ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ: ಸಚಿವ ಎನ್ ಮಹೇಶ್
ರಾಜ್ಯದ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ...

ಕಲಬುರಗಿ: ರಾಜ್ಯದ ಯಾವುದೇ ಸರ್ಕಾರಿ ಶಾಲೆಗಳನ್ನು ಮುಚ್ಚುವುದಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎನ್ ಮಹೇಶ್ ತಿಳಿಸಿದ್ದಾರೆ.
ಶಿಕ್ಷಣ ಸಚಿವರಾದ ಬಳಿಕ ಮೊದಲ ಬಾರಿಗೆ ನಿನ್ನೆ ಕಲಬುರಗಿಗೆ ಭೇಟಿ ನೀಡಿದ ಅವರು, ಕಡಿಮೆ ವಿದ್ಯಾರ್ಥಿಗಳ ಸಂಖ್ಯೆ ಇರುವ ಶಾಲೆಗಳನ್ನು ಹೆಚ್ಚು ವಿದ್ಯಾರ್ಥಿಗಳಿರುವ ಶಾಲೆ ಜೊತೆ ವಿಲೀನಗೊಳಿಸಲಾಗುವುದು ಎಂಬ ಸುದ್ದಿಯನ್ನು ಅವರು ತಳ್ಳಿಹಾಕಿದರು. ರಾಜ್ಯ ಸರ್ಕಾರದ ಮುಂದೆ ಅಂತಹ ಯಾವುದೇ ಉದ್ದೇಶವಿಲ್ಲ. ಕಡಿಮೆ ಸಂಖ್ಯೆಯಿರುವ ಶಾಲೆಗಳು ಯಥಾಪ್ರಕಾರ ಮುಂದುವರಿಯಲಿವೆ ಎಂದು ಹೇಳಿದರು.
ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿ ತರಗತಿಗಳನ್ನು ಸೇರಿಸುವ ಉದ್ದೇಶ ಸರ್ಕಾರದ ಮುಂದೆ ಇದೆ. ಮೊದಲ ಹಂತದಲ್ಲಿ ರಾಜ್ಯದ ಸಾವಿರ ಪ್ರಾಥಮಿಕ ಶಾಲೆಗಳಲ್ಲಿ ಎಲ್ ಕೆಜಿ ಮತ್ತು ಯುಕೆಜಿಗಳನ್ನು ಸೇರಿಸಲಾಗುವುದು. ಶಾಲಾ, ಕಾಲೇಜು ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ವಿತರಿಸುವ ಕುರಿತು ಮುಖ್ಯಮಂತ್ರಿಗಳೊಂದಿಗೆ ಚರ್ಚೆ ನಡೆಸುವುದಾಗಿ ಹೇಳಿದರು.
ಸರ್ಕಾರಿ ಶಾಲೆಗಳಲ್ಲಿ ಉತ್ತಮ ಗುಣಮಟ್ಟದ, ಕೌಶಲ್ಯಾಧಾರಿತ ಶಿಕ್ಷಣ ನೀಡುವುದು ಸರ್ಕಾರದ ಉದ್ದೇಶವಾಗಿದೆ. ಈ ಮೂಲಕವಷ್ಟೇ ಶಾಲೆಗಳಲ್ಲಿ ಗುಣಮಟ್ಟ ಕಾಪಾಡಲು ಸಾಧ್ಯ. ಶಾಲೆಗಳಲ್ಲಿ ಖಾಲಿಯಿರುವ 10,000 ಶಿಕ್ಷಕರ ಹುದ್ದೆಗೆ ನೇಮಕಾತಿ ನಡೆಸುವ ಕಾರ್ಯಕ್ರೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


