ಪದೇ ಪದೇ ಟ್ರಾಫಿಕ್ ನಿಯಮ ಉಲ್ಲಂಘಿಸಿದರೆ, ಲೈಸೆನ್ಸ್ ರದ್ದು
ರಾಜಧಾನಿ ಬೆಂಗಳೂರು ನಗರದಲ್ಲಿ ಪದೇ ಪದೇ ಟ್ರಾಫಿಕ್ ನಿಯಮ ಉಲ್ಲಂಘಿಸುವವರ ಪ್ರಕರಣ ಹೆಚ್ಚಾಗುತ್ತಿದ್ದು, ಅಂತಹವರ ಲೈಸೆನ್ಸ್ ರದ್ದುಗೊಳಿಸಲು ಸಾರಿಗೆ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.

ಬೆಂಗಳೂರು: ರಾಜಧಾನಿ ಬೆಂಗಳೂರು ನಗರದಲ್ಲಿ ಪದೇ ಪದೇ ಟ್ರಾಫಿಕ್ ನಿಯಮ ಉಲ್ಲಂಘಿಸುವವರ ಪ್ರಕರಣ ಹೆಚ್ಚಾಗುತ್ತಿದ್ದು, ಅಂತಹವರ ಲೈಸೆನ್ಸ್ ರದ್ದುಗೊಳಿಸಲು ಸಾರಿಗೆ ಇಲಾಖೆ ಅಧಿಕಾರಿಗಳು ಮುಂದಾಗಿದ್ದಾರೆ.
ಹಲವು ಪ್ರಕರಣಗಳಲ್ಲಿ ಚಾಲಕರೇ ಹೆಚ್ಚಾಗಿ ನಿಯಮ ಉಲ್ಲಂಘಿಸುತ್ತಿದ್ದಾರೆ. ಆದರೆ, ಆ ವಾಹನದ ಮಾಲೀಕರು ಬೇರೆಯಾಗಿರುತ್ತಾರೆ. ಲೈಸೆನ್ಸ್ ಮಾಲೀಕರ ವಿರುದ್ಧವೇ ಪೊಲೀಸರು ದೂರು ದಾಖಲಿಸಿದ್ದು, ಲೈಸೆನ್ಸ್ ರದ್ದುಪಡಿಸುವಂತೆ ಶಿಫಾರಸ್ಸು ಮಾಡಿದ್ದಾರೆ. ವಾಹನಗಳು ಸುರಕ್ಷಿತವಾಗಿ ಚಾಲನೆ ಮಾಡದಿದ್ದಲ್ಲಿ, ಸನ್ ಗ್ಲಾಸ್ ಅಳವಡಿಸದಿದ್ದರೆ ಆ ವಾಹನದ ಮಾಲೀಕರೇ ಸಂಪೂರ್ಣ ಜವಾಬ್ದಾರರಾಗುತ್ತಾರೆ ಎಂದು ಸಾರಿಗೆ ಆಯುಕ್ತ ಬಿ. ದಯಾನಂದ್ ತಿಳಿಸಿದ್ದಾರೆ.
ಡಟಾ ಬೇಸ್ ಪ್ರಕ್ರಿಯೆ ತ್ವರಿತಗತಿಯಲ್ಲಿ ನಡೆಯುತ್ತಿದ್ದು, ಕೆಲ ವಾರಗಳಲ್ಲೇ ಪೂರ್ಣಗೊಳ್ಳಲಿದೆ. ಇದರಿಂದ ಪೊಲೀಸ್ ಸಿಬ್ಬಂದಿಯೊಂದಿಗೆ ಮಾಹಿತಿ ಹಂಚಿಕೊಳ್ಳಲು ಸಾರಾಗವಾಗಲಿದ್ದು, ಅಮಾನತು ಪ್ರಕ್ರಿಯೆಯನ್ನು ಸುಲಭವಾಗಿ ಮಾಡಬಹುದಾಗಿದೆ.
ಪದೇ ಪದೇ ನಿಯಮ ಉಲ್ಲಂಘಿಸುವವರು, ಕುಡಿದು ಚಾಲನೆ ಮಾಡುವವರನ್ನು ಪತ್ತೆಹಚ್ಚಿ ಪರವಾನಗಿ ರದ್ದುಗೊಳಿಸಲಾಗುವುದು ಎಂದು ಅವರು ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


