ಚಿನ್ನಸ್ವಾಮಿ ಸ್ಟೇಡಿಯಂ ಸ್ಫೋಟ ಪ್ರಕರಣ: ಮೂವರಿಗೆ 7 ವರ್ಷ ಜೈಲು ಶಿಕ್ಷೆ
ಐಪಿಎಲ್ ಪಂದ್ಯಾವಳಿ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾಂಪೌಡ್ ನಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ...

Published On :
ಬೆಂಗಳೂರು: ಐಪಿಎಲ್ ಪಂದ್ಯಾವಳಿ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಕಾಂಪೌಡ್ ನಲ್ಲಿ ನಡೆದಿದ್ದ ಬಾಂಬ್ ಸ್ಫೋಟ ಪ್ರಕರಣದ 14 ಆರೋಪಿಗಳ ಪೈಕಿ ಮೂವರಿಗೆ ಎನ್ ಐಎ ವಿಶೇಷ ಕೋರ್ಟ್ ಸೋಮವಾರ 7 ವರ್ಷ ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.
ಪ್ರಕರಣದ ಸುದೀರ್ಘ ವಿಚಾರಣೆ ನಡೆಸಿದ ನ್ಯಾಯಾಧೀಶ ಸಿದ್ದಲಿಂಗ ಪ್ರಭು ಅವರು ಇಂದು ತಪ್ಪೊಪ್ಪಿಕೊಂಡ ಮೂವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ ವಿಧಿಸಿದ್ದಾರೆ.
ಕಳೆದ ಬುಧವಾರ ಸ್ಫೋಟ ಪ್ರಕರಣದ 5ನೇ ಆರೋಪಿಯಾಗಿರುವ ಗೌಹಾರ್ ಅಜೀಜ್ ಖೋಮೆನಿ, 12ನೇ ಆರೋಪಿ ಕಮಲ್ ಹಸನ್ ಅಲಿಯಾಸ್ ಕಮಲ್ ಹಾಗೂ 13ನೇ ಆರೋಪಿ ಮೊಹಮ್ಮದ್ ಕಫೀಲ್ ಅಖ್ತರ್ ತಪ್ಪೊಪ್ಪಿಗೆ ಹೇಳಿಕೆ ನೀಡಿದ್ದರು. ಉಳಿದ ಆರೋಪಿಗಳ ಬಗ್ಗೆ ತನಿಖೆ ಮುಂದುವರೆದಿದೆ.
2010ರ ಏಪ್ರಿಲ್ 17ರಂದು ಐಪಿಎಲ್ ಪಂದ್ಯ ಆರಂಭಕ್ಕೆ ಮುನ್ನ ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಮೂರು ಬಾಂಬ್ ಸ್ಫೋಟಗೊಂಡಿದ್ದವು. ಘಟನೆಯಲ್ಲಿ ಪೊಲೀಸರು ಸೇರಿದಂತೆ 15 ಜನ ಗಾಯಗೊಂಡಿದ್ದರು. ಇದೇ ವೇಳೆ ಸ್ಫೋಟಗೊಳ್ಳದ ಎರಡು ಬಾಂಬ್‌ಗಳು ದೊರಕಿದ್ದವು.
ಉಗ್ರ ಯಾಸಿನ್ ಭಟ್ಕಳ ಸೇರಿದಂತೆ ಒಟ್ಟು 14 ಉಗ್ರರು ಪ್ರಕರಣದಲ್ಲಿ ಆರೋಪಿಗಳಾಗಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


