ರಾಜ್ಯ

2018 ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡಕ್ಕೆ ಹಿಂದೂ ಮಹಾಸಭಾ; 150 ಕ್ಷೇತ್ರಗಳಲ್ಲಿ ಸ್ಪರ್ಧೆ!

2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಹಿಂದೂ ಮಹಾಸಭಾ ಧುಮುಕಿದ್ದು 150 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದೆ.

2018 ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡಕ್ಕೆ ಹಿಂದೂ ಮಹಾಸಭಾ; 150 ಕ್ಷೇತ್ರಗಳಲ್ಲಿ ಸ್ಪರ್ಧೆ!
2018 ರ ಕರ್ನಾಟಕ ವಿಧಾನಸಭೆ ಚುನಾವಣಾ ಅಖಾಡಕ್ಕೆ ಹಿಂದೂ ಮಹಾಸಭಾ; 150 ಕ್ಷೇತ್ರಗಳಲ್ಲಿ ಸ್ಪರ್ಧೆ!
Published On :
ಬೆಂಗಳೂರು: 2018ರ ಕರ್ನಾಟಕ ವಿಧಾನಸಭಾ ಚುನಾವಣೆಯ ಅಖಾಡಕ್ಕೆ ಹಿಂದೂ ಮಹಾಸಭಾ ಧುಮುಕಿದ್ದು 150 ವಿಧಾನಸಭಾ ಕ್ಷೇತ್ರಗಳಲ್ಲಿ ಸ್ಪರ್ಧಿಸುವುದಾಗಿ ತಿಳಿಸಿದೆ. 
ಫೆಬ್ರವರಿ ತಿಂಗಳಲ್ಲಿ ಹಿಂದೂ ಮಹಾಸಭಾ ತನ್ನ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಬಿಡುಗಡೆ ಮಾಡಲಿದೆ ಎಂದು ರಾಜ್ಯಾಧ್ಯಕ್ಷ ಎನ್ ಸುಬ್ರಹ್ಮಣ್ಯ ರಾಜು ಹೇಳಿದ್ದಾರೆ. ಬಿಜೆಪಿ ಈ ಹಿಂದೆಯೇ ಹಿಂದುತ್ವದೆಡೆಗೆ ತನ್ನ ಬದ್ಧತೆಯನ್ನು ಕಳೆದುಕೊಂಡಿದೆ. ಆದ್ದರಿಂದ ಹಿಂದೂ ಮಹಾಸಭಾ ಬಿಜೆಪಿಯನ್ನು ಸೈದ್ಧಾಂತಿಕ ಅಥವಾ ರಾಜಕೀಯ ಮಿತ್ರಪಕ್ಷ ಎಂದು ಪರಿಗಣಿಸುವುದಿಲ್ಲ ಎಂದು ಸುಬ್ರಹ್ಮಣ್ಯ ರಾಜು ಮಾಧ್ಯಮಗಳಿಗೆ ನೀಡಿರುವ ಹೇಳಿಕೆಯಲ್ಲಿ ತಿಳಿಸಿದ್ದಾರೆ. 
ಸಿಎಂ ಸಿದ್ದರಾಮಯ್ಯ ವಿರುದ್ಧವೂ ಅಸಮಾಧಾನ ವ್ಯಕ್ತಪಡಿಸಿರುವ ಸುಬ್ರಹ್ಮಣ್ಯ ರಾಜು, ಸಿದ್ದರಾಮಯ್ಯ ಅಲ್ಪಸಂಖ್ಯಾತರನ್ನು ಓಲೈಕೆ ಮಾಡುತ್ತಿದ್ದಾರೆ, ಆದರೆ ಕೇವಲ ಎಸ್ ಡಿಪಿಐ ಹಾಗೂ ಪಿಎಫ್ಐ ಕಾರ್ಯಕರ್ತರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವುದರಿಂದಷ್ಟೇ ಕಾಂಗ್ರೆಸ್ ಅಥವಾ ಸಿದ್ದರಾಮಯ್ಯ ಗೆಲ್ಲುವುದಿಲ್ಲ ಎಂದು ರಾಜು ಹೇಳಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.