ಮಲೆನಾಡಿನ ಸಮಸ್ಯೆಗಳನ್ನು ಅರಿಯಲು ಅಲ್ಲಿಯೇ ಗ್ರಾಮ ವಾಸ್ತವ್ಯ: ಮುಖ್ಯಮಂತ್ರಿ ಘೋಷಣೆ
ಮಲೆನಾಡಿನ ಸಮಸ್ಯೆಗಳನ್ನು ಅರಿಯಲು ಅಲ್ಲಿಯೇ ಗ್ರಾಮ ವಾಸ್ತವ್ಯ ಮಾಡುವುದಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಘೋಷಿಸಿದ್ದಾರೆ

Published On :
ಬೆಂಗಳೂರು: ಮಲೆನಾಡಿನ ಸಮಸ್ಯೆಗಳನ್ನು ಅರಿಯಲು ಅಲ್ಲಿಯೇ ಗ್ರಾಮ ವಾಸ್ತವ್ಯ ಮಾಡುವುದಾಗಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಘೋಷಿಸಿದ್ದಾರೆ
ವಿಧಾನಸಭೆಯಲ್ಲಿ ಮಾತನಾಡಿದ ಕುಮಾರಸ್ವಾಮಿ ಮಲೆನಾಡಿನಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ.ಅಲ್ಲೇ ಉಳಿದು ಅಲ್ಲಿನ ಸಮಸ್ಯೆಗಳ ಅರಿಯಲು ಬಯಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.
ಇದಕ್ಕೆ ಮುನ್ನ ಸದನದಲ್ಲಿ ಮಾತನಾಡಿದ್ದ ತೀರ್ಥಹಳ್ಳಿ ಶಾಸಕ ಅರಹ ಜ್ಞಾನೇಂದ್ರ ಸೋಮವಾರ ಮುಗ್ದ ಬಾಲಕಿಯೊಬ್ಬಳು ಹಳ್ಳದಲ್ಲಿ ಕಾಲು ಜಾರಿ ಬಿದ್ದು ಕೊಚ್ಚಿ ಹೋದ ಬಗೆಗೆ ವಿವರಿಸಿದರು. ಜತೆಗೆ ಮಲೆನಾಡಿನ ಸಮಸ್ಯೆಗಳು ಎಷ್ಟು ಗಂಭೀರವಾಗಿದೆ ಎಂದು ಸಹ ಅವರು ಸದನಕ್ಕೆ ಮನದಟ್ಟು ಮಾಡಿದ್ದರು/
ಶಾಸಕರ ವಿವರಣೆ ಕೇಳಿದ ಕುಮಾರಸ್ವಾಮಿ ತಾನು ಮಲೆನಾಡಿನಲ್ಲಿ ಗ್ರಾಮ ವಾಸ್ತವ್ಯ ಮಾಡುತ್ತೇನೆ ಎಂದದ್ದಲ್ಲದೆ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನಿಡುವುದಾಗಿ ಘೋಷಿಸಿದ್ದಾರೆ.
"ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿಯಲ್ಲಿ ಕೊಚ್ಚಿ ಹೋದ ಶಾಲಾ ಬಾಲಕಿಯ ಕುಟುಂಬಕ್ಕೆ 10 ಲಕ್ಷ ರೂ. ಪರಿಹಾರ ನೀಡಲು ಸೂಚಿಸಿದ್ದೇನೆ . ಮುಂದೆ ಇಂತಹ ಘಟನೆ ನಡೆಯದಂತೆ ಕಾಳಜಿ ವಹಿಸಲು ಜಿಲ್ಲಾಧಿಕಾರಿಗಳಿಗೆ ಸೂಚಿಸುತ್ತೇನೆ." ಅವರು ಟ್ವೀಟ್ ಮಾಡಿದ್ದಾರೆ.
ಆಗುಂಬೆಯ ಕೆಂದಾಳುಬೈಲುಸಮೀಪ ದೊಡ್ಲಿಮನೆ ಗ್ರಾಮದ ಸರ್ಕಾರಿ ಪ್ರೌಢಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿನಿ ಆಶಿಕಾ (14) ಸೋಮವಾರ ಹಳ್ಳದಲ್ಲಿ ಕೊಚ್ಚಿ ಹೋಗಿದ್ದಳು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
HD KumaraswamyAraga jnanendraಮುಖ್ಯಮಂತ್ರಿ ಕುಮಾರಸ್ವಾಮಿMalenadustay in the villageಮಲೆನಾಡುಗ್ರಾಮವಾಸ್ತವ್ಯಅರಗ ಜ್ಞಾನೇಂದ್ರ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


