ಶಿರೂರು ಶ್ರೀಗಳ ಸಾವಿನ ಬೆನ್ನಲ್ಲೇ, ವೈರಲ್ ಆಗುತ್ತಿದೆ ಈ ವಿಡಿಯೋ!
ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತು ಎನ್ನಲಾಗುತ್ತಿದೆ.

Published On :
ಉಡುಪಿ: ಅಷ್ಟಮಠಗಳಲ್ಲಿ ಒಂದಾಗಿರುವ ಶಿರೂರು ಮಠದ ಮಠಾಧೀಶ ಲಕ್ಷ್ಮೀವರ ತೀರ್ಥ ಸ್ವಾಮೀಜಿ ಅವರ ಸಾವಿನ ಮುನ್ಸೂಚನೆ ಮೊದಲೇ ಸಿಕ್ಕಿತ್ತು ಎನ್ನಲಾಗುತ್ತಿದೆ.
ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ವಿಡಿಯೊವೊಂದು ಹರಿದಾಡುತ್ತಿದ್ದು, ವಿಡಿಯೋದಲ್ಲಿ ಶ್ರೀಗಳು ದೈವದೊಂದಿಗೆ ಅನುಚಿತ ವರ್ತನೆ ತೋರಿದರು. ಇದು ಅವರ ಸಾವಿಗೆ ಕಾರಣ ಎಂಬ ವಾದಗಳು ಹುಟ್ಟಿಕೊಂಡಿವೆ.
ಫೇಸ್ ಬುಕ್ ನಲ್ಲಿ ಹರಿದಾಡುತ್ತಿರುವ ವಿಡಿಯೋ ಪೋಸ್ಟ್ ನಲ್ಲಿರುವಂತೆ ಲಕ್ಷ್ಮೀವರ ತೀರ್ಥರು ಧರ್ಮದೈವವಾದ ಶ್ರೀಕೊಡಮಣಿತ್ತಾಯನ ಉಗ್ರಕೋಪಕ್ಕೆ ಗುರಿಯಾದರೇ ಎಂಬ ಪ್ರಶ್ನೆ ಎದುರಾಗಿದೆ. ಉಡುಪಿಯ ಪಡುಬಿದ್ರೆಯ ಬಾಲುಪೂಜಾರಿ ಎಂಬವರ ಕುಟುಂಬದ ಮನೆಯಲ್ಲಿ ನಡೆದ ಧರ್ಮನೇಮದ ಸಂದರ್ಭದಲ್ಲಿ ಸ್ವಾಮೀಜಿ ಅನುಚಿತ ವರ್ತನೆ ತೋರಿದ್ದರು ಎನ್ನಲಾಗಿದೆ. ಇದೇ ಘಟನೆ ಶ್ರೀಗಳ ಬದುಕಿಗೆ ಕುತ್ತಾಯಿತೇ ಎಂಬ ಪ್ರಶ್ನೆಗಳನ್ನು ಹಾಕಿ ಜನ ವೀಡಿಯೋ ಶೇರ್ ಮಾಡುತ್ತಿದ್ದಾರೆ.
ದರ್ಶನದಲ್ಲಿ ಇರುವಾಗ ಕೊಡಮಣಿತ್ತಾಯ ದೈವದ ಬಳಿ ಮಾತನಾಡುವ ಸ್ವಾಮೀಜಿ, ನೀನು ನನಗೆ ಏನು ಕೊಟ್ಟಿದ್ದೀಯ? ಏನೂ ಕೊಟ್ಟಿಲ್ಲ ಎಂದು ಸನ್ನೆ ಮಾಡಿದ್ದರು. ನಿನ್ನಿಂದ ಏನೂ ಸಹಾಯವಾಗಿಲ್ಲ ಎಂದು ದೈವದ ಮುಂದೆ ಶ್ರೀಗಳು ಹೇಳಿಕೊಂಡಿದ್ದರು ಎಂದು ಹೇಳಿ ಹಲವರು ವಿಡಿಯೋ ಕುರಿತು ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇನ್ನು ಈ ವಿಡಿಯೋ ಇದೀಗ ವ್ಯಾಪಕ ಶೇರ್ ಆಗುತ್ತಿದ್ದು, ವೈರಲ್ ಆಗಿದೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
DeathಸಾವುಉಡುಪಿViral Videoವೈರಲ್ ವಿಡಿಯೋಶಿರೂರು ಮಠShiroor Seer Deadಲಕ್ಷ್ಮೀವರ ತೀರ್ಥ ಸ್ವಾಮಿLakshmivara Theertha Swami
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


