ರಾಜ್ಯ

ನವೆಂಬರ್ ನಲ್ಲಿ ಟೆಕ್ ಶೃಂಗಸಭೆ ಆಯೋಜಿಸಲಿರುವ ರಾಜ್ಯ ಸರ್ಕಾರ

ನವೆಂಬರ್ 29 ರಿಂದ ಡಿಸೆಂಬರ್ 1 ವರೆಗೆ ರಾಜ್ಯ ಸರ್ಕಾರ ಟೆಕ್ ಶೃಂಗಸಭೆಯನ್ನು ಆಯೋಜಿಸಲಿದೆ.

ನವೆಂಬರ್ ನಲ್ಲಿ ಟೆಕ್ ಶೃಂಗಸಭೆ ಆಯೋಜಿಸಲಿರುವ ರಾಜ್ಯ ಸರ್ಕಾರ
ಸಿಎಂ ಹೆಚ್ ಡಿ ಕುಮಾರಸ್ವಾಮಿ
Published On :
ಬೆಂಗಳೂರು: ನವೆಂಬರ್ 29 ರಿಂದ ಡಿಸೆಂಬರ್ 1 ವರೆಗೆ ರಾಜ್ಯ ಸರ್ಕಾರ ಟೆಕ್ ಶೃಂಗಸಭೆಯನ್ನು ಆಯೋಜಿಸಲಿದೆ. 
ಇನ್ನೋವೇಶನ್ ಮತ್ತು ಇಂಪ್ಯಾಕ್ಟ್' ಟೆಕ್ ಶೃಂಗಸಭೆಯ ವಿಷಯವಾಗಿರಲಿದೆ ಎಂದು  ವಿಜ್ಞಾನ ಮತ್ತು ತಂತ್ರಜ್ಞಾನ, ಬೃಹತ್ ಮತ್ತು ಮಧ್ಯಮ ಕೈಗಾರಿಕೆಗಳ ಸಚಿವ ಕೆಜೆ ಜಾರ್ಜ್ ಮಾಧ್ಯಮಗಳಿಗೆ ತಿಳಿಸಿದ್ದಾರೆ. 
ಜೈವಿಕ ತಂತ್ರಜ್ಞಾನಕ್ಕೆ ಸಂಬಂಧಿಸಿದ ವಿಷನ್ ಗ್ರೂಪ್ ಮಾರ್ಗದರ್ಶನದಲ್ಲಿ ಶೃಂಗಸಭೆ ಆಯೋಜನೆಯಾಗಲಿದ್ದು, ಕೃತಕ ಬುದ್ಧಿಮತ್ತೆ ಹಾಗೂ ಇಂಟರ್ ನೆಟ್ ಆಫ್ ಥಿಂಗ್ಸ್ ಸೇರಿದಂತೆ ಈಗಿನ ತಂತ್ರಜ್ಞಾನ ಕೇಂದ್ರಿತವಾಗಿರಲಿದೆ ಎಂದು ಐಟಿ/ಬಿಟಿ ಇಲಾಖೆಯ ಪ್ರಧಾನ ಕಾರ್ಯದರ್ಶಿ ಗೌರವ್ ಗುಪ್ತಾ ಹೇಳಿದ್ದಾರೆ. 
ಬಯೋತಂತ್ರಜ್ಞಾನ, ನ್ಯಾನೋ ತಂತ್ರಜ್ಞಾನ ಸೇರಿದಂತೆ ಸಂಶೋಧನಾ ಸಹಯೋಗಗಳಿಗೆ ಬಹುರಾಷ್ಟ್ರೀಯ ಸಂಸ್ಥೆಗಳಿಗೆ ಆಹ್ವಾನ ನೀಡಲಾಗುವುದು ಎಂದು ಗೌರವ್ ಗುಪ್ತಾ ಮಾಹಿತಿ ನೀಡಿದ್ದಾರೆ.  ಈ ಬಾರಿಯ ಟೆಕ್ ಶೃಂಗಸಭೆಯಲ್ಲಿ ನೀತಿ ಆಯೋಗದ ಪ್ರತಿಲ್ನಿಧಿಗಳೂ ಸಹ ಭಾಗಿಯಾಗಲಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.