ಕಲಬುರ್ಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ; ಖಾಸಗಿ ಶಾಲೆ ಹೆಡ್ ಮಾಸ್ಟರ್ ಬಂಧನ
ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಲಬುರ್ಗಿಯ ಖಾಸಗಿ ಮಾಧ್ಯಮಿಕ ಶಾಲೆಯ....

Published On :
ಕಲಬುರ್ಗಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಕಲಬುರ್ಗಿಯ ಖಾಸಗಿ ಮಾಧ್ಯಮಿಕ ಶಾಲೆಯ ಮುಖ್ಯೋಪಾಧ್ಯಾಯರನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ.
12 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ 42 ವರ್ಷದ ಮಲ್ಲಣ್ಣಗೌಡ ಎಂಬುವವರನ್ನು ಬ್ರಹ್ಮಪುರ ಪೊಲೀಸರು ಬಂಧಿಸಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎನ್ ಶಶಿಕುಮಾರ್ ಅವರು ತಿಳಿಸಿದ್ದಾರೆ.
ಆರೋಪಿ ಶಿಕ್ಷಕ ನಿನ್ನೆ ಸಂಜೆ ಚೇರ್ ಸ್ಥಳಾಂತರಿಸುವ ನೆಪದಲ್ಲಿ ತನ್ನ ಶಾಲೆಯ ಬಾಲಕಿಯನ್ನು ಕರೆದು ಲೈಂಗಿಕ ದೌರ್ಜನ್ಯ ಎಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಸಂತ್ರಸ್ಥ ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗಾಗಿ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಪಿ ವಿರುದ್ಧ ಪೋಸ್ಕೋ ಕಾಯ್ದೆ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ಶಶಿಕುಮಾರ್ ಅವರು ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
ಬಂಧನarrestedsexually assaultingHead Master of a private schoolಖಾಸಗಿ ಶಾಲೆ ಹೆಡ್ ಮಾಸ್ಟರ್ಲೌಂಗಿಕ ದೌರ್ಜನ್ಯ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


