ಮಕ್ಕಳ ಕಳ್ಳರು ವದಂತಿ: ಬೀದರ್‌ನಲ್ಲಿ ಹೈದರಾಬಾದ್ ವ್ಯಕ್ತಿಯ ಬರ್ಬರ ಹತ್ಯೆ
ಮಕ್ಕಳ ಕಳ್ಳರ ವದಂತಿ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಹೈದರಾಬಾದ್ ಮೂಲದ ವ್ಯಕ್ತಿಯೋರ್ವನನ್ನು ಸ್ಥಳೀಯರು ಥಳಿಸಿದ್ದು ಪರಿಣಾಮ ಆತ ಮೃತಪಟ್ಟಿದ್ದಾನೆ...

Published On :
ಹೈದರಾಬಾದ್: ಮಕ್ಕಳ ಕಳ್ಳರ ವದಂತಿ ಹಿನ್ನೆಲೆಯಲ್ಲಿ ಬೀದರ್ ನಲ್ಲಿ ಹೈದರಾಬಾದ್ ಮೂಲದ ವ್ಯಕ್ತಿಯೋರ್ವನನ್ನು ಸ್ಥಳೀಯರು ಥಳಿಸಿದ್ದು ಪರಿಣಾಮ ಆತ ಮೃತಪಟ್ಟಿದ್ದಾನೆ.
ಕರ್ನಾಟಕದ ಬೀದರ್ ನ ಮುರ್ಕಿ ಗ್ರಾಮದಲ್ಲಿ 2500ಕ್ಕೂ ಹೆಚ್ಚು ಮಂದಿ ನಾಲ್ವರನ್ನು ತೀವ್ರವಾಗಿ ಥಳಿಸಿದ್ದು ಇದರಲ್ಲಿ ಹೈದರಾಬಾದ್ ಮೂಲದ ವ್ಯಕ್ತಿ ಮೃತಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇನ್ನು ಘಟನೆಯಲ್ಲಿ ನಾಲ್ವರು ಪೊಲೀಸರು ಸಹ ತೀವ್ರವಾಗಿ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಸಾಮಾಜಿಕ ಜಾಲತಾಣ ವಾಟ್ಸ್ಆ್ಯಪ್ ನಲ್ಲಿ ಮಕ್ಕಳ ಕಳ್ಳರು ವದಂತಿ ಮುರ್ಕಿ ಗ್ರಾಮದಲ್ಲಿ ಹರಡಿದ್ದು ಈ ಹಿನ್ನೆಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಜನ ನಾಲ್ವರ ಮೇಲೆ ತೀವ್ರ ಹಲ್ಲೆ ನಡೆಸಿದ್ದು ಪರಿಣಾಮ ಓರ್ವ ಮೃತಪಟ್ಟಿದ್ದಾನೆ.
ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಗ್ರಾಮದ 32 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
hyderabadಹೈದರಾಬಾದ್WhatsappKarnatakaಕರ್ನಾಟಕಬೀದರ್Bidarವಾಟ್ಸ್ಆ್ಯಪ್Child-Kidnapping Rumourಮಕ್ಕಳ ಕಳ್ಳರು ವದಂತಿ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


