ಸಿದ್ದಗಂಗಾ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ: ನಿತ್ಯ ಪೂಜೆ ನೆರವೇರಿಸಿದ ನಡೆದಾಡುವ ದೇವರು
ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ....

Published On :
ಬೆಂಗಳೂರು: ತೀವ್ರ ಅನಾರೋಗ್ಯ ಹಿನ್ನೆಲೆಯಲ್ಲಿ ನಿನ್ನೆ ಬೆಂಗಳೂರಿನ ಬಿಜಿಎಸ್ ಆಸ್ಪತ್ರೆಗೆ ಚಿಕಿತ್ಸೆಗೆ ದಾಖಲಾಗಿದ್ದ ಶತಾಯುಷಿ, ಭಕ್ತರ ಪಾಲಿಗೆ ನಡೆದಾಡುವ ದೇವರೆನಿಸಿಕೊಂಡ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಸ್ವಾಮೀಜಿಯವರ ಆರೋಗ್ಯದಲ್ಲಿ ಇಂದು ಚೇತರಿಕೆ ಕಂಡುಬಂದಿದೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ.
ನಿನ್ನೆ ತುಮಕೂರಿನ ಸಿದ್ಧಗಂಗಾ ಮಠದಲ್ಲಿ ಪೂಜೆ ಮುಗಿಸಿದ ನಂತರ ಶ್ರೀಗಳಿಗೆ ಅನಾರೋಗ್ಯ ಕಾಣಿಸಿಕೊಂಡಿತು. ಕೂಡಲೇ ಬೆಂಗಳೂರಿನ ಕೆಂಗೇರಿಯ ಬಿಜಿಎಸ್ ಆಸ್ಪತ್ರೆಗೆ ದಾಖಲಿಸಲಾಯಿತು.
ಅಗತ್ಯ ಪರೀಕ್ಷೆ ನಡೆಸಿ, ಬಳಿಕ ಶಸ್ತ್ರಚಿಕಿತ್ಸೆ ಮಾಡುವ ನಿರ್ಧಾರಕ್ಕೆ ಬರಲಾಯಿತು. ಈಗ ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದ್ದು, ವಿಶೇಷ ವಾರ್ಡ್‌ಗೆ ಸ್ಥಳಾಂತರಿಸಲಾಗಿದೆ. ಸಂಪೂರ್ಣ ಗುಣಮುಖರಾದ ನಂತರ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಗುವುದು ಎಂದು ವೈದ್ಯರು ತಿಳಿಸಿದ್ದಾರೆ.
ಇಂದು ದಿನವಿಡೀ ಆರೋಗ್ಯದ ಬಗ್ಗೆ ನಿಗಾ ವಹಿಸಲಾಗುವುದು. ನಾಳೆ ಅಥವಾ ಸೋಮವಾರ ಆಸ್ಪತ್ರೆಯಿಂದ ಡಿಸಾcರ್ಜ್ ಮಾಡುವ ಸಾಧ್ಯತೆಯಿದೆ. ಮಠದಲ್ಲೂ ಶ್ರೀಗಳ ಆರೋಗ್ಯ ತಪಾಸಣೆಗಾಗಿ ವ್ಯವಸ್ಥೆ ಮಾಡಲಾಗಿದೆ.
ಆಸ್ಪತ್ರೆಯಲ್ಲಿ ಇಂದು ಬೆಳಗ್ಗೆಯೇ ಎದ್ದ ಶ್ರೀಗಳು ಎಂದಿನಂತೆ ತಮ್ಮ ಪೂಜಾ ಕೈಂಕರ್ಯಗಳನ್ನು ನೆರವೇರಿಸಿದ್ದಾರೆ ಎನ್ನಲಾಗಿದೆ.
ಶ್ರೀಗಳ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದ ಸುದ್ದಿ ಕೇಳಿ ತುಮಕೂರಿನ ಸಿದ್ದಗಂಗಾ ಮಠ ಸೇರಿದಂತೆ ರಾಜ್ಯದಲ್ಲಿ ಅವರ ಭಕ್ತರು ಸಂತಸಗೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


