ಕೈಲಾಸ ಮಾನಸ ಯಾತ್ರೆ, ಕರ್ನಾಟಕದ ಯಾತ್ರಾರ್ಥಿಗಳು ಸುರಕ್ಷಿತ- ಮಾಹಿತಿ
ನೇಪಾಳದಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಕೈಲಾಸ ಮಾನಸ ಸರೋವರಕ್ಕೆ ತೆರಳಿದ್ದ ರಾಜ್ಯದ ಯಾತ್ರಾರ್ಥಿಗಳು ಸುರಕ್ಷಿತವಾಗಿರುವುದಾಗಿ ತಿಳಿದುಬಂದಿದೆ.

ಬೆಂಗಳೂರು: ನೇಪಾಳದಲ್ಲಿನ ಪ್ರಸಿದ್ಧ ಯಾತ್ರಾ ಸ್ಥಳ ಕೈಲಾಸ ಮಾನಸ ಸರೋವರಕ್ಕೆ ತೆರಳಿದ್ದ ರಾಜ್ಯದ ಯಾತ್ರಾರ್ಥಿಗಳು ಮಾರ್ಗಮಧ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂಬುದು ಆತಂಕಕ್ಕೆ ಕಾರಣವಾಗಿತ್ತು. ಆದರೆ, ಕರ್ನಾಟಕದ 13 ಯಾತ್ರಾರ್ಥಿಗಳ ಗುಂಪಿನ ಕೆಲವರು ಕುಟುಂಬದವರೊಂದಿಗೆ ಸಂಪರ್ಕಕ್ಕೆ ಸಿಕ್ಕಿದ್ದು,ಅವರೆಲ್ಲರೂ ಸುರಕ್ಷಿತವಾಗಿರುವುದಾಗಿ ತಿಳಿದುಬಂದಿದೆ.
ಮಾನಸ ಸರೋವರ ಮಾರ್ಗದಲ್ಲಿನ ನೇಪಾಳ ಮತ್ತು ಟಿಬೆಟ್ ಮಧ್ಯದಲ್ಲಿಯೇ ಕೆಲ ಯಾತ್ರಾರ್ಥಿಗಳು ಮಳೆಯಿಂದಾಗಿ ಯಾವುದೇ ಸಂಪರ್ಕಕ್ಕೆ ಸಿಗದೆ ಸಂಕಷ್ಟಕ್ಕೆ ಸಿಲುಕಿದ್ದರು. ಈ ಪೈಕಿ ಗೋಕಾಕ್ ನಿಂದ ತೆರಳಿದ ಲೀಲಾ ಮತ್ತು ಆಕೆಯ ಸ್ನೇಹಿತೆ ಬೈಲಹೊಂಗಲದ ಗೀತಾ ಹೊಸಮಠ್, ಸೋಮವಾರ ಬೆಳಗ್ಗೆಯಿಂದ ಕುಟುಂಬದವರೊಂದಿಗೆ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಇದರಿಂದಾಗಿ ಕುಟುಂಬ ಸದಸ್ಯರು ಆತಂಕಕ್ಕೊಳಗಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


