ರಾಜ್ಯ

ಬಿಜೆಪಿ ಶಾಸಕ ರಾಮದಾಸ್‌ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಕುಮಾರಿ

ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಅವರು ತನಗೆ ಮದುವೆಯಾಗುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು...

ಬಿಜೆಪಿ ಶಾಸಕ ರಾಮದಾಸ್‌ ಕಚೇರಿ ಮುಂದೆ ಆತ್ಮಹತ್ಯೆಗೆ ಯತ್ನಿಸಿದ ಪ್ರೇಮಕುಮಾರಿ
ಎಸ್ ಎ ರಾಮದಾಸ್ - ಪ್ರೇಮಕುಮಾರಿ
Published On :
ಮೈಸೂರು: ಬಿಜೆಪಿ ಶಾಸಕ ಎಸ್ ಎ ರಾಮದಾಸ್ ಅವರು ತನಗೆ ಮದುವೆಯಾಗುದಾಗಿ ಹೇಳಿ ಮೋಸ ಮಾಡಿದ್ದಾರೆ ಎಂದು ಆರೋಪಿಸಿ ಪ್ರೇಮಕುಮಾರಿ ಅವರು ಶಾಸಕರ ಕಚೇರಿ ಮುಂದೆಯೇ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಶನಿವಾರ ನಡೆದಿದೆ.
ಇಂದು ತಮ್ಮ ತಾಯಿ ಜೊತೆ ವಿದ್ಯರಣ್ಯಪುರದಲ್ಲಿರುವ ಬಿಜೆಪಿ ಶಾಸಕರ ಕಚೇರಿಗೆ ಆಗಮಿಸಿದ ಪ್ರೇಮಕುಮಾರಿ, ರಾಮದಾಸ್‌ ಅವರು ನನನ್ನು ಪ್ರೀತಿಸಿ, ಮದುವೆಯಾಗುತ್ತೇನೆ ಎಂದು ಮಾತು ಕೊಟ್ಟಿದ್ದರು. ಆದರೆ ಇದೀಗ ಕೊಟ್ಟ ಮಾತನ್ನು ತಪ್ಪಿದ್ದಾರೆ ಎಂದು ಆರೋಪಿಸಿ ವೇಲ್​ನಿಂದ ಕುತ್ತಿಗೆ ಬಿಗಿದುಕೊಂಡು ಆತ್ಮಹತ್ಯೆಗೆ ಯತ್ನಿಸಿ ಅವಾಂತರ ಸೃಷ್ಟಿಸಿದರು.
ಚುನಾವಣೆ ಸಂದರ್ಭ ನೀಡಿದ್ದ ಮಾತು ತಪ್ಪಿದ್ದಾರೆಂದು ಶಾಸಕರ ವಿರುದ್ಧ ಪ್ರೇಮಕುಮಾರಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಅಲ್ಲದೆ ಮದುವೆ ಮಾಡಿಕೊಳ್ಳುತ್ತೇನೆಂದು ನಂಬಿಸಿ ನಾಮಪತ್ರ ತಡೆದಿದ್ದರು ಎಂದು ಗಂಭೀರ ಆರೋಪ ಮಾಡಿದ್ದಾರೆ. 
ಪೊಲೀಸರ ಮನವೊಲಿಕೆಗೂ ಬಗ್ಗದ ಪ್ರೇಮಕುಮಾರಿ, ನೆಲದ ಮೇಲೆ ಬಿದ್ದು ಉರುಳಾಡಿದ್ದಾರೆ. ಕೊನೆಗೆ ವಿದ್ಯಾರಣ್ಯಪುರಂ ಪೊಲೀಸರು ಪ್ರೇಮಕುಮಾರಿಯನ್ನು ವಶಕ್ಕೆ ಪಡೆದಕೊಂಡಿದ್ದಾರೆ. ಇನ್ನು ಶಾಸಕರ ಬೆಂಬಲಿಗರು ಪ್ರೇಮಕುಮಾರಿ ವಿರುದ್ಧ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.