ಕಾರಿಗೆ ಬಿಎಂಟಿಸಿ ಬಸ್ ಡಿಕ್ಕಿ; ವ್ಯಕ್ತಿ ಸಾವು
ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಇಬ್ಬರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಸೋಲದೇವನಹಳ್ಳಿಯಲ್ಲಿ ಶನಿವಾರ ನಡೆದಿದೆ...

Published On :
ಬೆಂಗಳೂರು: ವೇಗವಾಗಿ ಬರುತ್ತಿದ್ದ ಬಿಎಂಟಿಸಿ ಬಸ್ ವೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ವ್ಯಕ್ತಿಯೊಬ್ಬ ಮೃತಪಟ್ಟು, ಇಬ್ಬರು ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ಸೋಲದೇವನಹಳ್ಳಿಯಲ್ಲಿ ಶನಿವಾರ ನಡೆದಿದೆ.
ಜಗದೀಶ್ (25) ಮೃತಪಟ್ಟ ವ್ಯಕ್ತಿಯೆಂದು ಗುರ್ತಿಸಲಾಗಿದೆ. ಘಟನೆಯಲ್ಲಿ ಮತ್ತಿಬ್ಬರು ಪ್ರಯಾಣಿಕರೂ ಕೂಡ ಗಾಯಗೊಂಡಿದ್ದು, ಬಿಎಂಟಿಸಿ ಬಸ್ ಚಾಲಕನ ನಿರ್ಲಕ್ಷ್ಯದಿಂದಾಗಿ ದುರ್ಘಟನೆ ಸಂಭವಿಸಿದೆ ಎಂದು ಆರೋಪಿಸಲಾಗಿದೆ.
ಮೃತಪಟ್ಟಿರುವ ಜಗದೀಶ್ ಸೋಮಶೆಟ್ಟಿಹಳ್ಳಿ ನಿವಾಸಿಯಾಗಿದ್ದು, ಟಿ.ದಾಸರಹಳ್ಳಿಯಲ್ಲಿ ಗಾರ್ಮೆಂಟ್ಸ್ ಫ್ಯಾಕ್ಟರಿ ನಡೆಸುತ್ತಿದ್ದರು.
ಹೆಸರಘಟ್ಟಕ್ಕೆ ಬಸ್ ತೆರಳುತ್ತಿದ್ದ ಸಂದರ್ಭದಲ್ಲಿ ನಿನ್ನೆ ಬೆಳಿಗ್ಗೆ 11.30ರ ಸುಮಾರಿಗೆ ಘಟನೆ ಸಂಭವಿಸಿದೆ. ಹುರಳಿಚಿಕ್ಕನಹಳ್ಳಿ ರಸ್ತೆ ಕಡೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಬಸ್ ಮೇಲಿನ ನಿಯಂತ್ರಣವನ್ನು ಚಾಲಕ ಕಳೆದುಕೊಂಡಿದ್ದಾರೆ. ಈ ವೇಳೆ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಗು, ಸ್ಥಳದಲ್ಲಿದ್ದ ಮರವೊಂದಕ್ಕೂ ಡಿಕ್ಕಿ ಹೊಡೆದಿದೆ. ಘಟನೆಯಲ್ಲಿ ಬಸ್ ನಲ್ಲಿದ್ದ ಮಂಜುನಾಥ್ ಹಾಗೂ ರಾಮಚಂದ್ರಪ್ಪ ಎಂಬ ಇಬ್ಬರು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಸುದ್ದಿ ತಿಳಿಯುತ್ತಿದ್ದಂತೆಯೇ ಸ್ಥಳಕ್ಕಾಗಮಿಸಿದ ಜಾಲಹಳ್ಳಿ ಸಂಚಾರಿ ಪೊಲೀಸರು ಸ್ಥಳ ಪರಿಶೀಲನೆ ನಡೆಸಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಿದ್ದಾರೆ. ಘಟನೆಯಲ್ಲಿ ಬಸ್ ಚಾಲಕ ನಾಗೇಶ್ ಆರ್'ಗೆ ಸಣ್ಣಪುಟ್ಟ ಗಾಯಗಳಾಗಿವೆ. ಚಾಲಕನನ್ನು ಪೊಲೀಸರು ವಶಕ್ಕೆ ಪಡೆದುಕೊಂಡು ವಿಚಾರಣೆಗೊಳಪಡಿಸಿದ್ದಾರೆ.
ಬಸ್'ನ್ನು ಅತೀ ವೇಗವಾಗಿ ಚಾಲನೆ ಮಾಡುತ್ತಿದ್ದ ಪರಿಣಾಮ ನಿಯಂತ್ರಣವನ್ನು ಕಳೆದುಕೊಂಡಿದ್ದೆ. ಹೀಗಾಗಿ ಘಟನೆ ಸಂಭವಿಸಿತು ಎಂದು ವಿಚಾರಣೆ ವೇಳೆ ಚಾಲಕ ತಪ್ಪೊಪ್ಪಿಕೊಂಡಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


