ರಾಜ್ಯ

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ನಿಂದನಾತ್ಮಕ ಪೋಸ್ಟ್‌: ಪೊಲೀಸರ ಎಚ್ಚರಿಕೆ

ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‍ಎಸ್‍ಎಸ್) ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮಾಡಿದ್ದ ನಿಂದನಾತ್ಮಕ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ...

ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧದ ನಿಂದನಾತ್ಮಕ ಪೋಸ್ಟ್‌: ಪೊಲೀಸರ ಎಚ್ಚರಿಕೆ
ಆರ್‍ಎಸ್‍ಎಸ್
Published On :
ಮಂಗಳೂರು: ರಾಷ್ಟ್ರೀಯ ಸ್ವಯಂಸೇವಾ ಸಂಘ(ಆರ್‍ಎಸ್‍ಎಸ್) ಹಿರಿಯ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಮಾಡಿದ್ದ ನಿಂದನಾತ್ಮಕ ಪೋಸ್ಟ್ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು ಇಂತಹ ಅವಹೇಳನಕಾರಿ ಪೋಸ್ಟ್ ಗಳನ್ನು ಮಾಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕಾಗುತ್ತದೆ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಪೊಲೀಸ್ ವರಿಷ್ಠಾಧಿಕಾರಿ ಬಿಆರ್ ರವಿಕಾಂತೇಗೌಡ ಅವರು ಎಚ್ಚರಿಕೆ ನೀಡಿದ್ದಾರೆ. 
ಟ್ರೂ ಮೀಡಿಯಾ ನೆಟ್ ವರ್ಕ್ ಫೇಸ್ ಬುಕ್ ಪೇಜ್ ನಲ್ಲಿ ಕಲ್ಲಡ್ಕದಲ್ಲಿ ಮುದುಕ ಭಯೋತ್ಪಾದಕ ಹಿಜಿಡ ಭಟ್ಟನಿಂದ ಪ್ಯಾಂಟ್ ಹಾಕಿ ಟ್ರೈನಿಂಗ್ 'ಮಂಗನಿಂದ ಮಾನವ ಸಾಬೀತುಪಡಿಸಿದ ಭಟ್ಟ, 'ಅಯ್ಯಯ್ಯೋ ಭಯೋತ್ಪಾದಕ ಮುದುಕ ಭಟ್ಟ ಎಂದು ಭಟ್ ಫೋಟೋ ಹಾಕಿ ಅವಾಚ್ಯವಾಗಿ ಬರೆದಿದ್ದಾರೆ. 
ಕಲ್ಲಡ್ಕ ಪ್ರಭಾಕರ್ ಭಟ್ ಅವರು ಗಣವೇಷದಾರಿ ಫೋಟೋ ಹಾಗೂ ಯೋಗಾಸನ ಮಾಡುತ್ತಿರುವ ಫೋಟೋ ಜತೆ ನಾಯಿ ಫೋಟೋ ಸೇರಿಸಿ ಅವಮಾನ ಮಾಡಲಾಗಿತ್ತು. 
ಈ ಫೋಟೋಗಳು ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿತ್ತು. ಅಲ್ಲದೆ ಇಂತಹ ಫೋಟೋಗಳನ್ನು ಟ್ರೂ ಮೀಡಿಯಾ ನೆಟ್ ವರ್ಕ್ ಪೋಸ್ಟ್ ಮಾಡುವ ಮೂಲಕ ಜಿಲ್ಲೆಯಲ್ಲಿ ಮತ್ತೆ ಶಾಂತಿ ಕದಡು ಸಾಧ್ಯತೆಗಳು ಹೆಚ್ಚಾಗಿದ್ದು ಇದರಿಂದ ಎಚ್ಚೆತ್ತಿರುವ ಪೊಲೀಸ್ ವರಿಷ್ಠಾಧಿಕಾರಿ ರವಿಕಾಂತೇಗೌಡ ಅವರು ಸಾಮಾಜಿಕ ಜಾಲತಾಣಗಳಲ್ಲಿ ಇಂತಹ ನಿಂದನಾತ್ಮಕ ಪೋಸ್ಟ್ ಗಳನ್ನು ಹರಿಬಿಡುವವರ ವಿರುದ್ಧ ಕಠಿಣ ಕ್ರಮಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.