ಬೆಂಗಳೂರು :ವೀಸಾ ಅವಧಿ ಮುಗಿದಿದ್ದರೂ ಹೆಚ್ಚು ದಿನದಿಂದ ನೆಲೆಸಿದ 107 ಅಪ್ರಿಕನ್ ಪ್ರಜೆಗಳ ಬಂಧನ
ವೀಸಾ ಅವಧಿ ಮುಗಿದಿದ್ದರೂ ಹೆಚ್ಚು ಕಾಲದಿಂದ ನಗರದಲ್ಲಿ ವಾಸಿಸುತ್ತಿದ್ದ 107 ಅಪ್ರಿಕನ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ.

ಬೆಂಗಳೂರು: ವೀಸಾ ಅವಧಿ ಮುಗಿದಿದ್ದರೂ ಹೆಚ್ಚು ಕಾಲದಿಂದ ನಗರದಲ್ಲಿ ವಾಸಿಸುತ್ತಿದ್ದ 107 ಅಪ್ರಿಕನ್ ಪ್ರಜೆಗಳನ್ನು ಪೊಲೀಸರು ಬಂಧಿಸಿದ್ದಾರೆ. ಇವರಲ್ಲಿ ಇಬ್ಬರು ಮಾದಕ ವಸ್ತು ಮಾರಾಟ ಮತ್ತಿತರ ಅಕ್ರಮಗಳಲ್ಲಿ ಭಾಗಿಯಾಗಿರುವುದು ಕಂಡುಬಂದಿದೆ. ಅವರೆಲ್ಲರನ್ನೂ ಗಡಿ ಪಾರು ಮಾಡಲು ಪೊಲೀಸರು ಶಿಫಾರಸ್ಸು ಮಾಡಿದ್ದಾರೆ.
ಬೆಂಗಳೂರನ್ನು ಉಡ್ತಾ ಪಂಜಾಬ್ ಆಗಲು ಬಿಡುವುದಿಲ್ಲ, ಬೇರೆ ಕಡೆಯಿಂದ ಬಂದಂತಹವರು ಮಾದಕ ವಸ್ತುಗಳ ಮಾರಾಟದಲ್ಲಿ ನಿರತರಾಗಿದ್ದಾರೆ ಎಂದು ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ್ ಇತ್ತೀಚಿಗೆ ಹೇಳಿಕೆ ನೀಡಿದ ಬೆನ್ನಲ್ಲೇ ಪೊಲೀಸರು ಕಾರ್ಯಾಚರಣೆ ಕೈಗೊಂಡಿದ್ದಾರೆ.
ವಿದೇಶಿಯರ ಪ್ರಾದೇಶಿಕ ನೋಂದಣಿ ಕಚೇರಿಯಿಂದ ಮಾಹಿತಿ ಪಡೆದು ಆರು ವಿಶೇಷ ತಂಡಗಳನ್ನು ರಚಿಸಿ ವೈಲ್ಡ್ ಫೀಲ್ಡ್ ನ ಪೂರ್ವ, ಪಶ್ಚಿಮ, ನೈರುತ್ಯ, ವಿಭಾಗದ ಮನೆಗಳ ಮೇಲೆ ಕಾರ್ಯಾಚರಣೆ ನಡೆಸಲಾಯಿತು.ಈ ವೇಳೆಯಲ್ಲಿ ವೀಸಾ ಅವಧಿ ಮುಗಿದಿದ್ದರೂ ಹೆಚ್ಚು ಕಾಲದಿಂದ ಅಪ್ರಿಕನ್ ವಿದ್ಯಾರ್ಥಿಗಳು ನಗರದಲ್ಲಿ ನೆಲೆಸಿರುವುದು ಕಂಡುಬಂದಿತ್ತು ಎಂದು ವೈಲ್ಡ್ ಪೀಲ್ಡ್ ಡಿಸಿಪಿ ಅಬ್ದುಲ್ ಅಹದ್ ತಿಳಿಸಿದ್ದಾರೆ.
ಅವರೆಲ್ಲರನ್ನೂ ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಬೆಳಿಗ್ಗೆ 6 ರಿಂದಲೂ 120ಕ್ಕೂ ಹೆಚ್ಚು ಪೊಲೀಸ್ ಸಿಬ್ಬಂದಿಗಳು ಶೋಧ ಕಾರ್ಯಾಚಾರಣೆ ಆರಂಭಿಸುತ್ತಿದ್ದು, ಸಂಜೆಯವರೆಗೂ ನಡೆಯುತ್ತಿದೆ. ತಲಮರೆಸಿಕೊಂಡಿರುವವರ ಹುಡುಕಾಟವನ್ನು ನಡೆಸಲಾಗುತ್ತಿದೆ ಎಂದು ಅವರು ಹೇಳಿದರು.
Follow KannadaPrabha channel on WhatsApp
Subscribe to KannadaPrabha YouTube Channel and watch Videos
Download the KannadaPrabha News app to follow the latest news updates
Subscribe and Receive exclusive content and updates on your favorite topics
Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.


