ಚಿಕ್ಕಮಗಳೂರು: ಅಪಘಾತವಾದವರನ್ನು ಆಸ್ಪತ್ರೆಗೆ ದಾಖಲಿಸಿ ಮಾನವೀಯತೆ ಮೆರೆದ ಅಂಬ್ಯುಲೆನ್ಸ್ ಚಾಲಕ
ಅಪಘಾತಕ್ಕೀಡಾಗಿ ರಸ್ತೆ ಬದಿಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಖಾಸಗಿ ಅಂಬ್ಯುಲೆನ್ಸ್ ಚಾಲಕನೊಬ್ಬ ಮಾನವೀಯತೆ ಮೆರೆದಿದ್ದಾನೆ.

Published On :
ಚಿಕ್ಕಮಗಳೂರು: ಅಪಘಾತಕ್ಕೀಡಾಗಿ ರಸ್ತೆ ಬದಿಯಲ್ಲೇ ರಕ್ತದ ಮಡುವಿನಲ್ಲಿ ಬಿದ್ದಿದ್ದವರನ್ನು ಆಸ್ಪತ್ರೆಗೆ ದಾಖಲಿಸುವ ಮೂಲಕ ಖಾಸಗಿ ಅಂಬ್ಯುಲೆನ್ಸ್ ಚಾಲಕನೊಬ್ಬ ಮಾನವೀಯತೆ ಮೆರೆದಿದ್ದಾನೆ.
ಚಿಕ್ಕಮಗಳೂರು-ಹಾಸನ ಮಾರ್ಗದ ಕುಪ್ಪಳ್ಳಿ ಸಮೀಪ ಈ ಘಟನೆ ನಡೆದಿದೆ. ಚಿಕ್ಕಮಗಳೂರಿನಿಂದ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಖಾಸಗಿ ಅಂಬ್ಯುಲೆನ್ಸ್ ಚಾಲಕ ಜಿಶಾನ್ ಅಸಾದ್ ಹಾಸನ ಸಮೀಪದ ಕುಪ್ಪಳ್ಳಿಗೆ ತಲುಪಿದ್ದಾಗ ಅಲ್ಲಿ ಎಸ್‍ಆರ್ ಟಿಸಿ ಬಸ್ ಮತ್ತು ಮಿನಿ ಟೆಂಪೋ ನಡುವೆ ಡಿಕ್ಕಿಯಾಗಿ ನಾಲ್ವರು ಗಾಯಾಳುಗಳು ರಸ್ತೆ ಬದಿಯಲ್ಲೇ ನರಳುತ್ತಿರುವುದನ್ನು ಕಂಡಿದ್ದಾನೆ.
ತಕ್ಷಣ ಜಾಗೃತನಾದ ಅಂಬ್ಯುಲೆನ್ಸ್ ಚಾಲಕ ಆ ನಾಲ್ವರೂ ಅಪರಿಚಿತರನ್ನು ಅಂಬ್ಯುಲೆನ್ಸ್ ಗೆ ಹತ್ತಿಸಿಕೊಂಡಿದ್ದು ಹಾಸನದ ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾನೆ. ತನ್ನದು ಖಾಸಗಿ ಅಂಬ್ಯುಲೆನ್ಸ್ ಆಗಿದ್ದರೂ ಇದಕ್ಕಾಗಿ ಆತ ಅವರಿಂದ ಹಣವನ್ನೇನೂ ಸ್ವೀಕರಿಸಲಿಲ್ಲ ಎನ್ನುವುದು ಗಮನಾರ್ಹ.
ಮೂಲತಃ ಚಿಕ್ಕಮಗಳೂರಿನ ಉಪ್ಪಳ್ಳಿ ನಿವಾಸಿಯಾದ ಜಿಶಾನ್ ಈ ಮಾನವೀಯ ಕಾರ್ಯಕ್ಕೆ ಸಾಮಾಜಿಕ ತಾಣಗಳಲ್ಲಿ ವ್ಯಾಪಕ ಪ್ರಶಂಸೆ ವ್ಯಕ್ತವಾಗುತ್ತಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಚಿಕ್ಕಮಗಳೂರುChikkamagaluruಮಾನವೀಯತೆHumanityAccident victimsPrivate ambulance driverಖಾಸಗಿ ಅಂಬ್ಯುಲೆನ್ಸ್ ಚಾಲಕ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


