ಚಿಕ್ಕೋಡಿಯಲ್ಲಿ ಜು.29ಕ್ಕೆ ಪ್ರಧಾನಿ ಮೋದಿ ಮೆಗಾ ರ್ಯಾಲಿ
ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತರ ವಿಷಯಗಳನ್ನು ...

ಬೆಂಗಳೂರು: ಮುಂದಿನ ವರ್ಷದ ಲೋಕಸಭೆ ಚುನಾವಣೆಯಲ್ಲಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ರೈತರ ವಿಷಯಗಳನ್ನು ಆದ್ಯತೆಯಾಗಿ ತೆಗೆದುಕೊಳ್ಳುವ ಸಾಧ್ಯತೆಯಿದೆ. ಇದಕ್ಕಾಗಿ ಮುಂದಿನ ಎರಡು ತಿಂಗಳು ದೇಶಾದ್ಯಂತ ಸುಮಾರು 50 ರ್ಯಾಲಿಗಳಲ್ಲಿ ಭಾಗವಹಿಸಲಿದ್ದಾರೆ.
ಲೋಕಸಭೆ ಚುನಾವಣೆಯಲ್ಲಿ ಕರ್ನಾಟಕದಿಂದ ಹೆಚ್ಚಿನ ಸ್ಥಾನಗಳನ್ನು ಗೆಲ್ಲಲು ಯತ್ನಿಸುತ್ತಿರುವ ಬಿಜೆಪಿ 28 ಸ್ಥಾನಗಳಲ್ಲಿ ಕನಿಷ್ಠ 20 ಸ್ಥಾನಗಳನ್ನು ಗೆಲ್ಲುವ ವಿಶ್ವಾಸ ಹೊಂದಿದೆ. ಇದಕ್ಕೆ ನಾಂದಿಯಾಗಿ ಪ್ರಧಾನಿ ಮೋದಿಯವರು ಇದೇ ತಿಂಗಳ 29ರಂದು ಚಿಕ್ಕೋಡಿಯಲ್ಲಿ ರೈತರ ಮೆಗಾ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ.
ಜುಲೈ 29ರಂದು ಪ್ರಧಾನಿ ಮೋದಿಯವರು ಚಿಕ್ಕೋಡಿಯಲ್ಲಿ ರ್ಯಾಲಿಯಲ್ಲಿ ಭಾಗವಹಿಸಲಿದ್ದಾರೆ. ಈ ರ್ಯಾಲಿಯು ಲೋಕಸಭೆ ಚುನಾವಣೆಗೆ ಮುನ್ನ ಪಕ್ಷದಲ್ಲಿ ಚೈತನ್ಯ ತುಂಬಲು ಒಂದು ಪ್ರಮುಖ ಹೆಜ್ಜೆಯಾಗಿದೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್ ರವಿಕುಮಾರ್ ತಿಳಿಸಿದ್ದಾರೆ.
ಸುಮಾರು 1 ಲಕ್ಷ ರೈತರು ಈ ರ್ಯಾಲಿಯಲ್ಲಿ ಭಾಗವಹಿಸುವ ನಿರೀಕ್ಷೆಯಿದೆ. ಈ ಮಧ್ಯೆ ಜುಲೈ 28ರಂದು ಬೆಂಗಳೂರಿಗೆ ಭೇಟಿ ನೀಡಬೇಕಾಗಿದ್ದ ಅಮಿತ್ ಶಾ ಅವರ ಭೇಟಿ ಕಾರ್ಯಕ್ರಮ ಮುಂದೂಡಲಾಗಿದ್ದು ಆಗಸ್ಟ್ 10ರ ನಂತರ ಭೇಟಿ ನೀಡಲಿದ್ದಾರೆ. ಸಂಸತ್ತಿನ ಮುಂಗಾರು ಅಧಿವೇಶನ ಮತ್ತು ಪಕ್ಷ ಸಂಬಂಧಿ ಕಾರ್ಯಕ್ರಮಗಳಿಂದಾಗಿ ಅಮಿತ್ ಶಾ ಅವರ ಭೇಟಿ ಮುಂದೂಡಲಾಗಿದೆ ಎಂದು ರವಿಕುಮಾರ್ ತಿಳಿಸಿದ್ದಾರೆ.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


