ಪೌರ ಕಾರ್ಮಿಕ ಆತ್ಮಹತ್ಯೆ: ಇಬ್ಬರು ಬಿಬಿಎಂಪಿ ಅಧಿಕಾರಿಗಳಿಗೆ ಪೊಲೀಸ್ ನೋಟಿಸ್
ವೈಯಾಲಿಕಾವಲ ಪೊಲೀಸರು ನಿನ್ನೆ ಆತ್ಮಹತ್ಯೆಗೆ ಶರಣಾದ ಪೌರ ಕಾರ್ಮಿಕ ಎಸ್ ಸುಬ್ರಮಣಿ ಪ್ರಕರಣದ ತನಿಖೆ....

Published On :
ಬೆಂಗಳೂರು: ವೈಯಾಲಿಕಾವಲ ಪೊಲೀಸರು ನಿನ್ನೆ ಆತ್ಮಹತ್ಯೆಗೆ ಶರಣಾದ ಪೌರ ಕಾರ್ಮಿಕ ಎಸ್ ಸುಬ್ರಮಣಿ ಪ್ರಕರಣದ ತನಿಖೆ ಆರಂಭಿಸಿದ್ದು, ಘಟನೆಗೆ ಸಂಬಂಧಿಸಿದಂತೆ ಪೊಲೀಸ್ ಠಾಣೆಗೆ ಬಂದು ಹೇಳಿಕೆ ನೀಡುವಂತೆ ಇಬ್ಬರು ಬಿಬಿಎಂಪಿ ಅಧಿಕಾರಿಗಳಿಗೆ ಬುಧವಾರ ನೋಟಿಸ್ ನೀಡಿದ್ದಾರೆ.
ಇದೇ ವೇಳೆ ಸುಬ್ರಮಣಿ ಅವರು ಕೆಪಿಸಿಸಿ ಅಧ್ಯಕ್ಷರಿಗೆ ಬರೆದಿರುವ ಪತ್ರವನ್ನು ಸುಯಿಸೈಡ್ ನೋಟ್ ಎಂದು ಪರಿಗಣಿಸುವುದಿಲ್ಲ ಎಂದು ಪೊಲೀಸರು ಸ್ಪಷ್ಟಪಡಿಸಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ವೈಯಾಲಿಕಾವಲ ಪೊಲೀಸರು ಈಗಾಗಲೇ ಸುಬ್ರಮಣಿ ಪತ್ನಿ ಕವಿತಾ ಅವರ ಹೇಳಿಕೆಯನ್ನು ದಾಖಲಿಸಿಕೊಂಡಿದ್ದು, ತನ್ನ ಪತಿ ಸಾವಿಗೆ ಬಿಬಿಎಂಪಿ ಅಧಿಕಾರಿಗಳೇ ಹೊಣೆ ಎಂದು ಆರೋಪಿಸಿದ್ದಾರೆ.
ಇದೊಂದು ಆತ್ಮಹತ್ಯೆ ಪ್ರಕರಣ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದ್ದು, ಯಾವುದೇ ಆತ್ಮಹತ್ಯೆ ಪತ್ರ ಪತ್ತೆಯಾಗಿಲ್ಲ ಮತ್ತು ಅವರು ಯಾವುದೇ ನಿರ್ಧಿಷ್ಟ ವ್ಯಕ್ತಿಯ ವಿರುದ್ಧ ಆರೋಪ ಮಾಡಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತನಿಖೆಯ ಭಾಗವಾಗಿ ಬಿಬಿಎಂಪಿಯ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ರಾಜೀವ್ ಮತ್ತು ಕಿರಿಯ ಆರೋಗ್ಯ ಅಧಿಕಾರಿ ಉಮಾಶಂಕರ್ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿರುವುದಾಗಿ ಅವರು ಹೇಳಿದ್ದಾರೆ.
ಕಳೆದ ಏಳು ತಿಂಗಳಿಂದ ವೇತನ ಸಿಗದ ಹಿನ್ನೆಲೆಯಲ್ಲಿ ನೊಂದ ಸುಬ್ರಮಣಿ(40) ಅವರು ನಿನ್ನೆ ಆತ್ಮಹತ್ಯೆಗೆ ಶರಣಾಗಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


