ಚುನಾವಣಾ ಸಿದ್ಧತೆ ಪರಿಶೀಲಿಸಲು ಚುನಾವಣಾ ಆಯುಕ್ತ ರಾವತ್ ರಾಜ್ಯಕ್ಕೆ ಭೇಟಿ
ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಲು ನೂತನವಾಗಿ ನೇಮಕಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರು ಬುಧವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ...

Published On :
ಬೆಂಗಳೂರು: ವಿಧಾನಸಭಾ ಚುನಾವಣೆ ಹತ್ತಿರ ಬರುತ್ತಿರುವ ಹಿನ್ನಲೆಯಲ್ಲಿ ರಾಜ್ಯದಲ್ಲಿ ನಡೆಯುತ್ತಿರುವ ಚುನಾವಣಾ ಸಿದ್ಧತೆಗಳನ್ನು ಪರಿಶೀಲನೆ ನಡೆಸಲು ನೂತನವಾಗಿ ನೇಮಕಗೊಂಡಿರುವ ಮುಖ್ಯ ಚುನಾವಣಾ ಆಯುಕ್ತ ಓಂ ಪ್ರಕಾಶ್ ರಾವತ್ ಅವರು ಬುಧವಾರ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆಂದು ತಿಳಿದುಬಂದಿದೆ.
ಈ ಕುರಿತಂತೆ ಮಾಧ್ಯಮಗಳೊಂದಿಗೆ ಮಾತನಾಡಿರುವ ರಾಜ್ಯ ಚುನಾವಣಾ ಸಮಿತಿಯ ಹಿರಿಯ ಅಧಿಕಾರಿ, ಅಧಿಕಾರಿಗಳ ತಂಡದೊಂದಿಗೆ ಚುನಾವಣಾ ಮುಖ್ಯ ಆಯುಕ್ತರೂ ಕೂಡ ಬೆಂಗಳೂರಿಗೆ ಭೇಟಿ ನೀಡಿ ಚುನಾವಣಾ ಸಮಿತಿ, ಜಿಲ್ಲಾಧಿಕಾರಿಗಳು, ಪೊಲೀಸ್ ಅಧಿಕಾರಿಗಳು ಹಾಗೂ ರಾಜಕೀಯ ಪಕ್ಷಗಳ ಪ್ರತಿನಿಧಿಗಳೊಂದಿಗೆ ಮಾತುಕದತೆ ನಡೆಸಿ, ಚುನಾವಣಾ ಸಿದ್ಧತೆ ಬಗ್ಗೆ ಮಾಹಿತಿ ಪಡೆಯಲಿದ್ದಾರೆಂದು ಹೇಳಿದ್ದಾರೆ.
ಎಂದಿನಂತೆ ಸಾಮಾನ್ಯ ಪ್ರಕ್ರಿಯೆಗಳಂತೆ ಅಧಿಕಾರಿಗಳು ರಾಜ್ಯಕ್ಕೆ ಭೇಟಿ ನೀಡುತ್ತಿದ್ದಾರೆ. ಚುನಾವಣೆಗೆ ಇನ್ನು 2-3 ತಿಂಗಳು ಬಾಕಿಯಿರುವ ಹಿನ್ನಲೆಯಲ್ಲಿ ಚುನಾವಣಾ ಸಿದ್ಧತೆ ಕುರಿತಂತೆ ಪರಿಶೀಲನೆ ನಡೆಸಲು ಭೇಟಿ ನೀಡುತ್ತಿದ್ದಾರೆಂದು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


