ರಾಜ್ಯ

ಜನರ ಸಮಸ್ಯೆ ಆಲಿಸಲು ಪ್ರತೀ ವಾರ ಜನತಾ ದರ್ಶನ: ಸಿಎಂ ಕುಮಾರಸ್ವಾಮಿ

ಸಣ್ಣಪುಟ್ಟ ಸಮಸ್ಯೆಗಳನ್ನು ಹಿಡಿದು ನಗರಕ್ಕೆ ಬರುವ ಜನರ ಸಮಸ್ಯೆಗಳನ್ನು ಆಲಿಸಲು ಪ್ರತೀ ವಾರ ಜನತಾದರ್ಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ...

ಜನರ ಸಮಸ್ಯೆ ಆಲಿಸಲು ಪ್ರತೀ ವಾರ ಜನತಾ ದರ್ಶನ: ಸಿಎಂ ಕುಮಾರಸ್ವಾಮಿ
ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ
Published On :
ಬೆಂಗಳೂರು; ಸಣ್ಣಪುಟ್ಟ ಸಮಸ್ಯೆಗಳನ್ನು ಹಿಡಿದು ನಗರಕ್ಕೆ ಬರುವ ಜನರ ಸಮಸ್ಯೆಗಳನ್ನು ಆಲಿಸಲು ಪ್ರತೀ ವಾರ ಜನತಾದರ್ಶನ ನಡೆಸಲಾಗುವುದು ಎಂದು ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಶನಿವಾರ ಹೇಳಿದ್ದಾರೆ. 
ಪ್ರತೀ ವಾರ ಜತನಾ ದರ್ಶನ ನಡೆಸುವಂತೆ ಈಗಾಗಲೇ ಎಲ್ಲಾ ಡಿಸಿ ಕಚೇರಿಗಳಿಗೆ ಆದೇಶವನ್ನು ಹೊರಡಿಸಲಾಗಿದೆ ಎಂದು ತಿಳಿದುಬಂದಿದೆ. 
ವಾರದಲ್ಲಿ ಒಂದು ದಿನ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳು ಅಲ್ಲಿನ ಜನರ ಸಮಸ್ಯೆ ಆಲಿಸಬೇಕು. ಜನತಾದರ್ಶನಕ್ಕೆ ಸಾಲ ಮಾಡಿ ದೂರದ ಊರುಗಳಿಂದ ಇಲ್ಲಿಗೆ ಬರುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಜನ ಸಾಮಾನ್ಯರ ಸಮಸ್ಯೆಗಳನ್ನು ಅಲ್ಲಿಯೇ ಬಗೆಹರಿಸಬೇಕು ಎಂದು ಎಲ್ಲಾ ಜಿಲ್ಲಾಧಿಕಾರಿಗಳ ಕಚೇರಿಗೆ ಸುತ್ತೋಲೆ ಹೊರಡಿಸಲಾಗಿದೆ ಎಂದು ಕುಮಾರಸ್ವಾಮಿಯವರು ತಿಳಿಸಿದ್ದಾರೆ. 
 ಜಿಲ್ಲಾಧಿಕಾರಿಗಳಿಂದ ಸಮಸ್ಯೆಗಳು ಬಗೆಹರಿಯದೇ ಹೋದರೆ, ಬಳಿಕ ಆ ಸಮಸ್ಯೆಗಳು ನನ್ನ ಬಳಿ ಬರಲಿ. ಜಿಲ್ಲಾಧಿಕಾರಿಗಳು ವಾರದಲ್ಲಿ ಒಂದು ದಿನ ಜನರ ಸಮಸ್ಯೆಗಳನ್ನು ಆಲಿಸಲೇಬೇಕು. ಯಾವ ರೀತಿ ಜನ ಸಾಮಾನ್ಯರ ಜೊತೆ ಚರ್ಚೆ ನಡೆಸುತ್ತಾರೆಂಬುದರ ಕುರಿತ ಮಾಹಿತಿಗಳನ್ನು ಮುಖ್ಯಮಂತ್ರಿಗಳ ಕಾರ್ಯದರ್ಶಿಗಳಿಗೆ ನೀಡಬೇಕು.
ಈ ಕುರಿತು ಪ್ರಧಾನ ಕಾರ್ಯದರ್ಶಿಗಳಿಗೆ ಉಸ್ತುವಾರಿ ನೀಡಲಾಗಿದ್ದು. ಅವರೇ ಜಿಲ್ಲೆಗಳಿಗೆ ಹೋಗಿ ಅಲ್ಲಿಯೇ ಒಂದು ದಿನ ವಾಸ್ತವ್ಯ ಹೂಡಿ, ಎಲ್ಲಾ ಮಾಹಿತಿಗಳನ್ನು ಕಲೆ ಹಾಕಿ ಮುಖ್ಯಕಾರ್ಯದರ್ಶಿಗಳಿಗೆ ನೀಡಬೇಕೆಂದು ಸೂಚನೆ ನೀಡಲಾಗಿದೆ ಎಂದಿದ್ದಾರೆ. 
250 ಜನರಿಗೆ ಉದ್ಯೋಗಾವಕಾಶ
ಉದ್ಯೋಗ ಹರಿಸಿ ಜನತಾದರ್ಶನಕ್ಕೆ ಬರುವ 250 ಜನರಿಗೆ ಉದ್ಯೋಗಾವಕಾಶವನ್ನು ನೀಡಲಾಗುತ್ತದೆ. ಮೊದಲ ಹಂತವಾಗಿ 250 ಯುವಕರಿಗೆ ಉದ್ಯೋಗವನ್ನು ನೀಡಲಾಗುತ್ತದೆ. ಅರ್ಹ ಅಭ್ಯರ್ಥಿಗಳಿಗೆ ಉದ್ಯೋಗಾವಕಾಶವನ್ನು ನೀಡಲಾಗುತ್ತದೆ. ಅಂಗವಿಕಲರು, ಆರೋಗ್ಯ ಸಮಸ್ಯೆಗಳಿರುವವರು, ಬಿಇ, ಎಂಟೆಕ್ ಪದವೀಧರರು ಸೇರಿದಂತೆ ಎಲ್ಲಾ ರೀತಿಯ ಯುವಕರಿಗೂ ಉದ್ಯೋಗವಕಾಶವನ್ನು ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.