ರಾಜ್ಯ

ಮಳವಳ್ಳಿ: ಠಾಣೆಯಲ್ಲೇ ಮಹಿಳಾ ಪೇದೆಗಳಿಗೆ ಸೀಮಂತ ಮಾಡಿ ಆತ್ಮೀಯತೆ ಮೆರೆದ ಪೊಲೀಸ್ ಸಿಬ್ಬಂದಿ

ಮಂಡ್ಯ ಜಿಲ್ಲೆಯ ಮಳವಳ್ಳಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ ಠಾಣೆಯ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡುವ ಮೂಲಕ ಸಂಭ್ರಮಾಚರಣೆ ...

ಮಳವಳ್ಳಿ: ಠಾಣೆಯಲ್ಲೇ ಮಹಿಳಾ ಪೇದೆಗಳಿಗೆ ಸೀಮಂತ ಮಾಡಿ ಆತ್ಮೀಯತೆ ಮೆರೆದ ಪೊಲೀಸ್ ಸಿಬ್ಬಂದಿ
ಮಳವಳ್ಳಿ ಠಾಣೆಯಲ್ಲಿ ಮಹಿಳಾ ಪೇದೆಗಳಿಗೆ ಸೀಮಂತ
Published On :
ಮಳವಳ್ಳಿ:  ಪೊಲೀಸರೆಂದರೆ ದಿನದ 24 ಗಂಟೆಯೂ ಕೆಲಸ ಮಾಡುವವರು. ಇಂತವರಿಗೆ ಸಮಯವೇ ಇರುವುದಿಲ್ಲ. ಇದರ ನಡುವೆಯೂ ಮಹಿಳಾ ಪೇದೆಗಳಿಗೆ ಠಾಣೆಯಲ್ಲೇ ಸೀಮಂತ ಮಾಡಿದ ಅಪರೂಪದ ಪ್ರಸಂಗ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. 
ಮಂಡ್ಯ ಜಿಲ್ಲೆಯ ಮಳವಳ್ಳಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ ಠಾಣೆಯ ಇಬ್ಬರು ಮಹಿಳಾ ಪೊಲೀಸ್ ಸಿಬ್ಬಂದಿಗೆ ಸೀಮಂತ ಮಾಡುವ ಮೂಲಕ ಸಂಭ್ರಮಾಚರಣೆ ಮಾಡಿದರು. ಮಳವಳ್ಳಿ ಠಾಣೆಯಲ್ಲಿ ಕೆಲಸ ಮಾಡುವ ಪ್ರೇಮಾ ಮತ್ತು ಶೃತಿ ಅವರಿಗೆ ಠಾಣೆಯ ಸಿಬ್ಬಂದಿ ತಮ್ಮ ಸ್ವಂತ ಸಹೋದರಿಯರಿಗೆ ಮಾಡುವ ರೀತಿಯಲ್ಲಿ ಸೀಮಂತ ಕಾರ್ಯ ಮಾಡಿದ್ದಾರೆ.
ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಮಹಿಳಾ ಪೇದೆ ಆಗಿ ಕೆಲಸ ನಿರ್ವಹಿಸುತ್ತಿರುವ ಶೃತಿ ಹಾಗೂ ಪ್ರೇಮ ಹೆರಿಗೆ ರಜೆ ಪಡೆದು ಮನೆಗೆ ತೆರಳಲು ಅವರು ಮುಂದಾಗಿದ್ದರು. ಈ ಹಿನ್ನಲೆಯಲ್ಲಿ ಅವರ  ಸಹೋದ್ಯೋಗಿಗಳು ಪೊಲೀಸ್ ಠಾಣೆಯಲ್ಲೇ ಸೀಮಂತ ಕಾರ್ಯಕ್ರಮ ಹಮ್ಮಿಕೊಂಡು, ಮನೆಗಳಲ್ಲಿ ಕುಟುಂಬ ವರ್ಗದವರು ಗರ್ಭಿಣಿ ಸ್ತ್ರೀಯರಿಗೆ ಸೀಮಂತ ಕಾರ್ಯಕ್ರಮ ಮಾಡುವಂತೆಯೇ ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ಹಿಂದೂ ಸಂಸ್ಕೃತಿಯಂತೆ ಸೀಮಂತ ಮಾಡಿದರು.
ಠಾಣೆಯಲ್ಲಿ ನಾವು ಸಿಬ್ಬಂದಿ ಒಂದೇ ಕುಟುಂಬದವರಂತೆ ಕೆಲಸ ಮಾಡುತೇವೆ, ಇಂಥಹ ಕೆಲಸಗಳಿಂದ ನಮ್ಮ ನಡುವಿನ ಅಂತರ ಕಡಿಮೆಯಾಗುತ್ತದೆ ಎಂದು ಇನ್ಸ್ ಪೆಕ್ಟರ್ ಶ್ರೀಕಾಂತ್ ತಿಳಿಸಿದರು. ಡಿವೈಎಸ್ಪಿ ಮಲ್ಲಿಕ್, ಸಿಪಿಐಗಳಾದ ಗಂಗಾಧರ್, ಶ್ರೀಕಾಂತ್, ಪಿಎಸ್ಐ ಮಹದೇವು ಸೇರಿದಂತೆ ಹಲವರು ಭಾಗವಹಿಸಿದ್ದರು,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.