ಕುಮಟಾ ಬಳಿ ಭೀಕರ ಅಪಘಾತ: ಲಾರಿ ಬಸ್ ಢಿಕ್ಕಿ, 3 ಸಾವು, 17 ಮಂದಿಗೆ ಗಾಯ
ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದಾರೆ.

Published On :
ಕುಮಟಾ: ಉತ್ತರ ಕನ್ನಡ ಜಿಲ್ಲೆಯ ಕುಮಟಾ ಪಟ್ಟಣದ ಬಳಿ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸಾವನ್ನಪ್ಪಿ 17 ಮಂದಿ ಗಾಯಗೊಂಡಿದ್ದಾರೆ.
ರಾಷ್ಟ್ರೀಯ ಹೆದ್ದಾರಿ 66 ರಲ್ಲಿ ಸಂಜೆ 6 ಗಂಟೆ ಸುಮಾರಿನಲ್ಲಿ ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಮತ್ತು ಲಾರಿ ನಡುವೆ ಢಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಮೂವರು ಮೃತಪಟ್ಟಿದ್ದು, 16 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಲಾಗಿದೆ.
ಕುಮಟಾದಿಂದ ಗೋಕರ್ಣಕ್ಕೆ ತೆರಳುತ್ತಿದ್ದ ಬಸ್ ನ ಬಲಭಾಗ ಲಾರಿಯಲ್ಲಿದ್ದ ಕಬ್ಬಿಣದ ವಸ್ತುವಿಗೆ ಡಿಕ್ಕಿ ಹೊಡೆದಿದೆ. ಡಿಕ್ಕಿಯ ರಭಸಕ್ಕೆ ಬಸ್ನ ಬಲಭಾಗ ಸಂಪೂರ್ಣವಾಗಿ ನಜ್ಜುಗುಜ್ಜಾಗಿದ್ದು. ಬಲಬದಿ ಸೀಟಿನಲ್ಲಿ ಕುಳಿತಿದ್ದ ಇಬ್ಬರು ಪ್ರಯಾಣಿಕರು ಮೃತಪಟ್ಟಿದ್ದರೆ, ಇತರ 16 ಜನರಿಗೆ ಗಾಯಗಳಾಗಿವೆ.
ಮೃತಪಟ್ಟವರ ಗುರುತು ಇನ್ನೂ ಪತ್ತೆಯಾಗಿಲ್ಲ. ಕುಮಟಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


