ಮಂಡ್ಯ: ಶಿಕ್ಷಕರ ಕಿರುಕುಳ, ಶಾಲೆಯಲ್ಲೇ ನೇಣಿಗೆ ಶರಣಾದ ವಿದ್ಯಾರ್ಥಿನಿ
ಶಿಕ್ಷಕರು ಕಿರುಕುಳ ನಿಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.

Published On :
ಮಂಡ್ಯ: ಶಿಕ್ಷಕರು ಕಿರುಕುಳ ನಿಡಿದ್ದಾರೆಂದು ಆರೋಪಿಸಿ ವಿದ್ಯಾರ್ಥಿನಿಯೊಬ್ಬಳು ಶಾಲೆಯಲ್ಲೇ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ.
ಮಂಡ್ಯ ಕೆ.ಆರ್ ಪೇಟೆಯ ಕೋಡಿಮರನಹಳ್ಳಿ ಗ್ರಾಮದ ವಿದ್ಯಾರ್ಥಿನಿ ಚೈತನ್ಯ ಶಾಲೆಯಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ವಿದ್ಯಾನಿಕೇತನ್ ಖಾಸಗಿ ಪ್ರೌಢ ಶಾಲೆಯಲ್ಲಿ ಹತ್ತನೇ ತರಗತಿ ಓದುತ್ತಿದ್ದ ಈಕೆಗೆ ಕಡಿಮೆ ಅಂಕ ಗಳಿಸಿದ್ದಳೆಂದು ಶಿಕ್ಷಕರೊಬ್ಬರು ಕಿರುಕುಳ ನೀಡುತ್ತಿದ್ದರೆಂದು ತಿಳಿದುಬಂದಿದೆ.
ಶಿಕ್ಷಕನ ನಿತ್ಯದ ಕಿರುಕುಳದಿಂದ ಬೇಸತ್ತ ಚೈತನ್ಯ ಶಾಲೆಯಲ್ಲೇ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಪ್ರಕರಣ ಬಹಿರಂಗವಾಗುತ್ತಲೇ ಆರೋಪಿ ಶಿಕ್ಷಕ ನಾಪತ್ತೆಯಾಗಿದ್ದಾನೆ.
ಪೋಲೀಸರು ಸ್ಥಳಕ್ಕೆ ತೆರಳಿ ಪರಿಶೀಲನೆ ನಡೆಸಿದ್ದು ಘಟನೆ ಬಗ್ಗೆ ಕಿಕ್ಕೆರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


