ಪೂರ್ಣ ಪ್ರಮಾಣ ಸಾಲ ಮನ್ನಾ ಮಾಡಿ; ಸಿಎಂಗೆ ರೈತ ಸಂಘಟನೆಗಳ ಆಗ್ರಹ
ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪೂರ್ಣ ಪ್ರಮಾಣದಲ್ಲಿ ರೈತರ ಸಾಲ ಮನ್ನಾ ಮಾಡಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸುತ್ತಿವೆ...

Published On :
ಬೆಂಗಳೂರು; ಮುಖ್ಯಮಂತ್ರಿ ಕುಮಾರಸ್ವಾಮಿಯವರು ಪೂರ್ಣ ಪ್ರಮಾಣದಲ್ಲಿ ರೈತರ ಸಾಲ ಮನ್ನಾ ಮಾಡಬೇಕು ಎಂದು ರೈತ ಸಂಘಟನೆಗಳು ಆಗ್ರಹಿಸುತ್ತಿವೆ.
ರೂ.34,000 ಕೋಟಿ ರೈತರ ಸಾಲ ಮನ್ನಾ ಮಾಡುವುದಾಗಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿಯವರು ಘೋಷಣೆ ಮಾಡಿದ್ದರೂ, ಇದಕ್ಕೆ ಒಪ್ಪದ ರೈತ ಸಂಘಟನೆಗಳು ಪೂರ್ಣ ಪ್ರಮಾಣದಲ್ಲಿ ಸಾಲ ಮನ್ನಾ ಮಾಡುವಂತೆ ಆಗ್ರಹಿಸಿ ಇಂದು ಬೆಂಗಳೂರಿನಲ್ಲಿ ಪ್ರತಿಭಟನೆ ನಡೆಸಲು ನಿರ್ಧರಿಸಿವೆ ಎಂದು ತಿಳಿದುಬಂದಿದೆ.
ಕುಮಾರಸ್ವಾಮಿಯವರು ಘೋಷಣೆ ಮಾಡಿಲುವ ಸಾಲ ಮನ್ನಾ ಕೃಷಿಗಾಗಿ ಸಾಲ ಪಡೆದ ಲಕ್ಷದಷ್ಟು ರೈತರ ಕೇವಲ ಒಂದು ಭಾಗದಷ್ಟು ಮಾತ್ರ ಸಾಲ ಮನ್ನಾ ಮಾಡಬಹುದು. ಅಧಿಕಾರಕ್ಕೆ ಬರುವುದಕ್ಕೂ ಮುನ್ನ ಮುಖ್ಯಮಂತ್ರಿಗಳು ರೈತರ ಸಾಲಗಳನ್ನು ಸಂಪೂರ್ಣ ಮನ್ನಾ ಮಾಡುವುದಾಗಿ ಘೋಷಣೆ ಮಾಡಿದ್ದರು. ಇದೀಗ ತಮ್ಮ ಮಾತನ್ನು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಕರ್ನಾಟಕ ರಾಜ್ಯ ರೈತ ಸಂಘ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಅವರು ಹೇಳಿದ್ದಾರೆ.
ಟ್ರಾಕ್ಟರ್ ಗಳು, ಉಳುಮೆದಾರರು, ಬೋರ್ ವೆಲ್ ಗಳಿಗಾಗಿ ಅಗೆಯುವುದಕ್ಕೆ ಹಾಗೂ ಪೈಪ್ ಗಳ ಖರೀದಿಗೆ ರೈತರು ಪಡೆದ ಸಾಲವನ್ನು ಯಾರು ಮನ್ನಾ ಮಾಡುತ್ತಾರೆ?... ರೈತರ ಸಂಪೂರ್ಣ ಸಾಲ ಮನ್ನಾ ಮಾಡಬೇಕೆಂದರೆ ರೂ.1.20 ಲಕ್ಷ ಕೋಟಿ ಬೇಕು. ಮುಖ್ಯಮಂತ್ರಿಗಳು ಸಂಪೂರ್ಣ ಸಾಲ ಮನ್ನಾ ಮಾಡುವುದಾಗಿ ತಿಳಿಸಿದ್ದು, ಆ ಭರವಸೆಗಳನ್ನು ಪೂರ್ಣಗೊಳಿಸಬೇಕು. ಹೀಗಾಗಿ ಭರವಸೆ ಈಡೇರಿಸುವಂತೆ ಆಗ್ರಹಿಸಿ ಮೌರ್ಯ ವೃತ್ತದ ಬಳಿಯಿರುವ ಗಾಂಧಿ ಪ್ರತಿಮೆ ಬಳಿ ಜು.21ರಂದು ದೊಡ್ಡ ಮಟ್ಟದ ರ್ಯಾಲಿಯನ್ನು ನಡೆಸಲಾಗುತ್ತದೆ ಎಂದು ತಿಳಿಸಿದ್ದಾರೆ.
ರ್ಯಾಲಿ ಬಳಿಕವೂ ಕುಮಾರಸ್ವಾಮಿಯವರು ಆಗ್ರಹಗಳನ್ನು ಪೂರೈಸದೇ ಹೋದಲ್ಲಿ ಪ್ರತಿಭಟನೆಯನ್ನು ಮತ್ತಷ್ಟು ತೀವ್ರ ಗೊಳಿಸಲಾಗುತ್ತದೆ ಎಂದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


