ಕಾಲಮಿತಿಯಲ್ಲಿ ಮೆಟ್ರೋ ಯೋಜನೆ ಪೂರ್ಣಗೊಳಿಸಿ: ಬಿಎಂಆರ್ ಸಿಎಲ್ ಗೆ ಪರಮೇಶ್ವರ್ ಸೂಚನೆ
ನಮ್ಮ ಮೆಟ್ರೋದ ಎಲ್ಲ ಯೋಜನೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಬೆಂಗಳೂರು ಮೆಟ್ರೋ ರೈಲು ಅಭಿವೃದ್ದಿ ನಿಗಮಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.

ಬೆಂಗಳೂರು:ನಮ್ಮ ಮೆಟ್ರೋದ ಎಲ್ಲ ಯೋಜನೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ಬೆಂಗಳೂರು ಮೆಟ್ರೋ ರೈಲು ಅಭಿವೃದ್ದಿ ನಿಗಮಕ್ಕೆ ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಉಪಮುಖ್ಯಮಂತ್ರಿಗಳ ಕಚೇರಿಯಲ್ಲಿಂದು ನೂತನ ವ್ಯವಸ್ಥಾಪಕ ನಿರ್ದೇಶಕ ಅಜೇಯ್ ಸೇಠ್ ಅವರೊಂದಿಗೆ ಚರ್ಚೆ ನಡೆಸಿದ ಸಂದರ್ಭದಲ್ಲಿ ಪ್ರಗತಿಯಲ್ಲಿರುವ ಎಲ್ಲ ಯೋಜನೆಗಳನ್ನು ನಿಗದಿತ ಕಾಲಾವಧಿಯಲ್ಲಿ ಪೂರ್ಣಗೊಳಿಸುವಂತೆ ತಿಳಿಸಿದರು.
ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಎಂಆರ್ ಸಿಎಲ್ ನ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಅಜಯ್ ಸೇಠ್ ನೇಮಕಗೊಂಡಿದ್ದು, ಶೀಘ್ರದಲ್ಲಿಯೇ ಎಲ್ಲಾ ಕಾಮಗಾರಿಗಳನ್ನು ಪೂರ್ಣಗೊಳಿಸುವಂತೆ ಸೂಚಿಸಿದ್ದೇನೆ. ಎಲ್ಲ ಯೋಜನೆಗಳು ತ್ವರಿತಗತಿಯಲ್ಲಿ ಆಗಬೇಕು ಎಂದು ತಿಳಿಸಿರುವುದಾಗಿ ಹೇಳಿದರು.
ಸರ್ಕಾರದಿಂದ ಮೆಟ್ರೋಗೆ ಸಂಬಂದಿಸಿದಂತೆ ಹಲವು ಮಂಜೂರಾತಿಗಳು, ಹಣಕಾಸು ಸೌಲಭ್ಯ ದೊರಕಿಸಿಕೊಡುವಂತೆ ಅಜಯ್ ಸೇಠ್ ಮನವಿ ಮಾಡಿದ್ದಾರೆ. ಆ ಕೆಲಸವನ್ನು ಆದಷ್ಟು ಶೀಘ್ರವೇ ಮಾಡಿಕೊಡುವ ಭರವಸೆ ನೀಡಲಾಗಿದೆ. ಬಿಎಂಆರ್ ಸಿಎಲ್ ಕಾಮಗಾರಿಗಳನ್ನು ಚುರುಕುಗೊಳಿಸುವ ಸಂಬಂಧ ಎಲ್ಲಾ ಸಲಹೆ, ಸೂಚನೆಗಳನ್ನು ನೀಡಿರುವುದಾಗಿ ಪರಮೇಶ್ವರ್ ತಿಳಿಸಿದರು
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


