ರಸ್ತೆ ಅಪಘಾತದಲ್ಲಿ 2 ಸಾವು: ರಕ್ತಸ್ರಾವಕ್ಕೆ ಸಂತ್ರಸ್ತನ ಬಲಿ, ವಿಡಿಯೋ ಖಯಾಲಿಗೆ ಕೊನೆಯುಸಿರೆಳೆದ ಮಾನವಿಯತೆ
ಮೈಸೂರು ರಸ್ತೆ ಮೇಲ್ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಕ್ತಸ್ರಾವದಿಂದ ಸಂತ್ರಸ್ತ ಸಾವನ್ನಪ್ಪಿದರೆ, ವಿಡಿಯೋ ಮಾಡುವ ಜನಗಳ ಖಯಾಲಿಗೆ ಮಾನವಿಯತೆಯೂ ಸ್ಥಳದಲ್ಲೇ ಅಸುನೀಗಿದೆ.

Published On :
ಬೆಂಗಳೂರು: ಮೈಸೂರು ರಸ್ತೆ ಮೇಲ್ಸೇತುವೆ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ರಕ್ತಸ್ರಾವದಿಂದ ಸಂತ್ರಸ್ತ ಸಾವನ್ನಪ್ಪಿದರೆ, ವಿಡಿಯೋ ಮಾಡುವ ಜನಗಳ ಖಯಾಲಿಗೆ ಮಾನವಿಯತೆಯೂ ಸ್ಥಳದಲ್ಲೇ ಅಸುನೀಗಿದೆ.
ಕಂಡ ಕಂಡಲ್ಲಿ ಸೆಲ್ಫಿ ತೆಗೆದು, ವಿಡಿಯೋ ಮಾಡುವ ಕೆಟ್ಟ ಖಯಾಲಿಗೆ ಮನುಷ್ಯ ತನ್ನ ಸಾಮಾಜಿಕ ಪ್ರಜ್ಞೆಯನ್ನು ಕಳೆದುಕೊಳ್ಳುತ್ತಿದ್ದಾನಾ ಎಂಬ ಗಂಭೀರ ಪ್ರಶ್ನೆ ಹುಟ್ಟುಹಾಕುವಂತಿದೆ ಈ ಪ್ರಕರಣದ ವರದಿ. ಕೆಎಸ್ ಆರ್ ಟಿಸಿಯ ಭದ್ರತಾ ಸಿಬ್ಬಂದಿ ಸಿದ್ದು ಹೂಗಾರ್ (25) ರಸ್ತೆ ಅಪಘಾತಕ್ಕೀಡಾಗಿ ರಕ್ತಸ್ರಾವದಿಂದ ಬಳಲುತ್ತಿದ್ದರೆ, ನೆರೆದಿದ್ದ ಸ್ಥಳಿಯರು ಸ್ಮಾರ್ಟ್ ಫೋನ್ ನಿಂದ ಆಂಬುಲೆನ್ಸ್ ಗೆ ಕರೆ ಮಾಡಿ ಅಪಘಾತದ ಸಂತ್ರಸ್ತರನ್ನು ಬದುಕಿಸಲು ಯತ್ನಿಸುವ ಬದಲು ಫೋಟೊ ವಿಡಿಯೋ ಮಾಡುವುದರಲ್ಲಿ ನಿರತರಾಗಿದ್ದರು.
