ನಮ್ಮ ಮೆಟ್ರೋ ವ್ಯವಸ್ಥಾಪಕ ನಿರ್ದೇಶಕರಾಗಿ ಅಜಯ್ ಸೇಠ್ ನೇಮಕ
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹಾಗೂ ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಅಜಯ್ ಸೇಠ್ ಅವರನ್ನು ಮೆಟ್ರೋ...

Published On :
ಬೆಂಗಳೂರು: ನಮ್ಮ ಮೆಟ್ರೋ ರೈಲು ನಿಗಮದ ವ್ಯವಸ್ಥಾಪಕ ನಿರ್ದೇಶಕರಾಗಿ ಅಜಯ್ ಸೇಠ್ ನೇಮಕಗೊಂಡಿದ್ದಾರೆ.
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಹೆಚ್ಚುವರಿ ಹಾಗೂ ಕರ್ನಾಟಕ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಯಾಗಿರುವ ಅಜಯ್ ಸೇಠ್ ಅವರನ್ನು ಮೆಟ್ರೋ ನಿಗಮಕ್ಕೆ ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
ಈ ಮೊದಲು ಮಹೇಂದ್ರ ಜೈನ್ ವ್ಯವಸ್ಥಾಪಕ ನಿರ್ದೇಶಕರಾಗಿದ್ದರು, ಅದಕ್ಕೂ ಮೊದಲು ಪ್ರದೀಪ್ ಸಿಂಗ್ ಖರೋಲಾ ಅವರು ನಿರ್ದೇಕರಾಗಿದ್ದರು. ಪ್ರದೀಪ್ ಸಿಂಗ್ ಖರೋಲಾ 2013 ರಿಂದ 2017ರವರೆಗೆ ಬಿಎಂಆರ್‌ಸಿಎಲ್ ವ್ಯವಸ್ಥಾಪಕ ನಿರ್ದೇಶಕರಾಗಿ ಕಾರ್ಯ ನಿರ್ವಹಿಸಿದ್ದರು.
1987ರ ಬ್ಯಾಚ್ ಐಎಎಸ್ ಅಧಿಕಾರಿಯಾಗಿರುವ ಅಜಯ್ ಸೇಠ್ ಅವರಿಗೆ ಹಣಕಾಸು ವಲಯದಲ್ಲಿ ಅಪಾರ ಅನುಭವವಿದೆ.
2017ರಲ್ಲಿ ಏರ್ ಇಂಡಿಯಾ ಮುಖ್ಯಸ್ಥರಾಗಿ ವರ್ಗಾವಣೆಗೊಂಡಿದ್ದರು. ಭಾರತೀಯ ವಿಮಾನ ಪ್ರಾಧಿಕಾರದ ಮುಖ್ಯಸ್ಥರಾಗಿ ನೇಮಕಗೊಂಡಿದ್ದರು. ಹಣಕಾಸು ಇಲಾಖೆ ಮತ್ತು ವಾಣಿಜ್ಯ ತೆರಿಗೆ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿಯಾಗಿ ಕೆಲಸ ಮಾಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


