ಅಧಿಕ ಮಳೆಯಿಂದ ನದಿ, ಜಲಾಶಯಗಳು ಭರ್ತಿ: ಮೋಜು, ಮಸ್ತಿಗೆ ತಾತ್ಕಾಲಿಕ ತಡೆ
ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ

ಬೆಂಗಳೂರು: ಕರಾವಳಿ ಮತ್ತು ಮಲೆನಾಡು ಭಾಗಗಳಲ್ಲಿ ಧಾರಾಕಾರ ಮಳೆ ಮುಂದುವರಿಯುತ್ತಿರುವ ಹಿನ್ನಲೆಯಲ್ಲಿ ಅಣೆಕಟ್ಟು ಮತ್ತು ಜಲಾಶಯಗಳಲ್ಲಿ ಯಾವುದೇ ಮೋಜು ಮಸ್ತಿ ಮಾಡದಂತೆ ಕಂದಾಯ ಇಲಾಖೆ ಕಟ್ಟುನಿಟ್ಟಿನ ಎಚ್ಚರಿಕೆ ನೀಡಿದೆ.
ರಾಜ್ಯದ ಬಹುತೇಕ ಜಲಾಶಯಗಳಲ್ಲಿ ಇತ್ತೀಚೆಗೆ ಅಧಿಕ ಮಳೆ ಸುರಿಯುತ್ತಿರುವುದರಿಂದ ನೀರಿನ ಒಳಹರಿವು ಹೆಚ್ಚಾಗಿದೆ. ಈ ಹಿನ್ನಲೆಯಲ್ಲಿ ರಾಜ್ಯದ ನದಿಗಳಲ್ಲಿ ಮತ್ತು ಹೆಚ್ಚು ಜನಪ್ರಿಯ ನದಿ ತಾಣಗಳಲ್ಲಿ ಮನರಂಜನಾ ಚಟುವಟಿಕೆಗಳನ್ನು ತಾತ್ಕಾಲಿಕವಾಗಿ ಸರ್ಕಾರ ರದ್ದುಪಡಿಸಿದೆ.
ನದಿ ತೊರೆಗಳಲ್ಲಿ ಪ್ರವಾಹ ರೀತಿಯ ಪರಿಸ್ಥಿತಿ ಎದುರಾಗದಂತೆ ನೀರು ಸುಗಮವಾಗಿ ಹರಿದು ಹೋಗಲು ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗಿದೆ. ಅತಿ ಹೆಚ್ಚು ನೀರಿನ ಒಳಹರಿವು ಕಂಡಿರುವ ತುಂಗಭದ್ರಾ ನದಿ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಬಳ್ಳಾರಿ ಜಿಲ್ಲೆಗಳಲ್ಲಿ ಸಹ ನದಿ ತುಂಬಿ ಹರಿಯುತ್ತಿವೆ.
ಕರ್ನಾಟಕದ ನದಿಗಳಲ್ಲಿ ನೀರಿನ ಮಟ್ಟ ಹಠಾತ್ ಏರಿಕೆಯಾಗುವ ಸಾಧ್ಯತೆಯಿದೆ ಎಂದು ಕೇಂದ್ರ ಜಲ ಸಮಿತಿ ಈಗಾಗಲೇ ಮುನ್ನೆಚ್ಚರಿಕೆ ನೀಡಿದೆ.ಜನರು ನದಿ ದಾಟುವ ಸಂದರ್ಭದಲ್ಲಿ ಹಠಾತ್ ನೀರಿನ ಮಟ್ಟ ಏರಿಕೆಯಾಗುವ ಸಾಧ್ಯತೆಯಿರುವುದರಿಂದ ಜನರು ಹೆಚ್ಚಿನ ಎಚ್ಚರಿಕೆ ವಹಿಸಬೇಕೆಂದು ಸಲಹಾ ಸಮಿತಿ ತಿಳಿಸಿದೆ.
ರಾಜ್ಯದ ಪ್ರಮುಖ ನೀರು ಸಂಗ್ರಹಣೆ ಪ್ರದೇಶಗಳಲ್ಲಿ ಜಲಾಶಯಗಳಿಗೆ ನೀರಿನ ಒಳಹರಿವು ಹೆಚ್ಚಾಗಿದೆ. ಕರ್ನಾಟಕ ರಾಜ್ಯ ನೈಸರ್ಗಿಕ ವಿಪತ್ತು ನಿರ್ವಹಣೆ ಕೇಂದ್ರದ ಪ್ರಕಾರ, ನಿನ್ನೆ ಆಲಮಟ್ಟಿ ಜಲಾಶಯದ ನೀರಿನ ಒಳಹರಿವು 52,897 ಕ್ಯೂಸೆಕ್ ಆಗಿತ್ತು. ಅದು ನಿನ್ನೆ ಸಾಯಂಕಾಲದ ವೇಳೆಗೆ 68,500 ಕ್ಯೂಸೆಕ್ ಏರಿಕೆಯಾಯಿತು. ಇತರ ಜಲಾಶಯಗಳಲ್ಲಿ ಕೂಡ ನೀರಿನ ಒಳಹರಿವು ಮುಂದಿನ ದಿನಗಳಲ್ಲಿ ಏರಿಕೆಯಾಗುವ ಸಾಧ್ಯತೆಯಿದೆ. ಅತಿ ಹೆಚ್ಚಿನ ಒಳಹರಿವು ನಿನ್ನೆ ಲಿಂಗನಮಕ್ಕಿ ಜಲಾಶಯದಲ್ಲಿ ದಾಖಲಾಗಿತ್ತು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


