ರಾಜ್ಯ

ಮಂಡ್ಯ: ಪೋಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು, ಮೂವರು ಪೇದೆಗಳು ಅಮಾನತು

ಪೋಲೀಸ್ ಕಟಡಿಯಲ್ಲಿದ್ದ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಮೂವರು ಪೇದೆಗಳನ್ನು ಅಮಾನತು ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

ಮಂಡ್ಯ: ಪೋಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು, ಮೂವರು ಪೇದೆಗಳು ಅಮಾನತು
ಮಂಡ್ಯ: ಪೋಲೀಸ್ ಕಸ್ಟಡಿಯಲ್ಲಿದ್ದ ವ್ಯಕ್ತಿ ಸಾವು, ಮೂವರು ಪೇದೆಗಳು ಅಮಾನತು
Published On :
ಮಂಡ್ಯ: ಪೋಲೀಸ್ ಕಟಡಿಯಲ್ಲಿದ್ದ ವ್ಯಕ್ತಿ ಮೃತಪಟ್ಟ ಹಿನ್ನೆಲೆಯಲ್ಲಿ ಮೂವರು ಪೇದೆಗಳನ್ನು ಅಮಾನತು ಮಾಡಿದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯದ ಪಶ್ಚಿಮ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಘಟನೆಯಲ್ಲಿ ಮದ್ದೂರು ತಾಲೂಕು ಬೆಳ್ಳೂರು ಗ್ರಾಮದ ಮೂರ್ತಿ (46)  ಗುರುವಾರ ನಡೆದಿದೆ.
ಬೈಕ್ ಕಳ್ಳತನದ ಆರೋಪದಡಿ ಠಾಣೆಗೆ ಕರೆತಂದಿದ್ದ ಮೂರ್ತಿ ತಡರಾತ್ರಿಯ ವೇಳೆ ಅನುಮಾನಾಸ್ಪದ ರೀತಿಯಲ್ಲಿ ಸಾವನ್ನಪ್ಪಿದ್ದಾರೆ. ಸುದ್ದಿ ತಿಳಿದ ಹಿರಿಯ ಅಧಿಕಾರಿಗಳು ತಕ್ಷಣ ಸ್ಥಳಕ್ಕಾಗಮಿಸಿ ಶವವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ.
ಮೃತರ ಸಂಬಂಧಿಗಳು ಆಕ್ರೋಶಗೊಂಡು ಠಾಣೆ ಎದುರು ಪ್ರತಿಭಟನೆ ನಡೆಸಿದ್ದರು. ಸ್ಥಳಕ್ಕೆ ಜಿಲ್ಲಾಧಿಕಾರಿ ಎಸ್. ಮಂಜುಶ್ರೀ ಆಗಮಿಸಿ ಪ್ರತಿಭಟನೆಯಲ್ಲಿ ತೊಡಗಿದವರ ಜತೆ ಮಾತುಕತೆ ನಡೆಸಿದ್ದಾರೆ

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.