುಚ್ಚಿಕೊಂಡಿದ್ದರು ಎಂದು ತಿರುಗೇಟು ನೀಡಿದ್ದಾರೆ.
ಚುನಾವಣೆ ಫಲಿತಾಂಶ ಈಗಲೇ ಕಾಣುತ್ತಿದೆ. ನಾವು ಗೆದ್ದಿದ್ದೇವೆ. ಬಿಜೆಪಿಯವರು ಸೋತಿದ್ದಾರೆ. ಸೋಲಿನ ಹತಾಶೆಯಿಂದಲೇ ಅಸಂಬದ್ಧವಾದ ಹೇಳಿಕೆಗಳನ್ನು ನೀಡುತ್ತಿದ್ದಾರೆ.
ಇದೇ ವೇಳೆ ಮಹದಾಯಿ ವಿವಾದ ಕುರಿತಂತೆ ಆಚರಿಸಲಾಗುವ ಕರ್ನಾಟಕ ಬಂದ್ ಕುರಿತಂತೆ ಪ್ರತಿಕ್ರಿಯೆ ನೀಡಿರುವ ಅವರು, ಕನ್ನಡ ಪರ ಸಂಘಟನೆಗಳು ಕರೆ ನೀಡಿರುವ ಬಂದ್ ನಲ್ಲಿ ನಮ್ಮ ಪಾತ್ರವಿಲ್ಲ. ಬಿಜೆಪಿ ರ್ಯಾಲಿ ಹಿನ್ನಲೆಯಲ್ಲಿ ಜನರನ್ನು ಹಾಗೂ ಬಸ್ ಗಳನ್ನು ತಡೆಯುವ ಕೆಟ್ಟ ರಾಜಕೀಯಕ್ಕೆ ನಾನು ಕೈ ಹಾಕುವುದಿಲ್ಲ. ರಾಜ್ಯದಲ್ಲಿ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಾಮರ್ಥ್ಯ ಪೊಲೀಸರಿಗಿದೆ ಎಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


