ತಪ್ಪು ಪ್ರಶ್ನೆ ಪತ್ರಿಕೆ: ಪರೀಕ್ಷಾರ್ಥಿಗಳನ್ನು ಮನೆಗೆ ಕಳಿಸಿದ ವಿಟಿಯು
ಇಂಜಿನಿಯರಿಂಗ್ ನ ಮೆಕೆಟ್ರಾನಿಕ್ಸ್ ವಿಭಾಗದ 6 ನೇ ಸೆಮಿಸ್ಟರ್ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ಶಾಕ್ ನೀಡಿದೆ.

Published On :
ಬೆಂಗಳೂರು: ಇಂಜಿನಿಯರಿಂಗ್ ನ ಮೆಕೆಟ್ರಾನಿಕ್ಸ್ ವಿಭಾಗದ 6 ನೇ ಸೆಮಿಸ್ಟರ್ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳಿಗೆ ವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯ ಶಾಕ್ ನೀಡಿದೆ.
ಪ್ರಶ್ನೆ ಪತ್ರಿಕೆ ತಪ್ಪಾಗಿ ತಯಾರಿಸಿದ್ದು, ಈ ವಿಷಯ ತಿಳಿಯುತ್ತಿದ್ದಂತೆಯೇ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿಗಳನ್ನು ಮನೆಗೆ ವಾಪಸ್ ಕಳಿಸಲಾಗಿದೆ. ಮೆಕೆಟ್ರಾನಿಕ್ಸ್ ಸ್ಯಾಟಲೈಟ್ ಸಂವಹನ ವಿಷಯದ ಪ್ರಶ್ನೆಪತ್ರಿಕೆಯನ್ನು ತಪ್ಪಾಗಿ ತಯಾರಿಸಲಾಗಿದ್ದು, ವಿದ್ಯಾರ್ಥಿಗಳನ್ನು ಪರೀಕ್ಷಾ ಕೊಠಡಿಯಲ್ಲಿ ಒಂದು ಗಂಟೆ ಕಾಯಿಸಿದ ನಂತರ ಮನೆಗೆ ತೆರಳಲು ಸೂಚನೆ ನೀಡಿ ಪರೀಕ್ಷೆಯನ್ನು ಮುಂದೂಡಲಾಗಿದೆ.
ವಿಷಯ/ ಕೋರ್ಸ್ ನ ಕೋಡ್ ನಲ್ಲಿ ಗೊಂದಲ ಉಂಟಾಗಿದ್ದರಿಂದ ಪ್ರಶ್ನೆ ಪತ್ರಿಕೆ ತಪ್ಪಾಗಿದೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಗೆ ವಿಟಿಯು ಅಧಿಕಾರಿಯೊಬ್ಬರು ಹೇಳಿದ್ದಾರೆ. ಜು.9 ಕ್ಕೆ ಪರೀಕ್ಷೆಯನ್ನು ನಿಗದಿಪಡಿಸಲಾಗಿದೆ. ಆದರೆ ಮೆಕೆಟ್ರಾನಿಕ್ಸ್ ವಿಷಯವನ್ನು ವಿಟಿಯುವಿನ ಕೆಲವೇ ಕಾಲೇಜುಗಳಲ್ಲಿ ಬೋಧನೆ ಮಾಡಲಾಗುತ್ತಿದ್ದು, ಬೆಂಗಳೂರಿನಲ್ಲಿ ಒಂದೇ ಕಾಲೇಜಿನಲ್ಲಿ ಬೋಧನೆ ಮಾಡಲಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ವಿದ್ಯಾರ್ಥಿಗಳುStudentsVisvesvaraya Technological Universitywrong question paperವಿಶ್ವೇಶ್ವರಯ್ಯ ತಾಂತ್ರಿಕ ವಿದ್ಯಾಲಯತಪ್ಪು ಪ್ರಶ್ನೆ ಪತ್ರಿಕೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.
ಬ್ರೇಕಿಂಗ್ ನ್ಯೂಸ್
ಜ್ಞಾನೇಶ್ ಕುಮಾರ್ ರಾಜೀನಾಮೆಗೆ ಹೆಚ್ಚಿದ ಒತ್ತಡ: ಮುಖ್ಯ ಚುನಾವಣಾ ಆಯುಕ್ತರನ್ನ ವಜಾ ಮಾಡೊದು ಅಷ್ಟು ಸುಲಭನಾ? ಯಾರಿಗಿದೆ ಆ ಪವರ್? ಸಂವಿಧಾನ ಹೇಳುವುದೇನು?ರಾಹುಕಾಲ ಎಂದರೇನು? ಮದುವೆಗೆ ಅನ್ವಯಿಸುತ್ತದೆಯೇ? ರಾಹು ಶಾಂತಿಗಾಗಿ ನಿಂಬೆ ಹಣ್ಣು ದೀಪ ಹಚ್ಚುವುದು ಸೂಕ್ತವೇ?ಗೌರಿಬಿದನೂರಿನ ಮಣ್ಣಲ್ಲಿ ಅರಳಿದ ಮರುಭೂಮಿ ಹಣ್ಣು: ಅಸಾಧ್ಯವನ್ನು ಸಾಧ್ಯವಾಗಿಸಿದ ಹಠವಾದಿ; ಸ್ವಾವಲಂಬಿ ಕೃಷಿಗೆ ಹೊಸ ಭಾಷ್ಯ ಬರೆದ ದಿವಾಕರ್ ಚನ್ನಪ್ಪ..!ಕರ್ನಾಟಕದ ನಂ.1 ಶ್ರೀಮಂತ ಯಾರು ಗೊತ್ತಾ? ಅಂಬಾನಿ, ಅದಾನಿ ಬಿಡಿ; ಇಲ್ಲಿದೆ ನಮ್ಮ ಕರುನಾಡ ಸಿರಿವಂತರ ಟಾಪ್ ಲಿಸ್ಟ್!ಫ್ಯಾಟ್ ನಿಂದ ಫಿಟ್ ವರೆಗೆ: ಸಾಹೇಬಲಾಲ್ ಛಪ್ಪರ್ಬಂದ್ ಸ್ಫೂರ್ತಿದಾಯಕ ಪಯಣವಿದೇಶಿ ಪ್ರವಾಸದ ಪ್ಲ್ಯಾನ್ ಇದೆಯೇ? ಒಂದು ಸಣ್ಣ ತಪ್ಪು ಭಾರೀ ದಂಡಕ್ಕೆ ಕಾರಣವಾಗಬಹುದು; ಪ್ರವಾಸಿಗರು ತಿಳಿದಿರಲೇಬೇಕಾದ ನಿಯಮಗಳಿವು...!ಮನಸ್ಸಿದ್ದರೆ ಮಾರ್ಗ ಎಂಬುದನ್ನು ರುಜುವಾತು ಮಾಡಿದ ಛಲವಾದಿ; 27 ವರ್ಷಗಳ ಹೋರಾಟದಲ್ಲಿ 26 ಬಾರಿ ಸೋತು 59ನೇ ವಯಸ್ಸಿನಲ್ಲಿ ಸರ್ಕಾರಿ ಶಿಕ್ಷಕರಾದ ವಿಜಯ್ಪಶ್ಚಿಮ ಘಟ್ಟಗಳ ESA - ಕಸ್ತೂರಿರಂಗನ್ ವರದಿ ಇನ್ನೂ ಏಕೆ ಜಾರಿಗೆ ಬಂದಿಲ್ಲ?