ಮೇಲ್ಸೇತುವೆಯಲ್ಲಿ ರಸ್ತೆ ಅಪಘಾತ ಉಂಟಾಗಿದ್ದರೂ 70-100 ಜನರು ಅಲ್ಲಿ ನೆರೆದಿದ್ದರು, ಆದರೆ ಯಾರೊಬ್ಬರೂ ಸಹಾಯಕ್ಕೆ ನೆರವಾಗದೇ ಜೇಬಿನಿಂದ ಮೊಬೈಲ್ ತೆಗೆದು ಸಹಾಯಕ್ಕಾಗಿ ಬೇಡುತ್ತಿದ್ದ ಸಂತ್ರಸ್ತನ ಆಕ್ರಂದನವನ್ನು ವಿಡಿಯೋಗಳಲ್ಲಿ ದಾಖಲಿಸಿಕೊಳ್ಳುತ್ತಿದ್ದರು. ಮೊಬೈಲ್ ನಲ್ಲಿ ವಿಡಿಯೋ ಚಿತ್ರೀಕರಣ ಮುಕ್ತಾಯಗೊಳ್ಳುತ್ತಿದ್ದ ಜನರಿಗೆ ಟ್ರಾಫಿಕ್ ಪೊಲೀಸರು ಬರುವವರೆಗೂ ಆತನನ್ನು ಆಸ್ಪತ್ರೆಗೆ ಕರೆದೊಯ್ಯಬೇಕೆಂಬ ಸಾಮಾನ್ಯ ಪ್ರಜ್ಞೆಯೂ ಇರಲಿಲ್ಲ. ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿದ ನಂತರ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಆ ವೇಳೆಗಾಗಲೇ ಆತ ಸಾವನ್ನಪ್ಪಿದ್ದ ಎಂದು ವೈದ್ಯರು ತಿಳಿಸಿದ್ದಾರೆ. ವೈದ್ಯರ ಹೇಳಿಕೆ ಪ್ರಕಾರ, ಕೇವಲ 10 ನಿಮಿಷಗಳ ಮೊದಲು ಆಸ್ಪತ್ರೆಗೆ ಕರೆತಂದಿದ್ದರೂ ಸೂಕ್ತ ಚಿಕಿತ್ಸೆಯಿಂದ ಆತ ಬದುಕುಳಿಯುವ ಸಾಧ್ಯತೆ ಹೆಚ್ಚಿತ್ತು.
ಬೆಳಿಗ್ಗೆ 9:15ಕ್ಕೆ ಶಾಂತಿನಗರದ ಟಿಟಿಎಂಸಿಯಿಂದ ಕರ್ತವ್ಯಕ್ಕೆ ಹಾಜರಾಗಲು ತೆರಳುತ್ತಿದ್ದಾಗ ಹಿಂಬದಿಯಿಂದ ವೇಗವಾಗಿ ಬಂದ ಟ್ರ್ಯಾಕ್ಟರ್ ಸಿದ್ದು ಹೂಗಾರ್ ಗೆ ಡಿಕ್ಕಿ ಹೊಡೆದಿದೆ, ರಭಸಕ್ಕೆ ಪ್ಯಾರಾಪಟ್ ಗೋಡೆಗೆ ಜಜ್ಜಿ ರಕ್ತಸ್ರಾವ ಪ್ರಾರಂಭವಾಗಿದೆ. ಅಪಘಾತ ಸಂಭವಿಸುತ್ತಿದ್ದಂತೆಯೇ ಚಾಲಕ ಟ್ರ್ಯಾಕ್ಟರ್ ನ್ನು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಸಂತ್ರಸ್ತನಿಗೆ ಸಹಾಯ ಮಾಡುವುದರ ಬದಲು ಫೋಟೊ ವಿಡಿಯೋ ಮಾಡುವುದರಲ್ಲಿ ನಿರತರಾಗಿದ್ದ ಜನರಿಂದ ಟ್ರಾಫಿಕ್ ಜಾಮ್ ಉಂಟಾಗಿದ್ದು, ಮಾಹಿತಿ ತಿಳಿಯುತ್ತಿದ್ದಂತೆಯೇ ಟ್ರಾಫಿಕ್ ಪೊಲೀಸರು ಸ್ಥಳಕ್ಕೆ ಆಗಮಿಸಿದ್ದಾರೆ. ಆ ನಂತರವಷ್ಟೇ ಅರೆಜೀವವಾಗಿದ್ದ ಸಂತ್ರಸ್ತನನ್ನು ವಿಕ್ಟೋರಿಯಾ ಆಸ್ಪತ್ರೆಗೆ ಕರೆದೊಯ್ಯಲಾಯಿತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


