ವಿವಿಧ ಇಲಾಖೆಗಳ ಖಾಲಿ ಹುದ್ದೆಗಳ ಭರ್ತಿಗೆ ಪ್ರಕ್ರಿಯೆ ಶುರುವಾಗಲಿದೆ: ಸಿಎಂ ಟ್ವೀಟ್
ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಪ್ರಕ್ರಿಯೆ ಆರಂಭಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ..

Published On :
ಬೆಂಗಳೂರು: ರಾಜ್ಯದ ವಿವಿಧ ಇಲಾಖೆಗಳಲ್ಲಿ ಖಾಲಿಯಿರುವ ಹುದ್ದೆಗಳನ್ನು ಶೀಘ್ರವೇ ಭರ್ತಿ ಮಾಡಲು ಪ್ರಕ್ರಿಯೆ ಆರಂಭಿಸುವುದಾಗಿ ಮುಖ್ಯಮಂತ್ರಿ ಎಚ್.ಡಿ ಕುಮಾರ ಸ್ವಾಮಿ ಳಿದ್ದಾರೆ.
ಈ ಸಂಬಂಧ ಅಧಿಕೃತವಾಗಿ ಟ್ವೀಟ್ ಮಾಡಿರುವ ಮುಖ್ಯಮಂತ್ರಿಗಳು, ಜಿಲ್ಲೆಯ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆ ಭರ್ತಿ ಮಾಡಲು ಸರ್ಕಾರ ತ್ವರಿತ ಕ್ರಮ ಕೈಗೊಳ್ಳಲಿದೆ. ಸದ್ಯದಲ್ಲೇ ಜಿಲ್ಲೆಯ ಶಾಸಕರು ಮತ್ತು ಅಧಿಕಾರಿಗಳ ಜೊತೆ ವಿಶೇಷ ಸಭೆ ನಡೆಸಿ ನಂತರ ನೇಮಕಾತಿ ಪ್ರಕ್ರಿಯೆ ಆರಂಭಿಸಲಿದ್ದೇವೆ ಎಂದು ಟ್ವೀಟ್ನಲ್ಲಿ ತಿಳಿಸಿದ್ದಾರೆ.
ರಾಜ್ಯದ ವಿವಿಧ ಇಲಾಖೆಗಳ ಖಾಲಿ ಇರುವ ಸುಮಾರು 2,52,625 ಹುದ್ದೆಗಳನ್ನು ಭರ್ತಿ ಮಾಡಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ರಾಜ್ಯ ಸರ್ಕಾರ ತಿಳಿಸಿತ್ತು. ಸದನದಲ್ಲಿ ಕೃಷಿ ಸಚಿವ ಕೃಷ್ಣ ಭೈರೇಗೌಡ ಅವರು ಕೂಡ, ಸದ್ಯದಲ್ಲಿಯೇ 30,152 ಹುದ್ದೆಗಳನ್ನು ಭರ್ತಿ ಮಾಡಲಾಗುವುದು ಎಂದಿದ್ದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
TweetState Governmentರಾಜ್ಯ ಸರ್ಕಾರಟ್ವೀಟ್Jobನೌಕರಿಎಚ್.ಡಿ ಕುಮಾರ ಸ್ವಾಮಿH.D Kumara swamyvacanciesಖಾಲಿ ಇರುವ ಹುದ್ದೆ
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


