ರಾಜ್ಯ

ವಿದ್ಯಾರ್ಥಿನಿ 'ಹತ್ಯೆ': ಬೀದರ್ ಬಂದ್ ಗೆ ವ್ಯಾಪಕ ಬೆಂಬಲ

ಕೋಸಂ ಗ್ರಾಮದ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಹಿಂದೂಪರ ಸಂಘಟನೆಗಳು ಕರೆ ನೀಡಿರುವ ಬೀದರ್ ಬಂದ್ ಗೆ ಮಂಗಳವಾರ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.

ವಿದ್ಯಾರ್ಥಿನಿ 'ಹತ್ಯೆ': ಬೀದರ್ ಬಂದ್ ಗೆ ವ್ಯಾಪಕ ಬೆಂಬಲ
ಸಂಗ್ರಹ ಚಿತ್ರ
Published On :
ಬೀದರ್: ಕೋಸಂ ಗ್ರಾಮದ ವಿದ್ಯಾರ್ಥಿನಿ ಹತ್ಯೆ ಪ್ರಕರಣಕ್ಕೆ ಸಂಬಂಧಸಿದಂತೆ ಹಿಂದೂಪರ ಸಂಘಟನೆಗಳು ಕರೆ ನೀಡಿರುವ ಬೀದರ್ ಬಂದ್ ಗೆ ಮಂಗಳವಾರ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದ್ದು, ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚಲಾಗಿದೆ.
ಈ ಹಿಂದೆ ಪ್ರೀತಿಸಲು ನಿರಾಕರಿಸಿದ ಕೋಸಂ ಗ್ರಾಮದ ಬಿಎ ಪದವಿ ವಿದ್ಯಾರ್ಥಿನಿ ಪೂಜಾ ಎಂಬಾಕೆಯನ್ನು ಶಂಸುದ್ದೀನ್ ಎಂಬ ಯುವಕ ಸಮೀಪದ ಗಾಯಮುಖ ಅರಣ್ಯ ಪ್ರದೇಶಕ್ಕೆ ಎಳೆದೊಯ್ದು ಅತ್ಯಾಚಾರ ಮಾಡಿ ಬಳಿಕ  ಆಕೆಯ ಕತ್ತು ಸೀಳಿ ಹತ್ಯೆ ಮಾಡಿದ್ದ. ಈ ಪ್ರಕರಣದ ಬಳಿಕ ಬೀದರ್ ಜಿಲ್ಲೆಯಲ್ಲಿ ಪ್ರತಿಭಟನೆಗಳು ವ್ಯಾಪಕವಾಗಿದ್ದು, ಅತ್ಯಾಚಾರಿ ಕೊಲೆಗಾರನಿಗೆ ಗಲ್ಲು ಶಿಕ್ಷೆ ವಿಧಿಸಬೇಕು ಎಂದು ಹಲವು ವಿದ್ಯಾರ್ಥಿ ಸಂಘಟನೆಗಳು ಹಾಗೂ  ಹಿಂದೂಪರ ಸಂಘಟನೆಗಳು ಆಗ್ರಹಿಸಿದ್ದರು. 
ಅಲ್ಲದೆ ಮಂಗಳವಾರ ಬೀದರ್ ಬಂದ್ ಗೆ ಕರೆ ನೀಡಲಾಗಿದ್ದು, ಇದೀಗ ಬೀದರ್ ನಲ್ಲಿ ಬಂದ್ ಗೆ ವ್ಯಾಪಕ ಬೆಂಬಲ ವ್ಯಕ್ತವಾಗುತ್ತಿದೆ. ಬಿಜೆಪಿ ಸೇರಿದಂತೆ ವಿವಿಧ ಸಂಘ ಸಂಸ್ಥೆಗಳಿಂದ ಬೆಂಬಲ ವ್ಯಕ್ತವಾಗಿದ್ದು, ನಗರದಲ್ಲಿ ಯಾವುದೇ   ಬಸ್‌, ಆಟೋಗಳು ರಸ್ತೆಗಿಳಿದಿಲ್ಲ ಎಂದು ತಿಳಿದುಬಂದಿದೆ. ಪ್ರಸ್ತುತ ಬೀದರ್ ನಲ್ಲಿ ಜನಜೀವನ ಸಂಪೂರ್ಣ ಸ್ಥಬ್ದವಾಗಿದ್ದು, ಅಂಗಡಿ ಮಾಲೀಕರು ಸ್ವಯಂ ಪ್ರೇರಿತರಾಗಿ ಅಂಗಡಿ ಮುಂಗಟ್ಟುಗಳನ್ನು ಮುಚ್ಚುವ ಮೂಲಕ ವಿದ್ಯಾರ್ಥಿಗಳ  ಪ್ರತಿಭಟನೆಗೆ ಬೆಂಬಲ ಸೂಚಿಸಿದ್ದಾರೆ. 
ಇನ್ನು ನಿನ್ನೆ ನಡೆದ ಪ್ರತಿಭಟನಾ ಮೆರವಣಿಗೆಯಲ್ಲಿ  ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಬೃಹತ್‌ ಪ್ರತಿಭಟನೆ ನಡೆಸಿ ಘಟನೆಯನ್ನು ಖಂಡಿಸಿದ್ದರು. ಅಂತೆಯೇ ಹಿಂದೂ ಪರ ಸಂಘಟನೆಗಳ ಕಾರ್ಯಕರ್ತರು ಪ್ರತಿಭಟನಾ  ಮೆರವಣಿಗೆ ನಡೆಸಿ ಆಕ್ರೋಶ ಹೊರ ಹಾಕಿದ್ದು, ಕೋಮು ಸೂಕ್ಷ್ಮ ವಿಚಾರವಾಗಿರುವ ಹಿನ್ನಲೆಯಲ್ಲಿ ಜಿಲ್ಲೆಯಲ್ಲಿ ವ್ಯಾಪಕ ಬಂದೋಬಸ್ತ್ ಕೈಗೊಳ್ಳಲಾಗಿದೆ.  ಸರ್ಕಾರಿ ಶಾಲಾ- ಕಾಲೇಜುಗಳಿಗೆ ಯಾವುದೇ ರಜೆ ಘೋಷಣೆ  ಮಾಡಿಲ್ಲವಾದರೂ ಅನುದಾನ ರಹಿತ ಖಾಸಗಿ ಶಾಲೆಗಳ ರಜೆ ಘೋಷಣೆ ಮಾಡಲಾಗಿದೆ.
ಖಾಸಗಿ ಕಾಲೇಜಿನಲ್ಲಿ  ದ್ವಿತೀಯ ಬಿಎ ಓದುತ್ತಿದ್ದ ವಿದ್ಯಾರ್ಥಿನಿ ಪೂಜಾಳನ್ನು ಭಾಲ್ಕಿ ತಾಲೂಕಿನ ಗಾಯಮುಖ ಅರಣ್ಯ ಪ್ರದೇಶದಲ್ಲಿ ಶನಿವಾರ ಸಂಜೆ ಅತ್ಯಾಚಾರ ಮಾಡಿ ಚಾಕುವಿನಿಂದ ಕುತ್ತಿಗೆ ಕೊಯ್ದು ಹತ್ಯೆಗೈಯಲಾಗಿತ್ತು. ಕೃತ್ಯ  ಎಸಗಿರುವ ಆರೋಪಿ  ಭಾಲ್ಕಿ ತಾಲೂಕಿನ ಕೋಸಂ ಗ್ರಾಮದ ಶಂಸುದ್ದೀನ್‌ (24)  ಎಂಬ ಯುವಕನನ್ನು  ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ. ಮೃತಳ ಸಹೋದರ ದೂರಿನ ಮೇರೆಗೆ ಧನ್ನೂರ ಠಾಣೆಯಲ್ಲಿ  ಪ್ರಕರಣ ದಾಖಲಾಗಿದೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.