ರಾಜ್ಯ

ಬಿಜಿಎಸ್ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಶಸ್ತ್ರಚಿಕಿತ್ಸೆ: ಸ್ಟೆಂಟ್ ಅಳವಡಿಕೆ ಯಶಸ್ವಿ

ಅನಾರೋಗ್ಯ ಎದುರಿಸುತ್ತಿದ್ದ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಶಿವಕುಮಾರ ಸ್ವಾಮಿಗಳಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಸ್ಟೆಂಟ್ ಅಳವಡಿಕೆ ಮಾಡಲಾಗಿದೆ.

ಬಿಜಿಎಸ್ ಆಸ್ಪತ್ರೆಯಲ್ಲಿ ಸಿದ್ದಗಂಗಾ ಶ್ರೀಗಳಿಗೆ ಶಸ್ತ್ರಚಿಕಿತ್ಸೆ: ಸ್ಟೆಂಟ್ ಅಳವಡಿಕೆ ಯಶಸ್ವಿ
ಶಿವಕುಮಾರ ಸ್ವಾಮೀಜಿ
Published On :
ಬೆಂಗಳೂರು: ಅನಾರೋಗ್ಯ ಎದುರಿಸುತ್ತಿದ್ದ ಸಿದ್ದಗಂಗಾ ಮಠದ ಹಿರಿಯ ಶ್ರೀಗಳಾದ ಶಿವಕುಮಾರ ಸ್ವಾಮಿಗಳಿಗೆ ಯಶಸ್ವಿ ಶಸ್ತ್ರಚಿಕಿತ್ಸೆ ಮೂಲಕ ಸ್ಟೆಂಟ್ ಅಳವಡಿಕೆ ಮಾಡಲಾಗಿದೆ. 
ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಯಲ್ಲಿ ಶ್ರೀಗಳಿಗೆ ಶಸ್ತ್ರಚಿಕಿತ್ಸೆ ನಡೆಸಲಾಗಿದ್ದು, ಶ್ರೀಗಳು ಚೇತರಿಸಿಕೊಳ್ಳುತ್ತಿರುವ ಮಾಹಿತಿ ಲಭ್ಯವಾಗಿದ್ದು, ವಿಶೇಷ ವಾರ್ಡ್ ನಲ್ಲಿ ಶ್ರೀಗಳು ಚೇತರಿಸಿಕೊಲ್ಳುತ್ತಿದ್ದಾರೆ. ಇದೇ ವೇಳೆ ಶ್ರೀಗಳ ಆರೋಗ್ಯಕ್ಕಾಗಿ ಹೆಚ್ಚಿನ ಕಾಳಜಿ ವಹಿಸಲಾಗಿದ್ದು ಶಸ್ತ್ರಚಿಕಿತ್ಸೆ ನಂತರ ಶ್ರೀಗಳಿಗೆ ಉಸಿರಾಟದ ಸರಾಗವಾಗಿರುವಂತೆ ಮಾಡುವ ನಿಟ್ಟಿನಲ್ಲಿ ಮಠದಲ್ಲಿ ವೆಂಟಿಲೇಟರ್ ವ್ಯವಸ್ಥೆಗೆ ಸಿದ್ಧತೆ ಮಾಡಲಾಗುತ್ತಿದೆ. 
ಪ್ರಮುಖ ರಕ್ತನಾಳವನ್ನು ಸರಾಗವಾಗಿಸಲು ಈ ಸ್ಟೆಂಟ್‌ಗಳ ಬಳಕೆಯಾಗುತ್ತದೆ. ಶ್ರೀಗಳಿಗೆ ಒಟ್ಟು 8 ಸ್ಟೆಂಟ್ ಗಳನ್ನು ಅಳವಡಿಸಲಾಗಿದ್ದು, ಕೇವಲ 15 ನಿಮಿಷಗಳಲ್ಲಿ ಶಸ್ತ್ರಚಿಕಿತ್ಸೆಯನ್ನು ಯಶಸ್ವಿಗೊಳಿಸಲಾಗಿದೆ. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.