ರಾಜ್ಯ

159 ಕಡೆ ವಿಜಯ್ ಮಲ್ಯ ಆಸ್ತಿ ಪತ್ತೆ ಹಚ್ಚಿದ ಬೆಂಗಳೂರು ಪೊಲೀಸರು

ಬ್ಯಾಂಕ್ ಸಾಲವನ್ನು ಮರುಪಾವತಿ ಮಾಡಲು ಸಿದ್ಧರಾಗಿರುವ ಉದ್ದೇಶಪೂರ್ವಕ ಸುಸ್ತಿದಾರ ವಿಜಯ್ ಮಲ್ಯ ಅವರಿಗೆ ಸೇರಿದ 159 ಆಸ್ತಿಗಳನ್ನು ಬೆಂಗಳೂರು ನಗರ ಪೊಲೀಸರು...

159 ಕಡೆ ವಿಜಯ್ ಮಲ್ಯ ಆಸ್ತಿ ಪತ್ತೆ ಹಚ್ಚಿದ ಬೆಂಗಳೂರು ಪೊಲೀಸರು
ವಿಜಯ್ ಮಲ್ಯ
Published On :
ಬೆಂಗಳೂರು; ಬ್ಯಾಂಕ್ ಸಾಲವನ್ನು ಮರುಪಾವತಿ ಮಾಡಲು ಸಿದ್ಧರಾಗಿರುವ ಉದ್ದೇಶಪೂರ್ವಕ ಸುಸ್ತಿದಾರ ವಿಜಯ್ ಮಲ್ಯ ಅವರಿಗೆ ಸೇರಿದ 159 ಆಸ್ತಿಗಳನ್ನು ಬೆಂಗಳೂರು ನಗರ ಪೊಲೀಸರು ಗುರುವಾರ ಪತ್ತೆ ಹಚ್ಚಿದ್ದಾರೆ. 
ರಾಜ್ಯ ವಿವಿಧ ಪ್ರದೇಶಗಳಲ್ಲಿ ಪರಿಶೀಲನೆ ನಡೆಸಿರುವ ಪೊಲೀಸರು ವಿಜಯ್ ಮಲ್ಯ ಮತ್ತು ಅವರ ಕಂಪನಿ ಯುನೈಟೆಡ್ ಬ್ರೀವರೀಸ್'ಗೆ ಸೇರಿದ 159 ಆಸ್ತಿಗಳನ್ನು ಪತ್ತೆ ಹಚ್ಚಿದ್ದು, ಅವುಗಳ ವಿವರಗಳನ್ನು ಜಾರಿ ನಿರ್ದೇಶನಾಲಯದ ಮೂಲಕ ದೆಹಲಿಯ ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. 
ರಾಜ್ಯದ ವಿವಿಧೆಡೆ ಮಲ್ಯ ಹಾಗೂ ಅವರ ಕಂಪನಿಗೆ ಸೇರಿರುವ ಮತ್ತಷ್ಟು ಆಸ್ತಿಗಳ ವಿವರಗಳ ಮಾಹಿತಿ ಕಲೆ ಹಾಕಲು ಮತ್ತಷ್ಟು ಕಾಲವಕಾಶ ಬೇಕೆಂದು ಬೆಂಗಳೂರು ಪೊಲೀಸರು ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ. 
ಬ್ಯಾಂಕುಗಳಿಗೆ ಸಾಲ ಮರುಪಾವತಿ ಮಾಡದೆ ವಿದೇಶಕ್ಕೆ ಹಾರಿರುವ ವಿಜಯ್ ಮಲ್ಯ ಅವರಿಗೆ ಸೇರಿದ ಆಸ್ತಿಗಳ ವಿವರಗಳನ್ನು ಪತ್ತೆಹಚ್ಚುವಂತೆ ದೆಹಲಿ ನ್ಯಾಯಾಲಯ ಮಾರ್ಚ್ 27ರಂದು ಬೆಂಗಳೂರು ಪೊಲೀಸರಿಗೆ ಸೂಚಿಸಿತ್ತು. 

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.