ಆರ್. ಅಶೋಕ್ ವಿರುದ್ಧದ ಎಫ್ ಐ ಆರ್ ಗೆ ಹೈಕೋರ್ಟ್ ತಡೆ
ಬಿಜೆಪಿ ಮಾಜಿ ಉಪಮುಖ್ಯಮಂತ್ರಿ, ಶಾಸಕ ಆರ್. ಅಶೋಕ್ ಗೆ ಬಿಗ್ ರಿಲೀಪ್ ಸಿಕ್ಕಿದೆ. ಬಗರ್ ಹುಕುಂ ಭೂ ಹಗರಣ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ಎಫ್ ಐಆರ್ ಗೆ ಹೈಕೋರ್ಟ್ ಇಂದು ತಡೆ ನೀಡಿದೆ.

ಬೆಂಗಳೂರು: ಬಿಜೆಪಿ ಮಾಜಿ ಉಪಮುಖ್ಯಮಂತ್ರಿ, ಶಾಸಕ ಆರ್. ಅಶೋಕ್ ಗೆ ಬಿಗ್ ರಿಲೀಪ್ ಸಿಕ್ಕಿದೆ. ಬಗರ್ ಹುಕುಂ ಭೂ ಹಗರಣ ಸಂಬಂಧ ಭ್ರಷ್ಟಾಚಾರ ನಿಗ್ರಹ ದಳ ದಾಖಲಿಸಿದ್ದ ಎಫ್ ಐಆರ್ ಗೆ ಹೈಕೋರ್ಟ್ ಇಂದು ತಡೆ ನೀಡಿದೆ.
ರಾಜಕೀಯ ದುರುದ್ದೇಶದಿಂದ ತಮ್ಮ ಮೇಲೆ ಎಫ್ ಐ ಆರ್ ದಾಖಲಿಸಲಾಗಿದ್ದು, ಅದನ್ನು ತೆರವುಗೊಳಿಸುವಂತೆ ಆರ್. ಅಶೋಕ್ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಆರ್. ಬೂದಿಹಾಳ್, ಎಫ್ ಐಆರ್ ಗೆ ತಡೆ ನೀಡಿ ತೀರ್ಪು ನೀಡಿದ್ದಾರೆ.
ಆರ್. ಅಶೋಕ್ 1998ರಿಂದ 2006ರವರೆಗೆ ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ಸಂದರ್ಭದಲ್ಲಿ ಬೆಂಗಳೂರು ದಕ್ಷಿಣ ತಾಲೂಕ್ ಬಗರ್ ಹುಕುಂ ಭೂ ಪರಿವರ್ತನೆ ಸಮಿತಿಯ ಅಧ್ಯಕ್ಷರಾಗಿದ್ದರು. ಈ ಅವಧಿಯಲ್ಲಿ ನಡೆದಿದ್ದ ಹಗರಣದಲ್ಲಿ ಆರ್.ಅಶೋಕ್ ಫಲಾನುಭವಿಯೂ ಆಗಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹ ದಳ ಆರೋಪಿಸಿತ್ತು,
ಈ ಹಗರಣ ಸಂಬಂಧ ತನಿಖೆ ನಡೆಯುತ್ತಿದ್ದು, ಸಮಿತಿ ಅನರ್ಹರಿಗೂ ಭೂಮಿ ಮಂಜೂರು ಮಾಡಿರುವುದು ಕಂಡುಬಂದ ಹಿನ್ನೆಲೆಯಲ್ಲಿ ಭ್ರಷ್ಟಾಚಾರ ನಿಗ್ರಹ ದಳ ಆರ್. ಅಶೋಕ್ ಸೇರಿದಂತೆ ಹಲವು ಸರ್ಕಾರಿ ಅಧಿಕಾರಿಗಳು ಮತ್ತಿತರರ ವಿರುದ್ಧ ಎಫ್ ಐಆರ್ ದಾಖಲಿಸಿತ್ತು.
ಬೆಂಗಳೂರು ದಕ್ಷಿಣ ತಾಲೂಕು ತಹಸೀಲ್ದಾರ್ ರಾಮಚಂದ್ರಯ್ಯ, ಕಂದಾಯ ನಿರೀಕ್ಷಕ ಗವಿಗೌಡ, ಗ್ರಾಮ ಲೆಕ್ಕಿಗ ಶಶಿಧರ ಮತ್ತಿತರನ್ನು ಭ್ರಷ್ಟಾಚಾರ ನಿಗ್ರಹ ದಳ ಪೊಲೀಸರಿಂದ ಬಂಧಿಸಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


