ರಾಜ್ಯ

ಎರಡು ಪಾಳಿಗಳಲ್ಲಿ ತರಗತಿ: ಮಲ್ಲೇಶ್ವರ ಕೇಂದ್ರೀಯ ವಿದ್ಯಾಲಯದ ವಿರುದ್ಧ ಪೋಷಕರು ಕೆಂಡಾಮಂಡಲ

ಎರಡು ಪಾಳಿಗಳಲ್ಲಿ ತರಗತಿ ನಡೆಸಲು ಮಲ್ಲೇಶ್ವರದ ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅನುಮತಿ ನೀಡಿದೆ. ಆದರೆ ಪೋಷಕರಿಂದ ಈ ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ.

ಎರಡು ಪಾಳಿಗಳಲ್ಲಿ ತರಗತಿ: ಮಲ್ಲೇಶ್ವರ ಕೇಂದ್ರೀಯ ವಿದ್ಯಾಲಯದ ವಿರುದ್ಧ ಪೋಷಕರು ಕೆಂಡಾಮಂಡಲ
ಕೇಂದ್ರೀಯ ವಿದ್ಯಾಲಯ
Published On :
ಬೆಂಗಳೂರು: ಎರಡು ಪಾಳಿಗಳಲ್ಲಿ ತರಗತಿ ನಡೆಸಲು ಮಲ್ಲೇಶ್ವರದ ಕೇಂದ್ರೀಯ ವಿದ್ಯಾಲಯಕ್ಕೆ ಕೇಂದ್ರ ಮಾನವ ಸಂಪನ್ಮೂಲ ಇಲಾಖೆ ಅನುಮತಿ ನೀಡಿದೆ. ಆದರೆ ಪೋಷಕರಿಂದ ಈ  ನಿರ್ಧಾರಕ್ಕೆ ತೀವ್ರ ವಿರೋಧ ವ್ಯಕ್ತವಾಗಿದೆ. 
ಪ್ರಸ್ತುತ ತರಗತಿಗಳು ಬೆಳಿಗ್ಗೆ 8:30 ಕ್ಕೆ ಪ್ರಾರಂಭವಾಗಿ ಮಧ್ಯಾಹ್ನ 2:40 ಕ್ಕೆ ಮುಕ್ತಾಯಗೊಳ್ಳುತ್ತಿದೆ. ಆದರೆ ಈಗ ಬೆಳಿಗ್ಗೆ 7 ಗಂಟೆಯಿಂದ 12.25 ವರೆಗೆ ಒಂದು ಪಾಳಿ ಹಾಗೂ ಮಧ್ಯಾಹ್ನ 12:30 ರಿಂದ 6 ವರೆಗೆ ಎರಡನೇ ಪಾಳಿಯಲ್ಲಿ ತರಗತಿಗಳನ್ನು ನಡೆಸಲು ಕೇಂದ್ರಿಯ ವಿದ್ಯಾಲಯಕ್ಕೆ ಮಾನವ ಸಂಪನ್ಮೂಲ ಇಲಾಖೆ ಅನುಮತಿ ನೀಡಿತ್ತು. 
ಮೊದಲನೇ ತರಗತಿಯಿಂದ 12 ನೇ ತರಗತಿ ವರೆಗೂ ಮಲ್ಲೇಶ್ವರದ ಕೇಂದೀಯ ವಿದ್ಯಾಲಯದಲ್ಲಿ 1,836 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದು, 2017-18 ನೇ ಶೈಕ್ಷಣಿಕ ವರ್ಷದಲ್ಲಿ ಮೊದಲನೇ ತರಗತಿಯ ಮೂರು ಸೆಕ್ಷನ್ ಗಳಲ್ಲಿರುವ 120 ಸೀಟ್ ಗಳಿಗೆ 3,040 ಅರ್ಜಿಗಳು ಬಂದಿದ್ದವು. ಪ್ರತಿ ಶೈಕ್ಷಣಿಕ ವರ್ಷದಲ್ಲೂ ಬೇಡಿಕೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಆಡಳಿತ ಮಂಡಳಿ ಈ ಕ್ರಮಕ್ಕೆ ಮುಂದಾಗಿದೆ. ಆದರೆ ಪೋಷಕರು ಎರಡು ಪಾಳಿಗಳಲ್ಲಿ ತರಗತಿಗಳನ್ನು ನಡೆಸಲು ವಿರೋಧಿಸುತ್ತಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.