ರಾಜ್ಯ

ರೈತರಿಗಾಗಿ ಉಪವಾಸ ಸತ್ಯಾಗ್ರಹ ನಡೆಸಲಿರುವ ಅಣ್ಣಾ ಹಜಾರೆ

ದೇಶದಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳ ಕುರಿತಂತೆ ಡಾ.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದಾರೆ...

ರೈತರಿಗಾಗಿ ಉಪವಾಸ ಸತ್ಯಾಗ್ರಹ ನಡೆಸಲಿರುವ ಅಣ್ಣಾ ಹಜಾರೆ
ಅಣ್ಣಾ ಹಜಾರೆ
Published On :
ಬೆಂಗಳೂರು: ದೇಶದಲ್ಲಿ ರೈತರು ಎದುರಿಸುತ್ತಿರುವ ಸಂಕಷ್ಟಗಳ ಕುರಿತಂತೆ ಡಾ.ಸ್ವಾಮಿನಾಥನ್ ವರದಿಯನ್ನು ಜಾರಿಗೆ ತರುವಂತೆ ಆಗ್ರಹಿಸಿ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆಯವರು ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಿದ್ದಾರೆ. 
ರಾಜ್ಯ ರೈತ ಸಂಘಟನೆಗಳು ನಡೆಸಿದ್ದ ಸಮಾವೇಶದಲ್ಲಿ ಮಾತನಾಡಿರುವ ಅಣ್ಣಾ ಹಜಾರೆಯವರು, ಮಾ.23 ರಂದು ರಾಜಧಾನಿ ನವದೆಹಲಿಯ ರಾಮ್'ಲೀಲಾ ಮೈದಾನದಲ್ಲಿ ರೈತರ ಪರವಾಗಿ ಉಪವಾಸ ಸತ್ಯಾಗ್ರಹ ನಡೆಸುವುದಾಗಿ ಹೇಳಿದ್ದಾರೆ. 
ಪ್ರತೀನಿತ್ಯ ದೇಶದಲ್ಲಿ ಸಾಕಷ್ಟು ರೈತರು ಸಾಲವನ್ನು ತೀರಿಸಲು ಸಾಧ್ಯವಾಗದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. 60 ವರ್ಷಕ್ಕಿಂತಲೂ ಮೇಲ್ಪಟ್ಟ ರೈತರಿಗೆ ಸರ್ಕಾರ ರೂ.5,000 ಪಿಂಚಣಿ ಹಣವನ್ನು ನೀಡಬೇಕು. ಈ ಕುರಿತಂತೆ ಉಪವಾಸ ಸತ್ಯಾಗ್ರಹ ಕೈಗೊಳ್ಳಲು ನಿರ್ಧರಿಸಲಾಗಿದ್ದು, ಅಗತ್ಯಬಿದ್ದರೆ, ಜೈಲ್ ಭರೋ ಚಳುವಳಿಯನ್ನೂ ನಡೆಸಲಾಗುತ್ತದೆ. ಕೆಟ್ಟದಲ್ಲದೆ, ಉತ್ತಮ ಕೆಲಸಗಳಿಗಾಗಿ ಜೈಲಿಗೆ ಹೋಗಲೂ ನಾನು ಸಿದ್ಧನಿದ್ದೇನೆ. ಈ ಹಿಂದೆ ಕೂಡ ನಾನು ಜೈಲಿಗೆ ಹೋಗಿದ್ದೆ. ರೈತರ ಉತ್ತಮ ಭವಿಷ್ಯಕ್ಕಾಗಿ ಮತ್ತೊಮ್ಮೆ ಜೈಲಿಗೆ ಹೋಗಲು ಸಿದ್ಧನಿದ್ದೇನೆಂದು ತಿಳಿಸಿದ್ದಾರೆ. 
ವಾಸ್ತವಿಕತೆಯನ್ನು ಅರಿಯುವ ಸಲುವಾಗಿ ನಾನು ಸಾಕಷ್ಟು ರಾಜ್ಯಗಳಿಗೆ ಭೇಟಿ ನೀಡಿದ್ದೇನೆ. ರಾಜ್ಯದಲ್ಲಿರುವ ರೈತರು ಅತ್ಯಂತ ಕೆಟ್ಟ ಪರಿಸ್ಥಿತಿಯನ್ನು ಎದುರಿಸುತ್ತಿದ್ದಾರೆ. ರೈತರ ರಕ್ಷಣೆಗಾಗಿ ನಾವೆಲ್ಲರೂ ಕೈಜೋಡಿಸಲು ಇದು ಉತ್ತಮವಾದ ಸಮಯವಾಗಿದೆ ಎಂದಿದ್ದಾರೆ. 
ಬಳಿಕ ಮಾತನಾಡಿರುವ ಸಾಹಿತಿ ಡಾ.ನಟರಾಜ್ ಹುಲಿಯಾರ್. ಲೋಕ್'ಪಾಲ್ ಮಸೂದೆ ಆಗ್ರಹಿಸಿ ಅಣ್ಣಾ ಹಜಾರೆಯವರು ಪ್ರತಿಭಟನೆ ನಡೆಸಿದಾಗ ಯುಪಿಎ ಸರ್ಕಾರ ನೆಲಕಚ್ಚಿತ್ತು. ಇದೀಗ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಕೂಡ ಇದೇ ರೀತಿಯ ಪರಿಸ್ಥಿತಿಯನ್ನು ಎದುರಿಸಲಿದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.