ವಿಐಪಿ ಸಂಚಾರದ ವೇಳೆ ಆ್ಯಂಬುಲೆನ್ಸ್ ಗೆ ಅವಕಾಶ ಕೊಡಿ: ಪರಮೇಶ್ವರ್
ವಿಐಪಿ ಸಂಚಾರ ಸಂದರ್ಭದಲ್ಲಿ ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್‌ಗೆ ಅವಕಾಶ ಮಾಡಿಕೊಡಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಮಾಡಿದ್ದಾರೆ....

Published On :
ಬೆಂಗಳೂರು: ವಿಐಪಿ ಸಂಚಾರ ಸಂದರ್ಭದಲ್ಲಿ ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್‌ಗೆ ಅವಕಾಶ ಮಾಡಿಕೊಡಿ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ಆದೇಶ ಮಾಡಿದ್ದಾರೆ.
ಗಣ್ಯ ವ್ಯಕ್ತಿಗಳ ಸಂಚಾರದ ವೇಳೆ ರೋಗಿಗಳನ್ನು ಆಸ್ಪತ್ರೆಗೆ ಕರೆದೊಯ್ಯುವ ಆ್ಯಂಬುಲೆನ್ಸ್ ಸಂಚಾರ ದಟ್ಟಣೆಯಲ್ಲಿ ಸಿಲುಕಿ ಸಮಸ್ಯೆಯಾಗಿರುವುದನ್ನು ನಾನು ಖುದ್ದಾಗಿ ನೋಡಿದ್ದೇನೆ. ಹೀಗಾಗಿ, ಇನ್ಮುಂದೆ ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್ ಹೋಗಲು ಅವಕಾಶ ಮಾಡಿಕೊಡಿ
ಎಂದು ತಿಳಿಸಿದ್ದಾರೆ.
ಈ ಸಂಬಂಧ ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್. ರಾಜು ಅವರಿಗೆ ಪತ್ರ ಬರೆದಿರುವ ಡಾ.ಜಿ.ಪರಮೇಶ್ವರ್, ನಾನೂ ಸೇರಿ ಬೇರೆ ಯಾವುದೇ ಗಣ್ಯ ವ್ಯಕ್ತಿಗಳು ಸಂಚರಿಸುವ ಸಂದರ್ಭದಲ್ಲಿ ಶಿಷ್ಟಾಚಾರ ಬದಿಗೊತ್ತಿ ಆ್ಯಂಬುಲೆನ್ಸ್‌ಗೆ ಮೊದಲ ಆದ್ಯತೆ ನೀಡಬೇಕು ಎಂದು ಹೇಳಿದ್ದಾರೆ.
ಮುಖ್ಯಮಂತ್ರಿ, ಗೃಹ ಮಂತ್ರಿಗಳು ಸೇರಿ ಗಣ್ಯ ವ್ಯಕ್ತಿಗಳ ಸಂಚಾರ ಸಂದರ್ಭದಲ್ಲಿ ಆ್ಯಂಬುಲೆನ್ಸ್ ಸಂಚಾರಕ್ಕೆ ತಡೆಯೊಡ್ಡಲಾಗುತ್ತದೆ. ನಾನೂ ಸಂಚರಿಸುವ ಸಂದರ್ಭದಲ್ಲಿ ಶಿಷ್ಟಾಚಾರದಂತೆ ಟ್ರಾಫಿಕ್ ಫ್ರೀ ಮಾಡಲು ಕೆಲ ಬಾರಿ ಆ್ಯಂಬುಲೆನ್ಸ್ ತಡೆದು ನಿಲ್ಲಿಸಿದ್ದು ನೋಡಿದ್ದೇನೆ. ಗಣ್ಯ ವ್ಯಕ್ತಿಗಳಿಗಿಂತ ಮೊದಲು ಆ್ಯಂಬುಲೆನ್ಸ್ ಸಂಚರಿಸಲು ಮುಕ್ತ ಅವಕಾಶ ನೀಡಬೇಕೆಂದು ಹೇಳಿದ್ದಾರೆ.
ಈ ಸಂಬಂಧ ನ್ಯ ಇಂಡಿಯನ್ ಎಕ್ಸ್ ಪ್ರೆಸ್ ಜೊತೆ ಮಾತನಾಡಿರುವ ಸಂಚಾರಿ ಪೊಲೀಸ್ ಎಸಿಪಿ ಆರ್ ಹಿತೇಂದ್ರ ವಿಐಪಿಗಳು ಸಂಚರಿಸುವ ವೇಳೆ ಆ್ಯಂಬುಲೆನ್ಸ್ ಗೆ ಅವಕಾಶ ಮಾಡಿಕೊಡುವ ನಿಯಮವನ್ನು ಈಗಾಗಲೇ ಪೊಲೀಸರು ಅನುಷ್ಠಾನಗೊಳಿಸಿದ್ದಾರೆ, ಆದರೆ ಬೆಂಗಳೂರಿನಲ್ಲಿ ಇದೊಂದು ಸವಾಲಿನ ಕೆಲಸ. ಇಲ್ಲಿ ಹೆಚ್ಚಿನ ಪ್ರಮಾಣದಲ್ಲಿ ವಾಹನಗಳ ಸಂಚಾರ ಇರುವುದರಿಂದ ಸ್ವಲ್ಪ ಸಮಸ್ಯೆಯಾಗುತ್ತದೆ, ಸರ್ಕಾರ ಮತ್ತು ಗೃಹ ಸಚಿವರ ಆದೇಶ ಪಾಲನೆ ಮಾಡುವುದು ನಮ್ಮ ಕರ್ತವ್ಯ, ಆ್ಯಂಬುಲೆನ್ಸ್ ಗೆ ಅವಕಾಶ ಮಾಡಿಕೊಡಲು ನಮ್ಮ ಕೈಲಾದಷ್ಟು ಉತ್ತಮ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದ್ದಾರೆ.
ವಿವಿಐಪಿ ಸಂಚಾರದ ವೇಳೆ ಆ್ಯಂಬುಲೆನ್ಸ್ ಗೆ ದಾರಿ ಮಾಡಿಕೊಟ್ಟಿರುವ ಹಲವಾರು ಉದಾಹರಣೆ ನಮ್ಮ ಬಳಿಇವೆ ಎಂದು ಮತ್ತೊಬ್ಬ ಅಧಿಕಾರಿ ಹೇಳಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


